ತುಮಕೂರು | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ; ಡಿವೈಎಸ್‌ಪಿ ಅಮಾನತು

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಎದುರಿಸುತ್ತಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ನ್ಯ ನಡೆಸಿದ ವೀಡಿಯೊ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್‌ಪಿ … Continued

ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued

ಪ್ಯಾರಿಸ್‌ ಒಲಿಂಪಿಕ್‌ ; ಭಾರತದ ಒಲಿಂಪಿಕ್‌ ಹಾಕಿ ಆಟಗಾರ ಅಮಿತ್‌ ರೋಹಿದಾಸ್‌‍ಗೆ ಒಂದು ಪಂದ್ಯ ನಿಷೇಧ

ಪ್ಯಾರಿಸ್‌ : ಒಲಿಂಪಿಕ್‌ನಲ್ಲಿ ಪುರುಷರ ಹಾಕಿಯ ಕ್ವಾರ್ಟರ್‌ಫೈನಲ್‌ನಲ್ಲಿ ಗ್ರೇಟ್‌ ಬ್ರಿಟನ್‌ ವಿರುದ್ಧ ನಡೆದ ಪಂದ್ಯದ ವೇಳೆ ರೆಡ್‌ ಕಾರ್ಡ್‌ನಿಂದ ಅಮಾನತುಗೊಂಡಿದ್ದ ಭಾರತ ತಂಡದ ಪ್ರಮುಖ ರಕ್ಷಣಾ ಆಟಗಾರ ಅಮಿತ್‌ ರೋಹಿದಾಸ್‌‍ ಅವರು ಜರ್ಮನಿ ವಿರುದ್ಧ ಇಂದು (ಸೋಮವಾರ) ನಡೆಯಲಿರುವ ಸೆಮಿಫೈನಲ್‌ನಿಂದ ಹೊರಗುಳಿದಿದ್ದಾರೆ. ಇದರಿಂದಾಗಿ ಭಾರತವು ಪ್ರಮುಖ ತಂಡದಲ್ಲಿ ಕೇವಲ 15 ಆಟಗಾರ ಮಾತ್ರ ಹೊಂದಿರುತ್ತದೆ, ಇದು … Continued

55 ದಿನಗಳಿಂದ ತಲೆಮರೆಸಿಕೊಂಡಿದ್ದ ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧನ : ಪಕ್ಷದಿಂದ 6 ವರ್ಷ ಅಮಾನತು ಮಾಡಿದ ಟಿಎಂಸಿ

ಕೋಲ್ಕತ್ತಾ: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ಷಹಜಹಾನ್ ಬಂಧನದ ಬಳಿಕ ತೃಣ ಮೂಲ ಕಾಂಗ್ರೆಸ್ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ ಎಂದು ಹೇಳಿದೆ. ಆತ ಮತ್ತು ಆತನ ಸಹಚರರ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರ … Continued

ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಅಪಹಾಸ್ಯ ಮಾಡಿದ ನಾಟಕ ಪ್ರದರ್ಶಿಸಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ವಿಷಯ ಇದ್ದ ನಾಟಕವನ್ನು ಪ್ರದರ್ಶಿಸಿದ್ದಕ್ಕಾಗಿ ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಗಣರಾಜ್ಯೋತ್ಸವದಂದು ಹೈಕೋರ್ಟ್‌ನಲ್ಲಿ ಪ್ರದರ್ಶಿಸಲಾದ ಈ ನಾಟಕವು ಭಾರತ ಸರ್ಕಾರ ಮತ್ತು ದೇಶಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ದೂರಿಗೆ ಕಾರಣವಾಯಿತು. ಸಹಾಯಕ ರಿಜಿಸ್ಟ್ರಾರ್ ಸುಧೀಶ ಟಿ.ಎ. ಮತ್ತು ಕೋರ್ಟ್ ಕೀಪರ್ … Continued

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ತನ್ನ ಮೂವರು ಸಚಿವರನ್ನು ಅಮಾನತು ಮಾಡಿದ ಮಾಲ್ಡೀವ್ಸ್‌ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಅಪಹಾಸ್ಯ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್‌ನಲ್ಲಿ ಮೂವರು ಸಚಿವರ ತಲೆದಂಡವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ಮಾಲ್ಡೀವ್ಸ್‌ನ ಮೂವರು ಸಚಿವರನ್ನು ಅಲ್ಲಿನ ಸರ್ಕಾರವು ಭಾನುವಾರ ಅಮಾನತುಗೊಳಿಸಿದೆ ಎಂದು ಮಾಲ್ಡೀವ್ಸ್ ವಕ್ತಾರರು ತಿಳಿಸಿದ್ದಾರೆ. ಭಾನುವಾರ ಭಾರತವು ಮಾಲ್ಡೀವ್ಸ್‌ … Continued

