ಇ.ಡಿ. ಬಂಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇ.ಡಿ. ಹಾಜರುಪಡಿಸಿದಾಗ ಅವರ ರಿಮಾಂಡ್‌ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ … Continued

ಶರದ್ ಪವಾರ್ ಬಣಕ್ಕೆ ನೂತನ ಚಿಹ್ನೆ ಬಳಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ :ಮುಂಬರುವ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ‘ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿ ಶರದ್ ಚಂದ್ರ ಪವಾರ್ ಬಣವು ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ನೂತನ ಚಿಹ್ನೆಯನ್ನು ಬಳಸಲು ಇಂದು, ಮಂಗಳವಾರ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಶರದ್ ಪವಾರ್ ಬಣಕ್ಕೆ ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ಚಿಹ್ನೆಯನ್ನು ಕಾಯ್ದಿರಿಸುವಂತೆ ಭಾರತೀಯ ಚುನಾವಣಾ … Continued

ಸಿಎಎಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಏಪ್ರಿಲ್ 8 ರ ವರೆಗೆ ನ್ಯಾಯಾಲಯವು ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶವನ್ನು ನೀಡಿದೆ. ಈ ಕುರಿತು … Continued

ಶೋಕಾಸ್ ನೋಟಿಸ್‌ಗೆ ಉತ್ತರಿಸದ ಬಾಬಾ ರಾಮದೇವ: ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಪತಂಜಲಿ ಉತ್ಪನ್ನಗಳ ಬಗ್ಗೆ ಜನಸಾಮಾನ್ಯರನ್ನು ದಾರಿತಪ್ಪಿಸುವ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಹೂಡಲಾದ ನ್ಯಾಯಾಂಗ ನಿಂದನೆ ಮೊಕದ್ದಮೆಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲು ವಿಫಲವಾದ ಬಾಬಾ ರಾಮದೇವ ಅವರು ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು … Continued

ಎಸ್‌ಬಿಐ ನೀಡಿದ ಚುನಾವಣಾ ಬಾಂಡ್‌ಗಳ ಡೇಟಾ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್

ನವದೆಹಲಿ : ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯತ್ತ ಒಂದು ದೊಡ್ಡ ಕ್ರಮದಲ್ಲಿ, ಭಾರತೀಯ ಚುನಾವಣಾ ಆಯೋಗವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಚುನಾವಣಾ ಬಾಂಡ್‌ಗಳ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಗಡುವಿಗೆ ಒಂದು ದಿನ ಮುಂಚಿತವಾಗಿ ಗುರುವಾರ ವಿವರಗಳನ್ನು ಅಪ್‌ಲೋಡ್ ಮಾಡಲಾಗಿದೆ. ಡೇಟಾವು – ₹ 1 ಲಕ್ಷ, ₹ 10 ಲಕ್ಷ … Continued

ಪೌರತ್ವ ತಿದ್ದುಪಡಿ ನಿಯಮಾವಳಿ- 2024ಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್

ನವದೆಹಲಿ : ಸೋಮವಾರದಿಂದ ಜಾರಿಗೆ ಬಂದಿರುವ ಪೌರತ್ವ (ತಿದ್ದುಪಡಿ) ನಿಯಮಾವಳಿ-2024ಕ್ಕೆ ತಡೆ ನೀಡುವಂತೆ ಕೋರಿ ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) 2019 ಕುರಿತು ಸೋಮವಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಎಎಗೆ ಸಂಸತ್ತು 2019ರಲ್ಲಿ ಅಂಗೀಕಾರ ನೀಡಿದಾಗ ಸುಪ್ರೀಂ ಕೋರ್ಟ್‌ನಲ್ಲಿ … Continued

ಇ.ಡಿ.ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಕಲ್ಕತ್ತಾ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ (ಇ ಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇದೇ ವೇಳೆ ನ್ಯಾಯಮೂರ್ತಿಗಳಾದ … Continued

ಚುನಾವಣಾ ಬಾಂಡ್‌ : ಎಸ್‌ಬಿಐ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್; ನಾಳೆಯೊಳಗೆ ವಿವರ ಸಲ್ಲಿಸಲು ಸೂಚನೆ

ನವದೆಹಲಿ: ಏಪ್ರಿಲ್‌ 2019ರಿಂದ ಈವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ನೀಡಲು ವಿಧಿಸಲಾಗಿರುವ ಗಡುವನ್ನು ಜೂನ್ 30ರವರೆಗೆ ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಮಂಗಳವಾರ(ಮಾರ್ಚ್ 12)ದೊಳಗೆ ವಿವರ ಬಹಿರಂಗಪಡಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ … Continued

ಡಿಕೆ ಶಿವಕುಮಾರಗೆ ಬಹುದೊಡ್ಡ ರಿಲೀಫ್‌..: ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಜಾಗೊಳಿಸಿದೆ. ಈ ಪ್ರಕರಣವು ತೆರಿಗೆ ವಂಚನೆ ಮತ್ತು ಕೋಟ್ಯಂತರ ಮೌಲ್ಯದ ಹವಾಲಾ ವ್ಯವಹಾರದ ಆರೋಪಗಳಿಗೆ ಸಂಬಂಧಿಸಿದೆ. ಈ ಪ್ರಕರಣಕ್ಕೆ … Continued

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಉದಯನಿಧಿ ಸ್ಟಾಲಿನ್‌ ಮೇಲೆ ಸುಪ್ರೀಂ ಕೋರ್ಟ್‌ ಗರಂ

ನವದೆಹಲಿ: ಕಳೆದ ವರ್ಷ ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸ್ಟಾಲಿನ್ ಅವರು ಸಂವಿಧಾನದ 19 (1) (ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು 25 ವಿಧಿ (ಆತ್ಮಸಾಕ್ಷಿಯ ಸ್ವಾತಂತ್ರ್ಯ ಮತ್ತು ಧರ್ಮದೆಡೆಗಿನ … Continued