ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಉದಯನಿಧಿ ಸ್ಟಾಲಿನ್‌ ಮೇಲೆ ಸುಪ್ರೀಂ ಕೋರ್ಟ್‌ ಗರಂ

ನವದೆಹಲಿ: ಕಳೆದ ವರ್ಷ ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸ್ಟಾಲಿನ್ ಅವರು ಸಂವಿಧಾನದ 19 (1) (ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು 25 ವಿಧಿ (ಆತ್ಮಸಾಕ್ಷಿಯ ಸ್ವಾತಂತ್ರ್ಯ ಮತ್ತು ಧರ್ಮದೆಡೆಗಿನ … Continued

ಸದನದಲ್ಲಿ ಭಾಷಣ-ಮತಕ್ಕಾಗಿ ಲಂಚ : ಸಂಸದರು-ಶಾಸಕರಿಗೆ ಯಾವುದೇ ವಿನಾಯ್ತಿ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು, 1998ರ ತೀರ್ಪು ರದ್ದು

ನವದೆಹಲಿ: ಸಂಸದರು (ಎಂಪಿಗಳು) ಮತ್ತು ವಿಧಾನಸಭೆಗಳ ಸದಸ್ಯರು (ಎಂಎಲ್‌ಎಗಳು) ಲಂಚ ಪಡೆದ ಆರೋಪ ಬಂದಾಗ ಸಂವಿಧಾನದ 105 ಮತ್ತು 194 ನೇ ವಿಧಿಯ ಅಡಿಯಲ್ಲಿ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ … Continued

ಇ.ಡಿ. ಸಮನ್ಸ್‌ ನೀಡಿದರೆ ಹಾಜರಾಗಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಸಮನ್ಸ್ ಪಡೆದ ವ್ಯಕ್ತಿ ತನಿಖೆ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ.) ಹೊರಡಿಸಿದ ಸಮನ್ಸ್‌ಗಳನ್ನು ಗೌರವಿಸಿ ಅವುಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಪಿಎಂಎಲ್ಎಯ ಸೆಕ್ಷನ್ 50 ರ ಪ್ರಕಾರ, ತನಿಖೆಯ ಅಗತ್ಯವಿದೆ ಎಂದು ಪರಿಗಣಿಸುವ ಯಾವುದೇ … Continued

ಮುರುಘಾ ಮಠದ ಆಡಳಿತ ನಿರ್ವಹಣೆಗೆ 3 ದಿನದಲ್ಲಿ ಸಮಿತಿ ರಚಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಎಚ್‌.ಏಕಾಂತಯ್ಯ (ಅರ್ಜಿದಾರ) ಅವರನ್ನು ಹೊರಗಿಟ್ಟು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂದು ಮಂಗಳವಾರ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಚ್‌. ಏಕಾಂತಯ್ಯ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು … Continued

ಪತಂಜಲಿ ಔಷಧ ಜಾಹೀರಾತಿಗೆ ತಾತ್ಕಾಲಿಕ ನಿರ್ಬಂಧ ಹೇರಿದ ಸುಪ್ರೀಂ ಕೋರ್ಟ್ : ಪತಂಜಲಿ ಆಯುರ್ವೇದಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌

ನವದೆಹಲಿ: ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ತನ್ನ ಔಷಧಿಗಳು ಕೆಲವು ರೋಗಗಳನ್ನು ಗುಣಪಡಿಸುತ್ತವೆ ಎಂದು ಯಾವುದೇ ಪ್ರಾಯೋಗಿಕ ಸಾಕ್ಷ್ಯಗಳಿಲ್ಲದಿದ್ದರೂ ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡುವ ಮೂಲಕ ಪತಂಜಲಿ ದೇಶದ ಜನರ ದಿಕ್ಕುತಪ್ಪಿಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ ತೀವ್ರ ಅಸಮಾಧಾನ … Continued

‘ತಪ್ಪು ಮಾಡಿದ್ದೇನೆ….’: ವೀಡಿಯೊ ರಿಟ್ವೀಟ್ ಮಾಡಿದ್ದಕ್ಕೆ ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲ್ ತಪ್ಪೊಪ್ಪಿಗೆ

ನವದೆಹಲಿ: ಯೂ ಟ್ಯೂಬರ್ ಧ್ರುವ ರಾಥಿ ಅವರು ಪೋಸ್ಟ್ ಮಾಡಿದ ಮಾನಹಾನಿಕರ ವೀಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. “ನಾನು ರಿಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ನಾನು ಹೇಳಬಲ್ಲೆ” ಎಂದು ಅವರು ಹೇಳಿದರು. ಕೇಜ್ರಿವಾಲ್ ಪರ ಹಿರಿಯ ವಕೀಲ … Continued

ಬಿಜೆಪಿಗೆ ದೊಡ್ಡ ಹಿನ್ನಡೆ : ಎಎಪಿ ಅಭ್ಯರ್ಥಿಯನ್ನು ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ : ಹಿಂದಿನ ಫಲಿತಾಂಶ ರದ್ದು

ನವದೆಹಲಿ: ಚಂಡೀಗಢ ಮೇಯರ್‌ ಚುನಾವಣೆ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದೊಡ್ಡ ಹಿನ್ನಡೆಯಾಗಿದ್ದು, ಚಂಡೀಗಢದ ಆಮ್‌ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಕುಲದೀಪಕುಮಾರ ಅವರನ್ನು ವಿಜಯಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಜಾಹೀರಾತು ಚಂಡೀಗಢದ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದ ಚುನಾವಣಾಧಿಕಾರಿಯ (ಆರ್‌ಒ- ರಿಟರ್ನಿಂಗ್‌ ಆಫೀಸರ್‌) ಅನಿಲ ಮಸೀಹ್‌ ಅವರ ನಿರ್ಧಾರವನ್ನು … Continued

ಚಂಡೀಗಢ ಮೇಯರ್ ಚುನಾವಣೆ : “ನೀವು ಮತಪತ್ರದ ಮೇಲೆ X ಮಾರ್ಕ್ ಏಕೆ ಹಾಕಿದ್ದೀರಿ?” : ಚುನಾವಣಾ ಅಧಿಕಾರಿ ಬೆವರಿಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಆರೋಪಿತ ಪ್ರಕರಣದಲ್ಲಿ ಚುನಾವಣಾಧಿಕಾರಿ (ಆರ್‌ ಒ- ರಿಟರ್ನಿಂಗ್‌ ಆಫೀಸರ್‌) ಅನಿಲ ಮಾಸಿಹ್ ಅವರನ್ನು ಸುಪ್ರೀಂ ಕೋರ್ಟ್‌ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಮತ ಎಣಿಸಬೇಕಿದ್ದ ಅಧಿಕಾರಿ ಮತಪತ್ರಗಳಲ್ಲಿ ಟಿಕ್‌ ಮತ್ತು ಇಂಟೂ ಮಾರ್ಕ್‌ಗಳನ್ನು ಹಾಕಿದ್ದು ಏಕೆ ಎಂದು … Continued

ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued

ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮನೋಜ ಸೋಂಕರ್

ಚಂಡೀಗಢ : ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿಗದಿತ ವಿಚಾರಣೆ ನಡೆಸಲಿರುವ ಒಂದು ದಿನ ಮೊದಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮನೋಜ ಸೋಂಕರ್ ಅವರು ಭಾನುವಾರ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಂಚೆ … Continued