ಸರ್ಕಾರಿ ಅಧಿಕಾರಿಗಳಿಗೆ ಸಮನ್ಸ್‌: ಎಸ್ಒಪಿ ರೂಪಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸರ್ಕಾರಿ ಅಧಿಕಾರಿಗಳಿಗೆ ಸಮನ್ಸ್ ನೀಡುವಾಗ ನ್ಯಾಯಾಲಯಗಳು ಪಾಲಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಹಾಗೂ ಹಾಗೂ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಲ್ಲದೆ, ಅಧಿಕಾರಿಗಳನ್ನು ಅಪಮಾನಿಸದಂತೆ ಹಾಗೂ ಉಡುಗೆ ತೊಡುಗೆಗಳ ಬಗ್ಗೆ ಅನಗತ್ಯ ಟೀಕೆ ಮಾಡದಂತೆ ನ್ಯಾಯಾಲಯಗಳಿಗೆ ಸೂಚಿಸಿದೆ. ಎಸ್‌ಒಪಿಯನ್ನು ಎಲ್ಲಾ ಹೈಕೋರ್ಟ್‌ಗಳು ಪಾಲಿಸಬೇಕಿದ್ದು ಅಧಿಕಾರಿಗಳಿಗೆ ಮನಬಂದಂತೆ ಸಮನ್ಸ್‌ ನೀಡಬಾರದು ಎಂದು ಭಾರತದ … Continued

ಸಂವಿಧಾನದ 370ನೇ ವಿಧಿ ರದ್ದತಿ: ಡಿಸೆಂಬರ್‌ 11ಕ್ಕೆ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟ

  ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿ 2019ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 11ರಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಸಂಜಯ ಕಿಶನ್‌ ಕೌಲ್‌, ಸಂಜೀವ ಖನ್ನಾ, ಬಿ.ಆರ್‌. … Continued

26 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿವಾಹಿತ ಮಹಿಳೆಯ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವೈದ್ಯಕೀಯ ಗರ್ಭಪಾತ ಕಾಯಿದೆ- 1971ರ ಪ್ರಕಾರ (ಎಂಟಿಪಿ ಕಾಯಿದೆ) ವಿಧಿಸಲಾದ 24 ವಾರಗಳ ಮಿತಿ ದಾಟಿ ಬೆಳೆದಿರುವ ಭ್ರೂಣದ ಗರ್ಭಪಾತ ಮಾಡಬೇಕೆಂಬ ವಿವಾಹಿತ ಮಹಿಳೆಯ ಮನವಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ವೈದ್ಯಕೀಯ ವರದಿ ಆಧಾರದ ಮೇಲೆ ಸೋಮವಾರ ತಿರಸ್ಕರಿಸಿದೆ. ಸೆಪ್ಟೆಂಬರ್ 2022 ರಲ್ಲಿ ಮಹಿಳೆಯು ಹಿಂದಿನ ಹೆರಿಗೆಯ ನಂತರ ಪ್ರಸವಾನಂತರದ ಮನೋರೋಗದಿಂದ ಬಳಲುತ್ತಿದ್ದರು. … Continued

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿ ವಿಚಾರಣೆ ನಡೆಸಿದ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠವು, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು … Continued

ಸಂಸದರು, ಶಾಸಕರ ವಿರುದ್ಧದ ಪ್ರಕರಣಗಳ ತನಿಖೆ ವಿಳಂಬ: ತನಿಖಾ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್. ವಿ. ರಮಣ ಅವರು ಸಂಸದರು ಮತ್ತು ಶಾಸಕರನ್ನು ಒಳಗೊಂಡ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸುವಲ್ಲಿ ವಿಳಂಬವಾದ ಕಾರಣ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಯನ್ನು ತರಾಟೆಗೆ ತೆಗೆದುಕೊಂಡರು. ತನಿಖೆಯಲ್ಲಿ ಏನಾದರೂ ಇದ್ದರೆ, ಆರೋಪಪಟ್ಟಿ ಸಲ್ಲಿಸಿ. ಅದನ್ನು ನೇತು ಹಾಕಬೇಡಿ” ಎಂದು ಮುಖ್ಯ ನ್ಯಾಯಮೂರ್ತಿ … Continued