ನ್ಯಾಯಮೂರ್ತಿಗಳಿಬ್ಬರ ಸಂಘರ್ಷದ ಪ್ರಕರಣ : ಕಲ್ಕತ್ತಾ ಹೈಕೋರ್ಟ್‌ ವಿಚಾರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸೀಟು ಪಡೆಯಲು ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಗಳ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದು (ಶನಿವಾರ) ವಿಶೇಷ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಹಗರಣಕ್ಕೆ ಸಂಬಂಧಪಟ್ಟಂತೆ ಕಲ್ಕತ್ತಾ ಹೈಕೋರ್ಟ್‌ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳಿಗೆ ತಡೆ ನೀಡಿದೆ. … Continued

ಗೋಕರ್ಣ ಮಹಾಬಲೇಶ್ವರ ದೇಗುಲ ಮೇಲ್ವಿಚಾರಣಾ ಸಮಿತಿಯ ಸದಸ್ಯರ ಬದಲಾವಣೆ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಚಟುವಟಿಕೆಗಳ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ನಾಲ್ವರು ಸದಸ್ಯರನ್ನು ತೆಗೆದುಹಾಕಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಮೇಲ್ವಿಚಾರಣಾ ಸಮಿತಿಯಲ್ಲಿದ್ದ ಇಬ್ಬರು ಉಪಾಧಿವಂತರಯ ಹಾಗೂ ಇಬ್ಬರು ವಿದ್ವಾಂಸರನ್ನು ಬದಲಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದುಪಡಿಸಿದೆ. ಮಠದ ಮೇಲ್ವಿಚಾರಣಾ ಸಮಿತಿಯ ನಾಲ್ವರು … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಸದ ಸಂಜಯ್ ಸಿಂಗ್ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಈ ವೇಳೆ ಮಧ್ಯಂತರ ಪರಿಹಾರ ಕೋರಿ ಈ ಇಬ್ಬರೂ ಸಲ್ಲಿಸಿರುವ ಮನವಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್‌. … Continued

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣ : 11 ಅಪರಾಧಿಗಳು 2 ವಾರದೊಳಗೆ ಶರಣಾಗಬೇಕು ; ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹನ್ನೊಂದು ಅಪರಾಧಿಗಳನ್ನು ಎರಡು ವಾರಗಳಲ್ಲಿ ಮತ್ತೆ ಜೈಲಿಗೆ ಹಾಕುವಂತೆ ಸುಪ್ರೀಂ ಕೋರ್ಟ್ ಸೋಮವಾರ ತನ್ನ ಆದೇಶದಲ್ಲಿ ಹೇಳಿದೆ. ಹನ್ನೊಂದು ಅಪರಾಧಿಗಳಿಗೆ ತನ್ನ ಕ್ಷಮಾದಾನ ನೀತಿ ಅನ್ವಯಿಸುವ ಅಧಿಕಾರ ಗುಜರಾತ ಸರ್ಕಾರಕ್ಕೆ ಇಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ … Continued

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ : 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಗುಜರಾತ್‌ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಲ್ಲಿ 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ  ಮತ್ತು ಆಕೆಯ ಕುಟುಂಬವನ್ನು ಏಳು ಜನರನ್ನು ಹತ್ಯೆ ಮಾಡಿದ 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ  ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಅಂತಹ ನಿರ್ಧಾರವನ್ನು ತೆಗೆದುಕೊಳ್ಳಲು ಗುಜರಾತ್‌ ಸರ್ಕಾರ “ಸಮರ್ಥವಾಗಿಲ್ಲ” ಎಂದು … Continued

