ಸದ್ಗುರುಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್‌ : ಈಶಾ ಫೌಂಡೇಷನ್ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ತಡೆ

ನವದೆಹಲಿ: ಅಧ್ಯಾತ್ಮ ಗುರು ಜಗ್ಗಿ ವಾಸುದೇವ ಅವರ ಈಶಾ ಪ್ರತಿಷ್ಠಾನ ವಿರುದ್ಧ ಪೊಲೀಸ್‌ ಕ್ರಮ ಕೈಗೊಳ್ಳವುದಕ್ಕೆ ಸುಪ್ರೀಂ ಕೋರ್ಟ್‌ ಗುರುವಾರ ತಡೆ ನೀಡಿದೆ. ಅಲ್ಲದೆ, ಪ್ರತಿಷ್ಠಾನಕ್ಕೆ ಸಂಬಂಧಿಸಿದ ಪ್ರಕರಣವನ್ನು ಮದ್ರಾಸ್‌ ಹೈಕೋರ್ಟ್‌ನಿಂದ ತನಗೆ ವರ್ಗಾಯಿಸಿಕೊಂಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಈಚೆಗೆ ಮದ್ರಾಸ್‌ ಹೈಕೋರ್ಟ್‌ ನೀಡಿದ್ದ ಆದೇಶ … Continued

ಸುಪ್ರೀಂ ಕೋರ್ಟ್​ ಯೂಟ್ಯೂಬ್​ ಚಾನೆಲ್ ಹ್ಯಾಕ್…!

ನವದೆಹಲಿ: ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ. ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಅಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನಲ್ ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ‌ ಚಾನೆಲ್ ಈಗ “ಭಾರತದ ಸುಪ್ರೀಂ ಕೋರ್ಟ್” ಬದಲಿಗೆ “ರಿಪ್ಪಲ್” ಎಂಬ ಹೆಸರನ್ನು ತೋರಿಸುತ್ತದೆ. ಹ್ಯಾಕ್ ಸರ್ಕಾರದ ಡಿಜಿಟಲ್ ಸ್ವತ್ತುಗಳಿಗೆ ಆನ್‌ಲೈನ್ ಭದ್ರತೆಯ ಬಗ್ಗೆ … Continued

ತನ್ನ ಅನುಮತಿಯಿಲ್ಲದೆ ‘ಬುಲ್ಡೋಜರ್ ನ್ಯಾಯ’ಕ್ಕೆ ಮುಂದಾಗುವುದು ಬೇಡ : ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ

ನವದೆಹಲಿ: ಅಪರಾಧ ಪ್ರಕರಣದಲ್ಲಿ ಆರೋಪಿಗಳಾಗಿರುವವರ ಮನೆ ಅಥವಾ ಅಂಗಡಿಗಳನ್ನು ನ್ಯಾಯಾಲಯದ ಅನುಮತಿ ಪಡೆಯದೇ ಬುಲ್ಡೋಜರ್‌ ಬಳಸಿ ನೆಲಸಮ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ಅನಧಿಕೃತ ಕಟ್ಟಡ ತೆರವುಗೊಳಿಸಲು ಇಂತಹ ಕ್ರಮ ಅಗತ್ಯವಿರುವ ಪ್ರಕರಣಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಮುಂದಿನ ವಿಚಾರಣೆ ಅಕ್ಟೋಬರ್ 1ರಂದು … Continued

ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ : ಆದರೆ…

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಇದೇ ವೇಳೆ, ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ (ಇ.ಡಿ.) ಮತ್ತು ಸಿಬಿಐ ದಾಖಲಿಸಿದ್ದ ಎರಡೂ ಪ್ರಕರಣಗಳಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ತನಿಖೆ ಪೂರ್ಣಗೊಂಡಿದ್ದು ವಿಚಾರಣೆ ಪೂರ್ಣಗೊಳ್ಳಲು ಸಾಕಷ್ಟು ಸಮಯ ಹಿಡಿಯುವುದರಿಂದ ಈ ಆದೇಶ ನೀಡುತ್ತಿರುವುದಾಗಿ ನ್ಯಾಯಮೂರ್ತಿಗಳಾದ ಬಿ.ಆರ್. … Continued

‘ಎಲ್ಲವನ್ನೂ ಬದಲಾಯಿಸಲಾಗಿದೆ, ನಾವು 5ನೇ ದಿನದಂದು ತನಿಖೆಗೆ ಪ್ರವೇಶಿಸಿದ್ದೇವೆ’: ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಿಬಿಐ

ನವದೆಹಲಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಸುಪ್ರೀಂ ಕೋರ್ಟ್‌ಗೆ 5 ನೇ ದಿನದಂದು ತನಿಖೆಯನ್ನು ಹಸ್ತಾಂತರಿಸಲಾಯಿತು ಮತ್ತು ಆ ಹೊತ್ತಿಗೆ ಎಲ್ಲವನ್ನೂ “ಬದಲಾಯಿಸಲಾಗಿದೆ” ಎಂದು ತಿಳಿಸಿದೆ. ಸಿಬಿಐ ಅನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು, “ಸಿಬಿಐ ಐದನೇ ದಿನದಲ್ಲಿ … Continued

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌. ಮೋಹನ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಆಗಸ್ಟ್ 20ರಂದು ನಿರಾಕರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್‌ ನೀಡಿದ್ದ … Continued

ಆರ್‌ ಜಿ ಕರ್ ಕಾಲೇಜು ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ : ವೈದ್ಯಕೀಯ ವೃತ್ತಿಪರರ ಸುರಕ್ಷತೆಗೆ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ (National Task Force) ಸ್ಥಾಪಿಸಿರುವ ಸುಪ್ರೀಂ ಕೋರ್ಟ್, ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ದೇಶವನ್ನೇ ಬೆಚ್ಚಿಬೀಳಿಸಿದ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ. ಈ ಸಂಬಂಧ ಮೂರು ವಾರಗಳಲ್ಲಿ ಮಧ್ಯಂತರ ವರದಿ ಮತ್ತು ಎರಡು … Continued

ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ: ಸುಪ್ರೀಂ ಕೋರ್ಟ್ ನಿಂದ ಸ್ವಯಂ ಪ್ರೇರಿತ ವಿಚಾರಣೆ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ್ದು, ಮಂಗಳವಾರ (ಆಗಸ್ಟ್ 20) ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮನೋಜ ಮಿಶ್ರಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ … Continued