ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ: ಬಿಜೆಪಿ ಶಾಸಕ ಸಿ ಟಿ ರವಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ : ಬೆಳಗಾವಿಯಲ್ಲಿ ನಡೆದಿದ್ದ ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಸಂಬಂಧ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ವಿರುದ್ಧ ಬೆಳಗಾವಿಯ ಬಾಗೇವಾಡಿ ಠಾಣೆಯಲ್ಲಿ ದಾಖಲಾಗಿರುವ ಕಿರುಕುಳ ಮತ್ತು ಮಹಿಳೆಯ ಘನತೆಗೆ ಹಾನಿ ಮಾಡಿದ ಆರೋಪದ ಪ್ರಕರಣದ … Continued

ಕರ್ನಲ್ ಸೋಫಿಯಾ ಬಗ್ಗೆ ಸಚಿವ ವಿಜಯ ಶಾ ಹೇಳಿಕೆ | ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ ; ಬಂಧನಕ್ಕೆ ತಡೆ

ನವದೆಹಲಿ: ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಲಾದ ಸೇನಾ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ’ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಕುರೇಷಿ ಅವರನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ಸಚಿವ ಕುವರ ವಿಜಯ ಶಾ ನೀಡಿದ ಹೇಳಿಕೆಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸುಪ್ರೀಂ … Continued

‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ

ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ … Continued

ಸಾವರ್ಕರ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ; ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ ಸಾವರ್ಕರ (ವೀರ್‌ ಸವಾರ್ಕರ) ಅವರು ಬ್ರಿಟಿಷರ ಅನುಯಾಯಿಯಾಗಿದ್ದು, ಅವರು ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದರು ಎಂದು ಹೇಳಿದ್ದಕ್ಕಾಗಿ ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದ್ದು ಇದೇ ರೀತಿಯ … Continued

ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣ : ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ :  ಡಿನೋಟಿಫಿಕೇಷನ್  ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆಕ್ಷನ್ 17Aಗೆ ಸಂಬಂಧಿಸಿದ ಸ್ಪಷ್ಟನೆಗಾಗಿ ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ. ನ್ಯಾ. ಜೆ.ಬಿ ಪರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠ ವಿಸ್ತೃತ ವಿಚಾರಣೆ ನಡೆಸಿತ್ತು. ಸೋಮವಾರ ಈ ಬಗ್ಗೆ ತೀರ್ಪು ನೀಡಿದ … Continued

ಮುಂದಿನ ವಿಚಾರಣೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕವಿಲ್ಲ, ಆಸ್ತಿ ಡಿನೋಟಿಫೈ ಮಾಡಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಭರವಸೆ

ನವದೆಹಲಿ: ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ನೇಮಕ ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳನ್ನು ಡಿ-ನೋಟಿಫೈ ಮಾಡುವ ನಿಬಂಧನೆ ಸೇರಿದಂತೆ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯಿದೆ, 2025ರ ಕೆಲವು ಸೆಕ್ಷನ್‌ಗಳ ಅಡಿ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಈ … Continued

ವಕ್ಫ್ ತಿದ್ದುಪಡಿ ಕಾಯ್ದೆ : ಹಿಂದೂ ಟ್ರಸ್ಟ್‌ಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತೀರಾ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ : ಕೆಲ ದಿನಗಳ ಹಿಂದೆ ರಾಷ್ಟ್ರಪತಿಗಳ ಅಂಕಿತ ದೊರೆತ ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ಪ್ರಮುಖ ನಿಬಂಧನೆಗಳಿಗೆ ತಡೆ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರದ ವಿಚಾರಣೆ ವೇಳೆ ಇಂಗಿತ ವ್ಯಕ್ತಪಡಿಸಿದೆ. ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ಸೇರ್ಪಡೆ, ವಕ್ಫ್ ಆಸ್ತಿಗಳ ವಿವಾದ ನಿರ್ಧರಿಸುವ ಜಿಲ್ಲಾಧಿಕಾರಿಗಳ ಅಧಿಕಾರ ಮತ್ತು … Continued

ನ್ಯಾಯಮೂರ್ತಿ ಬಿ.ಆರ್. ಗವಾಯಿ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ; ಮೇ 14 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಬುಧವಾರ ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಅವರನ್ನು ಮುಂದಿನ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವಂತೆ ಶಿಫಾರಸು ಮಾಡಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರು ಮೇ 14 ರಂದು ಸುಪ್ರೀಂ ಕೋರ್ಟ್‌ನ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ … Continued

ವಕ್ಫ್ ತಿದ್ದುಪಡಿ ಕಾಯ್ದೆ ಸಿಂಧುತ್ವದ ಪ್ರಶ್ನೆ ; ಇಂದು ಸುಪ್ರೀಂ ಕೋರ್ಟ್‌ನಲ್ಲಿ 73 ಅರ್ಜಿಗಳ ವಿಚಾರಣೆ

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಈ ಕಾನೂನು ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ೀ ಅರ್ಜಿಗಳು ವಾದಿಸುತ್ತಿದ್ದರೂ, ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಈ ತಿದ್ದುಪಡಿ ಅತ್ಯಗತ್ಯ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಒಟ್ಟು … Continued

ವಕ್ಫ್ ತಿದ್ದುಪಡಿ ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ

ನವದೆಹಲಿ : ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ ಬಂದಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯಲ್ಲಿ, “ವಕ್ಫ್ (ತಿದ್ದುಪಡಿ) ಕಾಯ್ದೆ-2025 (2025 ರ 14) ರ ಸೆಕ್ಷನ್ 1 ರ ಉಪವಿಭಾಗ (2) ರಿಂದ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕೇಂದ್ರ ಸರ್ಕಾರವು ಈ … Continued