ನ್ಯಾಯಮೂರ್ತಿ ಯಶವಂತ ವರ್ಮಾ ಅಲಹಾಬಾದ್ ಹೈಕೋರ್ಟ್‌ ಗೆ ವರ್ಗಾವಣೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಅವರ ಮೂಲ ಹೈಕೋರ್ಟ್‌ ಆದ ಅಲಹಾಬಾದ್ ಹೈಕೋರ್ಟಿಗೆ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಅವರಿಗೆ ನ್ಯಾಯಾಂಗ ಕಾರ್ಯ ವಹಿಸದಂತೆ ಅಲಾಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಮಾರ್ಚ್ 24 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸಿನ ಮೇರೆಗೆ … Continued

ಅಲಾಹಾಬಾದ್‌ ಹೈಕೋರ್ಟಿಗೆ ನ್ಯಾಯಮೂರ್ತಿ ವರ್ಮಾ ವರ್ಗಾವಣೆ ಮಾಡಲು ಕೊಲಿಜಿಯಂ ನಿರ್ಧಾರ

ನವದೆಹಲಿ : ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಮರಳಿ ಅವರ ಮಾತೃ ಸಂಸ್ಥೆಯಾದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನಿರ್ಧರಿಸಿದೆ. ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾದ ನಂತರ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್‌ 20 … Continued

ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

ನಗದು ದೊರೆತಿಲ್ಲ, ಇದು ನನ್ನನ್ನು ಸಿಲುಕಿಸಲು ಪಿತೂರಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ

ನವದೆಹಲಿ: ಬೆಂಕಿ ಆಕಸ್ಮಿಕಕ್ಕೆ ತುತ್ತಾದ ದೆಹಲಿಯ ತಮ್ಮ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪ ತಮ್ಮ ಮೇಲೆ ಸುಳ್ಳು ಆಪಾದನೆ ಮತ್ತು ಅಪಪ್ರಚಾರದ ಪಿತೂರಿಯ ಭಾಗ ಎಂದು ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಹೇಳಿದ್ದಾರೆ. ತನಿಖೆಗಾಗಿ ವಿವಿಧ ಹೈಕೋರ್ಟ್‌ಗಳ ಮೂವರು ನ್ಯಾಯಮೂರ್ತಿಗಳನ್ನು ನೇಮಿಸಲಾಗಿದ್ದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಲ್ಲಿಸಿದ ವರದಿ … Continued

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ … Continued

ನ್ಯಾಯಮೂರ್ತಿ ವರ್ಮಾ ಅವರನ್ನು ಇನ್ನೂ ವರ್ಗಾವಣೆ ಮಾಡಿಲ್ಲ, ಆಂತರಿಕ ತನಿಖೆಗೂ ಇದಕ್ಕೂ ಸಂಬಂಧವಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡುವುದಕ್ಕೂ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಸಿಕ್ಕಿದೆ ಎನ್ನಲಾದ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಸ್ಥಾಪಿತ ಕಾರ್ಯವಿಧಾನಗಳ ಪ್ರಕಾರ ಈ ವಿಷಯದ ಬಗ್ಗೆ ಆಂತರಿಕ ವಿಚಾರಣೆ ನಡೆಸಲಾಗುತ್ತಿದೆ ಮತ್ತು ವರ್ಗಾವಣೆ ನಿರ್ಧಾರವು ನಡೆಯುತ್ತಿರುವ … Continued

ನ್ಯಾಯಮೂರ್ತಿಗಳ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಆರೋಪ : ಆಂತರಿಕ ತನಿಖೆಗೆ ಮುಂದಾದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್‌(Delhi High Court) ನ್ಯಾಯಮೂರ್ತಿ ಯಶವಂತ ವರ್ಮಾ(Yashwant Verma) ಅವರ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡದ ವೇಳೆ ಅವರ ಅಧಿಕೃತ ನಿವಾಸದಲ್ಲಿ ಹಣದ ರಾಶಿಯೇ ಪತ್ತೆಯಾಗಿದೆ. ಅಧಿಕೃತ ಬಂಗಲೆಯಲ್ಲಿ ಲೆಕ್ಕಕ್ಕೆ ಸಿಗದ ಹಣದ ರಾಶಿ ಪತ್ತೆಯಾದ ನಂತರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರು ಈಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ದೆಹಲಿ ಹೈಕೋರ್ಟ್ … Continued

ಡಿನೋಟಿಫಿಕೇಷನ್ ಪ್ರಕರಣ : ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌, ಎದುರಾಯ್ತು ಸಂಕಷ್ಟ

ನವದೆಹಲಿ: ನವದೆಹಲಿ: ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಬೆಂಗಳೂರಿನ ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ ರದ್ದುಪಡಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿದೆ. ಇದರಿಂದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. 2018ರಲ್ಲಿ ತಿದ್ದುಪಡಿಯಾಗಿರುವ ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ … Continued

ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? : ರಣವೀರ್ ಅಲಹಾಬಾದಿಯಾಗೆ ‘ಸುಪ್ರೀಂ ಕೋರ್ಟ್‌’ ಕೆಂಡಾಮಂಡಲ

ನವದೆಹಲಿ: ಇಂಡಿಯಾ’ಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ನೀಡಿದ ಅಶ್ಲೀಲ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಅಸ್ಸಾಂ ಹಾಗೂ ರಾಜಸ್ಥಾನದಲ್ಲಿ ಯೂಟ್ಯೂಬರ್‌ ರಣವೀರ್‌ ಅಲಹಾಬಾದಿಯಾ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ತಡೆ ನೀಡಿದೆ. ಆದರೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಣವೀರ್‌ ಅಲಹಾಬಾದಿಯಾ ಹೇಳಿಕೆಗಳ ಬಗ್ಗೆ … Continued

ಇವಿಎಂ ಡೇಟಾಗಳನ್ನು ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಇವಿಎಂ(EVM) ದತ್ತಾಂಶಗಳನ್ನು‌( ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ (Supreme Court) ಚುನಾವಣಾ ಆಯೋಗಕ್ಕೆ ಮಂಗಳವಾರ(ಫೆ.11) ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದ್ದು, ಸದ್ಯಕ್ಕೆ ಇವಿಎಂನಿಂದ ಯಾವುದೇ ದತ್ತಾಂಶ ಅಳಿಸಬೇಡಿ ಅಥವಾ ಯಾವುದೇ … Continued