ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಸಲಿಂಗ ಜೋಡಿಯು ವಿವಾಹವಾಗುವ (LGBTQIA+ ಮದುವೆ) ಅಥವಾ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧಗಳು) ಹೊಂದುವ ಕಾನೂನಾತ್ಮಕ ಹಕ್ಕಿನ ಕೋರಿಕೆಗೆ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ ಹಾಗೂ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಈಗಿರುವ … Continued

ಸ್ಪೀಕರ್ ನಮ್ಮ ಆದೇಶ ಸೋಲಿಸಲು ಸಾಧ್ಯವಿಲ್ಲ : ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಶುಕ್ರವಾರ (ಅಕ್ಟೋಬರ್ 13) ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರನ್ನು ಬೆಂಬಲಿಸುವ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸುವಲ್ಲಿ ವಿಳಂಬವಾದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು. ಮಹಾರಾಷ್ಟ್ರದ ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣವನ್ನು ತುರ್ತಾಗಿ ನಿರ್ಧರಿಸುವಂತೆ ಕೋರಿ ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ ಶಾಸಕ … Continued

ʼ ವಿಚ್ಛೇದಿತ ಮಹಿಳೆ ʼ ಕಳಂಕದೊಂದಿಗೆ ಸಾಯಲು ಬಯಸುವುದಿಲ್ಲ’: 82 ವರ್ಷದ ಪತ್ನಿ ಆಶಯವನ್ನು ಗೌರವಿಸಿ ವಿಚ್ಛೇದನದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಕಳೆದ 27 ವರ್ಷಗಳಿಂದ ವೈವಾಹಿಕ ಭಿನ್ನಾಭಿಪ್ರಾಯದಿಂದ ಹೋರಾಡುತ್ತಿದ್ದ ಮತ್ತು ಪತ್ನಿಯ ಭಾವನೆಗಳಿಗೆ ಮಣಿದು ಕಳೆದ ವಿವಾಹವಾಗಿ 60 ವರ್ಷ ಕಳೆದಿದ್ದ ದಂಪತಿಗೆ (87 ವರ್ಷದ ಪತಿ ಮತ್ತು 82 ವರ್ಷದ ಪತ್ನಿ) ವಿಚ್ಛೇದನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೀವನದ ಕೊನೆಯ ಹಂತದಲ್ಲಿ ತನ್ನ ಗಂಡನನ್ನು ಒಂಟಿಯಾಗಿ ಬಿಡಲು ಬಯಸುವುದಿಲ್ಲ ಮತ್ತು “ವಿಚ್ಛೇದಿತ” … Continued

ಸನಾತನ ಧರ್ಮ ಕುರಿತ ಹೇಳಿಕೆ: ಉದಯನಿಧಿ ಸ್ಟಾಲಿನ್‌, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಿತ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆ.22) ನೋಟಿಸ್ ಜಾರಿಮಾಡಿದೆ. ಸನಾತನ ಧರ್ಮದ ಹೇಳಿಕೆ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕೇಂದ್ರದ ಮಾಜಿ ಸಚಿವ ಎ ರಾಜಾ … Continued

ಕಾವೇರಿ ನದಿ ವಿವಾದ : ಸೆಪ್ಟಂಬರ್‌ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾವೇರಿ ನದಿಯಿಂದ ಪ್ರತಿ ನಿತ್ಯ 24,000 ಕ್ಯೂಸೆಕ್ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಶುಕ್ರವಾರಕ್ಕೆ(ಸೆಪ್ಟಂಬರ್‌ 1) ಮುಂದೂಡಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡುವ ಕುರಿತು … Continued

ಕಾವೇರಿ ನದಿ ನೀರು ವಿವಾದ : ಆಗಸ್ಟ್ 25 ರಂದು ಸುಪ್ರೀಂ ಕೋರ್ಟಿನಲ್ಲಿ ತಮಿಳುನಾಡು ಅರ್ಜಿ ವಿಚಾರಣೆ

ನವದೆಹಲಿ: ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮೂವರು ನ್ಯಾಯಮೂರ್ತಿಗಳ ವಿಶೇಷ ಪೀಠ ರಚಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ, ಬಿ.ಆರ್‌. ಗವಾಯಿ ಮತ್ತು ಪ್ರಶಾಂತ ಮಿಶ್ರಾ ಅವರನ್ನೊಳಗೊಂಡ ಪೀಠವು ಆಗಸ್ಟ್‌ 25 ರಂದು ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ನಡೆಸಲಿದೆ. ಬೆಳೆದು ನಿಂತಿರುವ ಬೆಳೆಯ … Continued

ಜ್ಞಾನವಾಪಿ ಮಸೀದಿ ಆವರಣದ ಎಎಸ್‌ಐ ಸರ್ವೆಗೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜ್ಞಾನವಾಪಿ ಮಸೀದಿಯ ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯದ ಆದೇಶ ಹೊರಬಿದ್ದಿದೆ. ಎಎಸ್‌ಐ (ASI) ಸಂಪೂರ್ಣ ಪ್ರಕ್ರಿಯೆಯಲ್ಲಿ ಮಸೀದಿ ಆವರಣದಲ್ಲಿ ಯಾವುದೇ ಉತ್ಖನನವನ್ನು … Continued

ಮಣಿಪುರದಲ್ಲಿ ಸಾಂವಿಧಾನಿಕ ಯಂತ್ರಗಳ ಸಂಪೂರ್ಣ ಸ್ಥಗಿತ: ಸುಪ್ರೀಂ ಕೋರ್ಟ್

ನವದೆಹಲಿ: ಮಣಿಪುರದಲ್ಲಿ ತನಿಖೆಯ “ಆಲಸ್ಯ”ದ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ ಮತ್ತು ರಾಜ್ಯದಲ್ಲಿ “ಕಾನೂನು ಮತ್ತು ಸುವ್ಯವಸ್ಥೆ ಯಂತ್ರದ ಸಂಪೂರ್ಣ ಸ್ಥಗಿತವಾಗಿದೆ ಎಂದು ಹೇಳಿದೆ. ಗಮನಾರ್ಹ ಸಮಯ ಕಳೆದರೂ ಯಾವುದೇ ಬಂಧನಗಳಿಲ್ಲ. ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯು ಸಾಂವಿಧಾನಿಕ ಯಂತ್ರಗಳ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಗಮನಿಸಿದ … Continued

ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ; ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಮೇಲ್ಮನವಿಯನ್ನು ಜುಲೈ 21 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ತುರ್ತು ಪಟ್ಟಿಯನ್ನು ಕೋರಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ … Continued

ಮೋದಿ ಉಪನಾಮ ಪ್ರಕರಣ : ಸುಪ್ರೀಂ ಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು, ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ … Continued