ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಜಯ; ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಕೊಲಂಬೊ: ಭಾನುವಾರ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಇಶಾನ್ ಕಿಶನ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಭಾರತದ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಗೆ ಪಾಕಿಸ್ತಾನ ಮಣಿದಿದೆ. ಪಾಕ್ ವಿರುದ್ಧ 61 ರನ್‌ಗಳ ಬೃಹತ್ ಜಯ ದಾಖಲಿಸಿದ ಭಾರತ, ಟಿ20 ವಿಶ್ವಕಪ್‌ನ ಸೂಪರ್-8 ಹಂತವನ್ನು ಅಧಿಕೃತವಾಗಿ ಖಚಿತಪಡಿಸಿಕೊಂಡಿದೆ. ಈ ಗೆಲುವಿನ ಮೂಲಕ ಟಿ20 ವಿಶ್ವಕಪ್ … Continued

ಟಿ20 ವಿಶ್ವಕಪ್ : ಯು-ಟರ್ನ್ ಹೊಡೆದ ಪಾಕಿಸ್ತಾನ ; ಭಾರತದ ವಿರುದ್ಧದ ಪಂದ್ಯ ಆಡಲು ನಿರ್ಧಾರ…!

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)  ಯೂ ಟರ್ನ್‌ ಹೊಡೆದಿದೆ. ಐಸಿಸಿ (ICC) ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ, ಅದು ತಾನು ಈ ಹಿಂದೆ  ಘೋಷಿಸಿದ್ದ ಭಾರತದ ವಿರುದ್ಧದ ಪಂದ್ಯದ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಮೂಲಕ 2026ರ ಟಿ20 ವಿಶ್ವಕಪ್‌ನಲ್ಲಿ ನಿಗದಿಯಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯುವುದು ಖಚಿತವಾಗಿದೆ. ಪಾಕಿಸ್ತಾನ … Continued

ಟಿ20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಬೇಡಿ : ಪಾಕಿಸ್ತಾನಕ್ಕೆ ‘2009ರ ಲಾಹೋರ್ ದಾಳಿ’ ನೆನಪಿಸಿದ ಶ್ರೀಲಂಕಾ

ಕೊಲಂಬೊ: 2026ರ ಟಿ20 ವಿಶ್ವಕಪ್‌ನ ಸಹ-ಆತಿಥೇಯ ರಾಷ್ಟ್ರವಾಗಿರುವ ಶ್ರೀಲಂಕಾ, ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಲೀಗ್ ಹಂತದ ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಕ್ಕೆ ಅಧಿಕೃತವಾಗಿ ವಿನಂತಿಸಿದೆ. ಪಾಕಿಸ್ತಾನ ಸರ್ಕಾರವು ತನ್ನ ರಾಷ್ಟ್ರೀಯ ತಂಡವು ಟೂರ್ನಿಯಲ್ಲಿ ಭಾಗವಹಿಸಲಿದೆ, ಆದರೆ ಭಾರತದ ವಿರುದ್ಧದ ಪಂದ್ಯವನ್ನು ಮಾತ್ರ ಆಡುವುದಿಲ್ಲ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ … Continued

ಟಿ20 ವಿಶ್ವಕಪ್‌ 2026 : ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಬಹಿಷ್ಕಾರ

ನವದೆಹಲಿ: ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಹಿಂದೆ ಸರಿಯುವುದಿಲ್ಲ. ಆದರೆ, ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ತನ್ನ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಕಣಕ್ಕಿಳಿಯುವುದಿಲ್ಲ. ಭಾನುವಾರ ಸಂಜೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಿಸಿಬಿ … Continued

ಟಿ20 ವಿಶ್ವಕಪ್ | ಭಾರತಕ್ಕೆ ಬರಲು ಬಾಂಗ್ಲಾದೇಶ ನಕಾರ: ಟಿ20 ವಿಶ್ವಕಪ್‌ನಿಂದ ಹಿಂದೆ ಸರಿಯುವ ನಿರ್ಧಾರ

ನವದೆಹಲಿ: ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಈ ವರ್ಷ ಭಾರತದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ನಿರಾಕರಿಸಿದೆ. ಜನವರಿ 22 ರಂದು ನಡೆದ ಆಂತರಿಕ ಸಭೆಯ ನಂತರ ಈ ಅಧಿಕೃತ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಬಾಂಗ್ಲಾದೇಶ ಟೂರ್ನಿಯಿಂದ ಹಿಂದೆ ಸರಿದರೆ, ಅವರ ಬದಲಿಗೆ ಸ್ಕಾಟ್ಲೆಂಡ್ … Continued

2026ರ ಟಿ20 ವಿಶ್ವಕಪ್ | ಭಾರತದಲ್ಲಿ ಆಡುವ ವಿಚಾರ ; ಬಾಂಗ್ಲಾದೇಶಕ್ಕೆ ಐಸಿಸಿ ಅಂತಿಮ ಗಡುವು

 ಮುಂಬೈ/ಢಾಕಾ : 2026ರ ಪುರುಷರ ಟಿ20 ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (BCB), ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಂತಿಮ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ. ಭಾರತಕ್ಕೆ ಬರಲು ಒಪ್ಪಿಗೆ ಕುರಿತು ನಿರ್ಧಾರ ತಿಳಿಸುವ  ಕುರಿತು ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಜನೆವರಿ 21ರ ವರೆಗೆ ಸಮಯ ನೀಡಿದೆ. ಒಂದು ವೇಳೆ … Continued

ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯುವ ತನ್ನ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೊರೆ..?

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ಕ್ರಿಕೆಟ್ ಮೈದಾನಕ್ಕೂ ವ್ಯಾಪಿಸಿದೆ. ಐಪಿಎಲ್ 2026ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡಬೇಕಿದ್ದ ಬಾಂಗ್ಲಾದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಒಪ್ಪಂದದಿಂದ ಮುಕ್ತಗೊಳಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ, ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳ … Continued

2026ರ T20 ವಿಶ್ವಕಪ್ ಫೆ.7ರಿಂದ ಆರಂಭ ; 20 ತಂಡಗಳು ಭಾಗಿ : ಫೆ.15ಕ್ಕೆ ಭಾರತ vs ಪಾಕ್‌ ಪಂದ್ಯ-ಪೂರ್ಣ ವೇಳಾಪಟ್ಟಿ

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯು 2026ರ ಟಿ20 ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿಯನ್ನು ನವೆಂಬರ್ 25 ರಂದು ಮುಂಬೈನಲ್ಲಿ ವಿಶೇಷ ಕಾರ್ಯಕ್ರಮವೊಂದರಲ್ಲಿ ಅನಾವರಣಗೊಳಿಸಿದೆ. ಟಿ20 ವಿಶ್ವಕಪ್‌ ಪಂದ್ಯಾವಳಿ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನೆಯಲಿದ್ದು, ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿವೆ ಎಂದು ಖಚಿತಪಡಿಸಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಎಂಟು ಸ್ಥಳಗಳಲ್ಲಿ ಒಟ್ಟು … Continued