ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಕೋರ್ಟ್‌ ಮೆಟ್ಟಿಲೇರಿದ ನೂಪುರ್‌ ಶರ್ಮಾ

ನವದೆಹಲಿ: ಪ್ರವಾದಿ ಮೊಹ್ಮಮದ್‌ ಅವರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿದ್ದ ತಮ್ಮ ಹಿಂದಿನ ಮನವಿಯನ್ನು ಮರುಸ್ಥಾಪಿಸಲು ಹಾಗೂ ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಕೋರಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಜುಲೈ 1ರಂದು ಶರ್ಮಾ ವಿರುದ್ಧ … Continued

ಜುಲೈ 20ರಂದು ಶಿವಸೇನೆಯ ಎರಡೂ ಬಣಗಳ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಿವಸೇನೆಯ ಎರಡೂ ಬಣಗಳು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಜುಲೈ 20 ರಂದು ವಿಚಾರಣೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಉದ್ಧವ್ ಠಾಕ್ರೆ ನೇತೃತ್ವದ ಬಣ ಮತ್ತು ಏಕನಾಥ್ ಶಿಂಧೆ ಬಣದಿಂದ ಸಲ್ಲಿಸಿದ ಅರ್ಜಿಗಳನ್ನು … Continued

ಸಿಎಎ ವಿರೋಧಿ ಪ್ರತಿಭಟನಾಕಾರರಿಂದ ವಸೂಲಿ ಮಾಡಿದ ಆಸ್ತಿ ಹಾನಿಯ ದಂಡ ಹಿಂತಿರುಗಿಸಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಸಿಎಎ ವಿರೋಧಿ ಪ್ರತಿಭಟನೆಗಳ ವೇಳೆ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ ಆರೋಪ ಎದುರಿಸುತ್ತಿರುವವರಿಂದ ವಸೂಲಿ ಮಾಡಲಾದ ದಂಡದ ಹಣವನ್ನು ಅವರಿಗೇ ಮರಳಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವುದಕ್ಕೆ ಪರಿಹಾರವನ್ನು ಕಟ್ಟಿಕೊಡುವ ಸಲುವಾಗಿ ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿದ್ದ ಶೋಕಾಸ್‌ … Continued

ಮಲ್ಯ ನ್ಯಾಯಾಂಗ ನಿಂದನೆ: ಜನವರಿ 18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ನವದೆಹಲಿ: ಬ್ಯಾಂಕ್‌ಗಳಿಗೆ ವಂಚಿಸಿ ಬ್ರಿಟನ್ನಿನಲ್ಲಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಮುಂದುವರಿಸಲು ಸುಪ್ರೀಂಕೋರ್ಟ್‌ ನಿರ್ಧರಿಸಿದೆ.ಜನವರಿ 18ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ. ಅವರು ಬ್ರಿಟನ್ನಿನಿಂದ ಗಡಿಪಾರು ಆಗುವವರೆಗೆ ಕಾಯಲು ಅಸಾಧ್ಯ ಎಂದೂ ಪೀಠ ಹೇಳಿದೆ. 40 ಮಿಲಿಯ ಅಮೆರಿಕನ್‌ ಡಾಲರ್‌ ಮೊತ್ತವನ್ನು ಕೋರ್ಟ್‌ ಆದೇಶದ ಹೊರತಾಗಿಯೂ ಮಕ್ಕಳ … Continued

ಪ್ರತಿಭಟನೆ ನಡೆಸಿ, ಆದರೆ ರಸ್ತೆ ಸಂಚಾರ ಬಂದ್ ಮಾಡಬೇಡಿ : ರೈತರಿಗೆ ಸುಪ್ರೀಂ ಸೂಚನೆ

ನವದೆಹಲಿ: ಪ್ರತಿಭಟನೆ ನಡೆಸುವುದು ರೈತರ ಹಕ್ಕು ಪ್ರತಿಭಟನೆ ನಡೆಸಿ, ಆದರೆ ಜನ ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆ ಬಂದ್ ಮಾಡುವುದನ್ನು ತಕ್ಷಣವೇ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಕಳೆದ ಹತ್ತು ತಿಂಗಳಿಂದ ದೆಹಲಿಯ ಗಡಿ ಭಾಗದ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. … Continued

ಚುನಾವಣೋತ್ತರ ಹಿಂಸಾಚಾರ:ಸಿಬಿಐ ತನಿಖೆ ವಹಿಸಿದ ಕೋಲ್ಕತ್ತಾ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ. ಬಂಗಾಳ ಸರ್ಕಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ವೇಳೆ ಸಂಭವಿಸಿರುವ ಕೊಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ಸಂಸ್ಥೆಗೆ ನಿರ್ದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿರುವ ಮನವಿಯ ವಿಚಾರಣಾ ಸಂಖ್ಯೆಯನ್ನು … Continued

ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಆಗಸ್ಟ್ 10ಕ್ಕೆ ಮುಂದೂಡಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ, ವಿನಯ ಕುಲಕರ್ಣಿ ವಿರುದ್ಧ ಸಿಬಿಐ ದಾಖಲಿಸಿರುವ … Continued

ಚೆಕ್‌ ಬೌನ್ಸ್‌ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕೇಂದ್ರಕ್ಕೆ ಸುಪ್ರಿಂ ಕೋರ್ಟ್‌ ನೊಟೀಸ್‌ ‌

ನವದೆಹಲಿ:ಚೆಕ್ ಬೌನ್ಸ್ ಕೇಸುಗಳ ಶೀಘ್ರ ವಿಲೇವಾರಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಒಬ್ಬ ವ್ಯಕ್ತಿಯ ವಿರುದ್ಧ ಒಂದು ವರ್ಷದೊಳಗೆ ದಾಖಲಾಗುವ ಪ್ರಕರಣಗಳಲ್ಲಿ ವಿಚಾರಣೆಗಳನ್ನು ಒಟ್ಟುಗೂಡಿಸಿ ವಿಚಾರಣೆಗಳ ಶೀಘ್ರ ವಿಲೇವಾರಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸಂಬಂಧ ಎಲ್ಲಾ ಹೈಕೋರ್ಟ್ ಗಳಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಚೆಕ್ ಬೌನ್ಸ್ ಕೇಸುಗಳನ್ನು ನಿಭಾಯಿಸುವಂತೆ ವಿಚಾರಣಾಧೀನ … Continued

ಧಾರ್ಮಿಕ ಮತಾಂತರ: ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

ನವ ದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮ ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, … Continued

ಅನಿಲ್ ದೇಶ್ಮುಖ್ ವಿರುದ್ಧದ ಗಂಭೀರ ಆರೋಪಗಳಿಗೆ ಸಿಬಿಐ ತನಿಖೆ ಅಗತ್ಯ: ಸುಪ್ರೀಂ ಕೋರ್ಟ್‌

ನವ ದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪಗಳು ‘ಗಂಭೀರ’ ಸ್ವರೂಪದ್ದಾಗಿದ್ದು ಸ್ವತಂತ್ರ ತನಿಖೆ ಅಗತ್ಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಆರೋಪಗಳು ಗಂಭೀರವಾಗಿವೆ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರುಬೇರೆಯಾಗುವವರೆಗೂ ಅವರು ಒಟ್ಟಿಗೆ … Continued