ಸರ್ಕಾರಿ ಅಧಿಕಾರಿಗಳಿಗೆ ಸಮನ್ಸ್‌: ಎಸ್ಒಪಿ ರೂಪಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸರ್ಕಾರಿ ಅಧಿಕಾರಿಗಳಿಗೆ ಸಮನ್ಸ್ ನೀಡುವಾಗ ನ್ಯಾಯಾಲಯಗಳು ಪಾಲಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಹಾಗೂ ಹಾಗೂ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಲ್ಲದೆ, ಅಧಿಕಾರಿಗಳನ್ನು ಅಪಮಾನಿಸದಂತೆ ಹಾಗೂ ಉಡುಗೆ ತೊಡುಗೆಗಳ ಬಗ್ಗೆ ಅನಗತ್ಯ ಟೀಕೆ ಮಾಡದಂತೆ ನ್ಯಾಯಾಲಯಗಳಿಗೆ ಸೂಚಿಸಿದೆ. ಎಸ್‌ಒಪಿಯನ್ನು ಎಲ್ಲಾ ಹೈಕೋರ್ಟ್‌ಗಳು ಪಾಲಿಸಬೇಕಿದ್ದು ಅಧಿಕಾರಿಗಳಿಗೆ ಮನಬಂದಂತೆ ಸಮನ್ಸ್‌ ನೀಡಬಾರದು ಎಂದು ಭಾರತದ … Continued

ಸಂವಿಧಾನದ 370ನೇ ವಿಧಿ ರದ್ದತಿ: ಡಿಸೆಂಬರ್‌ 11ಕ್ಕೆ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟ

  ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿ 2019ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 11ರಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಸಂಜಯ ಕಿಶನ್‌ ಕೌಲ್‌, ಸಂಜೀವ ಖನ್ನಾ, ಬಿ.ಆರ್‌. … Continued

26 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿವಾಹಿತ ಮಹಿಳೆಯ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವೈದ್ಯಕೀಯ ಗರ್ಭಪಾತ ಕಾಯಿದೆ- 1971ರ ಪ್ರಕಾರ (ಎಂಟಿಪಿ ಕಾಯಿದೆ) ವಿಧಿಸಲಾದ 24 ವಾರಗಳ ಮಿತಿ ದಾಟಿ ಬೆಳೆದಿರುವ ಭ್ರೂಣದ ಗರ್ಭಪಾತ ಮಾಡಬೇಕೆಂಬ ವಿವಾಹಿತ ಮಹಿಳೆಯ ಮನವಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ವೈದ್ಯಕೀಯ ವರದಿ ಆಧಾರದ ಮೇಲೆ ಸೋಮವಾರ ತಿರಸ್ಕರಿಸಿದೆ. ಸೆಪ್ಟೆಂಬರ್ 2022 ರಲ್ಲಿ ಮಹಿಳೆಯು ಹಿಂದಿನ ಹೆರಿಗೆಯ ನಂತರ ಪ್ರಸವಾನಂತರದ ಮನೋರೋಗದಿಂದ ಬಳಲುತ್ತಿದ್ದರು. … Continued

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿ ವಿಚಾರಣೆ ನಡೆಸಿದ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠವು, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು … Continued

ಸಂಸದರು, ಶಾಸಕರ ವಿರುದ್ಧದ ಪ್ರಕರಣಗಳ ತನಿಖೆ ವಿಳಂಬ: ತನಿಖಾ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್. ವಿ. ರಮಣ ಅವರು ಸಂಸದರು ಮತ್ತು ಶಾಸಕರನ್ನು ಒಳಗೊಂಡ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸುವಲ್ಲಿ ವಿಳಂಬವಾದ ಕಾರಣ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಯನ್ನು ತರಾಟೆಗೆ ತೆಗೆದುಕೊಂಡರು. ತನಿಖೆಯಲ್ಲಿ ಏನಾದರೂ ಇದ್ದರೆ, ಆರೋಪಪಟ್ಟಿ ಸಲ್ಲಿಸಿ. ಅದನ್ನು ನೇತು ಹಾಕಬೇಡಿ” ಎಂದು ಮುಖ್ಯ ನ್ಯಾಯಮೂರ್ತಿ … Continued