ಕಲಾಪಕ್ಕೆ ಅಡ್ಡಿ: ಡಿ.ಕೆ ಸುರೇಶ ಸೇರಿದಂತೆ ಮೂವರು ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ : ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಗುರುವಾರ( ಡಿಸೆಂಬರ್‌ 21) ಸಂಸತ್ತಿನಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಅಮಾನತಿಗೆ ಪ್ರಸ್ತಾವನೆ ಮಂಡಿಸಿದರು. ನಂತರ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ, ದೀಪಕ ಬೈಜ್ ಮತ್ತು ನಕುಲ ನಾಥ ಅವರನ್ನು ಅಮಾನತುಗೊಳಿಸಲಾಗಿದೆ. ಹೀಗಾಗಿ ಲೋಕಸಭೆಯಿಂದ ಅಮಾನತುಗೊಂಡ … Continued

ಲೋಕಸಭೆಗೆ ಗೈರಾಗಿದ್ದ ಡಿಎಂಕೆ ಸಂಸದ ಪಾರ್ಥಿಬನ್ ತಪ್ಪಾಗಿ ಅಮಾನತು: ನಂತರ ಸ್ಪಷ್ಟಪಡಿಸಿದ ಸರ್ಕಾರ

ನವದೆಹಲಿ: ಸದನ ನಡೆಯಲು ಅಡ್ಡಿಪಡಿಸಿದ್ದಕ್ಕಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಗುರುವಾರ ಅಮಾನತುಗೊಂಡ 14 ವಿರೋಧ ಪಕ್ಷದ ಸಂಸದರಲ್ಲಿ ಡಿಎಂಕೆ ನಾಯಕ ಎಸ್.ಆರ್ ಪಾರ್ಥಿಬನ್ ಅವರ ಹೆಸರು ಸೇರಿದೆ. ಪಾರ್ಥಿಬನ್ ಸೇರ್ಪಡೆ ‘ತಪ್ಪಾದ ಗುರುತಿನ’ ಪ್ರಕರಣ ಎಂದು ಸರ್ಕಾರ ನಂತರ ಸ್ಪಷ್ಟಪಡಿಸಿದೆ. ಹಾಗೂ ಅವರ ಅಮಾನತನ್ನು ಹಿಂಪಡೆದಿದೆ. ಒಟ್ಟಾರೆಯಾಗಿ ವಿಪಕ್ಷಗಳ 13 ಸಂಸದರನ್ನು ಲೋಕಸಭೆಯಿಂದ … Continued

‘ಪಕ್ಷ ವಿರೋಧಿ’ ಚಟುವಟಿಕೆ : ಸಂಸದ ಡ್ಯಾನಿಶ್ ಅಲಿ ಅಮಾನತುಗೊಳಿಸಿದ ಬಿಎಸ್‌ಪಿ

  ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಬಿಎಸ್ಪಿ ತನ್ನ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಅಮಾನತುಗೊಳಿಸಿದೆ. ಅಲಿ 2019 ರಿಂದ ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶಚಂದ್ರ ಮಿಶ್ರಾ ನೀಡಿರುವ ಹೇಳಿಕೆಯಲ್ಲಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಅಲಿ ಅವರಿಗೆ ಪಕ್ಷವು … Continued

ಪ್ರಧಾನಿ ಮೋದಿಗೆ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್‌ ಅಧಿಕಾರಿಗಳು ಅಮಾನತು

ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಫಿರೋಜ್‌ಪುರ ಜಿಲ್ಲೆಯ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇಬ್ಬರು ಡಿಎಸ್‌ಪಿ ಶ್ರೇಣಿಯ ಅಧಿಕಾರಿಗಳು ಸೇರಿದ್ದಾರೆ. ಕಳೆದ ವರ್ಷ ಜನವರಿ 5ರಂದು ಪ್ರಧಾನಿ ಮೋದಿ ಅವರು ಪಂಜಾಬ್‌ನಲ್ಲಿ … Continued