‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ … Continued

ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ಚೆನ್ನೈ: ಕೆಲವು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಎ ಗಣೇಶಮೂರ್ತಿ ಅವರು ಗುರುವಾರ ಮುಂಜಾನೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಬೆಳಗ್ಗೆ 5 ಗಂಟೆ ಸುಮಾರಿಗೆ 76 ವರ್ಷದ ಸಂಸದರು ಮೃತಪಟ್ಟಿದ್ದಾರೆ. ಅವರು ಓರ್ವ ಪುತ್ರ … Continued

ಲೋಕಸಭೆ ಚುನಾವಣೆ: ಬಿಜೆಪಿಯ ನಾಲ್ಕನೇ ಪಟ್ಟಿ ಬಿಡುಗಡೆ : ನಟಿ ರಾಧಿಕಾ ಶರತಕುಮಾರಗೆ ಟಿಕೆಟ್‌

ನವದೆಹಲಿ: ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಏಪ್ರಿಲ್ 19 ರಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿರುವ ತಮಿಳುನಾಡು ಮತ್ತು ಪುದುಚೇರಿಯ ಸಂಸದೀಯ ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳಗೊಂಡಿದೆ. ಖ್ಯಾತ ನಟಿ ಹಾಗೂ ರಾಜಕಾರಣಿ ರಾಧಿಕಾ ಶರತಕುಮಾರ ಅವರಿಗೆ ತಮಿಳುನಾಡಿನ ವಿರುಧನಗರ ಕ್ಷೇತ್ರದಿಂದ … Continued

ಚುನಾವಣಾ ಆಯೋಗದ ಸೂಚನೆ : ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಶೋಭಾ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ … Continued

ತನ್ನ ಆದೇಶ ಧಿಕ್ಕರಿಸಿದ ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖಂಡ ಕೆ ಪೊನ್ಮುಡಿ ಅವರಿಗೆ ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಧಿಸಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ ನಂತರವೂ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಗರಂ ಆಗಿದೆ. … Continued

ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಂಕೆ ಪತ್ರ : ತಕ್ಷಣವೇ ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ/ ಚೆನ್ನೈ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಡಿಎಂಕೆ ನೀಡಿರುವ ದೂರು ಆಧರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನಿರ್ದೇಶನ ನೀಡಿದೆ. “ಮಾರ್ಚ್ 1 ರಂದು ನಡೆದ ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ತಮಿಳುನಾಡಿನ … Continued

ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued

ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ.. ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ … Continued

ಎಐಎಸ್ಎಂಕೆ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ

ಚೆನ್ನೈ: ಲೋಕಸಭೆ ಚುನಾವಣೆಗೆ ಮುನ್ನ, ತಮಿಳು ಹಿರಿಯ ನಟ ಆರ್. ಶರತಕುಮಾರ ಅವರು ಮಂಗಳವಾರ (ಮಾರ್ಚ್ 12) ತಮ್ಮ ಅಖಿಲ ಭಾರತೀಯ ಸಮತುವ ಮಕ್ಕಳ್ ಕಚ್ಚಿ (AISMK) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ. ಎಐಎಸ್‌ಎಂಕೆ (AISMK) ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಸಮ್ಮುಖದಲ್ಲಿ ಶರತಕುಮಾರ ತಮ್ಮ ಪಕ್ಷವನ್ನು ಬಿಜೆಪಿ ಪಕ್ಷದೊಂದಿಗೆ ವಿಲೀನಗೊಳಿಸಿದರು. … Continued