ತಮಿಳುನಾಡಿನಲ್ಲಿ ಭಾರೀ ಮಳೆ: ನೀಲಗಿರಿಯಲ್ಲಿ ಭೂಕುಸಿತ ; 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಚೆನ್ನೈ: ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದ್ದು, ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿನಿಡಿಗಲ್ ಸೇರಿದಂತೆ ಐದು ಜಿಲ್ಲೆಗಳು ಮತ್ತು ನೀಲಗಿರಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನೀಲಗಿರಿ ಜಿಲ್ಲೆಯ ಕೋಟಗಿರಿ-ಮೆಟ್ಟುಪಾಳ್ಯಂ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳನ್ನು ಈಗ ಬೇರೆ ಮಾರ್ಗಕ್ಕೆ ತಿರುಗಿಸಲಾಗಿದೆ. ಏತನ್ಮಧ್ಯೆ, ಭಾರೀ ಮಳೆಯಿಂದಾಗಿ ಕಲ್ಲರ್ ಮತ್ತು … Continued

ಊಟಿ ಬಳಿ ಕಂದಕಕ್ಕೆ ಬಸ್‌ ಉರುಳಿ ಬಿದ್ದು 8 ಜನರು ಸಾವು

ಉದಕಮಂಡಲಂ : ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ 55 ಪ್ರವಾಸಿಗರಿದ್ದ ಬಸ್ ಕಣಿವೆಗೆ ಉರುಳಿ ಬಿದ್ದು 8 ಪ್ರವಾಸಿಗರು ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ನೀಲಗಿರಿ ಬೆಟ್ಟದ ವ್ಯಾಪ್ತಿಯಲ್ಲಿ ಬರುವ ಕೂನೂರು ಬಳಿಯ ಊಟಿ-ಮಟ್ಟುಪಾಳ್ಯಂ ರಸ್ತೆಯ ಘಾಟ್‌ನಲ್ಲಿ ಹೆಡ್‌ಪಿನ್ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು … Continued

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿ ವಿಚಾರಣೆ ನಡೆಸಿದ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠವು, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು … Continued

ಕಾವೇರಿ ನೀರು : ತಮಿಳುನಾಡಿಗೆ ಮತ್ತೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸಮಿತಿ ಶಿಫಾರಸು

ಬೆಂಗಳೂರು : ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯ ನೀರಿನ ಮಟ್ಟ ತೀವ್ರವಾಗಿ ಕುಸಿದಿರುವ ಮಧ್ಯೆಯೇ ಮತ್ತೆ ಕರ್ನಾಟಕವು   ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಶಿಫಾರಸು ಮಾಡಿದೆ. ಇಂದು, ಮಂಗಳವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು … Continued

ವಿವಾದಕ್ಕೆ ಕಾರಣವಾದ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರನ “ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ…ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ

ನವದೆಹಲಿ: ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಮತ್ತು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿದರು, ಇದು ಬಿಜೆಪಿ ನಾಯಕರಿಂದ … Continued

ಟೊಮೆಟೊ ಬೆಲೆ ಕಡಿಮೆ ಮಾಡಲು ಪ್ರಾರ್ಥಿಸಿ ದೇವಿಗೆ 508 ಟೊಮೆಟೊದಿಂದ ಮಾಡಿದ ವಿಶೇಷ ಹಾರ ಸಮರ್ಪಣೆ…!

ಸುಮಾರು ಎರಡು ತಿಂಗಳಿನಿಂದ ಟೊಮೆಟೋ ಬೆಲೆ ಏರಿಕೆಯಾಗುತ್ತಿದೆ. ಟೊಮೆಟೊ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ಬೆಲೆ ಗಗನಕ್ಕೇರಿರುವುದರಿಂದ ಸಾಮಾನ್ಯರ ಅಡುಗೆ ಮನೆಯಿಂದ ಟೊಮೆಟೊ ಮಾಯವಾಗಿದೆ. ಮಾರುಕಟ್ಟೆಯಲ್ಲಿ ಅವುಗಳನ್ನು ನೋಡಲು ಜನರಿಗೆ ಧೈರ್ಯ ಸಾಲುತ್ತಿಲ್ಲ. ಕಿಲೋಗಟ್ಟಲೆ ಖರೀದಿ ಮಾಡುವವರು ಗ್ರಾಂ ಲೆಕ್ಕದಲ್ಲಿ ಟೊಮೊಟೊ ಖರೀದಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ, ಟೊಮೆಟೊ ಬೆಲೆ ಏರಿಕೆಯಿಂದ ವಿಚಿತ್ರ ಘಟನೆಗಳು … Continued

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್‌ ಪತ್ರ

ಚೆನ್ನೈ: ಕಾವೇರಿ ಜಲಾನಯನ ಪ್ರದೇಶದ ಕುರುವೈ ಬೆಳೆ ರೈತರು ಮಳೆ ಕೊರತೆ ಎದುರಿಸುತ್ತಿದ್ದು, ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತಮಿಳುನಾಡಿಗೆ ನಿಗದಿಪಡಿಸಿದ ನೀರಿನ ಪಾಲನ್ನು ಕರ್ನಾಟಕ … Continued

ಪ್ರಜ್ಞೆ ಇಲ್ಲದೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಜೀವ ಉಳಿಸಿದ ಪರಿಸರ ಕಾರ್ಯಕರ್ತ | ವೀಕ್ಷಿಸಿ

ಪರಿಸರ ಹೋರಾಟಗಾರನ ಸಹಾನುಭೂತಿ ಮತ್ತು ಧೈರ್ಯಶಾಲಿ ಕಾರ್ಯವು ನಾಗರಹಾವಿಗೆ ಮರುಜೀವ ನೀಡಿದೆ. ಸತ್ತಂತೆ ನಿತ್ರಾಣವಾಗಿ ಜೀವವಿಲ್ಲದಂತೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಮತ್ತೆ ನಾಹರಹಾವು ಮೊದಲಿನ ಚಟುಚಟಿಕೆಗೆ ಬರಳುವಂತೆ ಮಾಡಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚೋಪರೂರಿನಲ್ಲಿ ನಡೆದಿದೆ. ಸೆರೆಹಿಡಿಯಲಾದ ವೀಡಿಯೊ ಅಂತರ್ಜಾಲದಲ್ಲಿ ಭಾರೀ ವೈರಲ್‌ ಆಗಿದೆ. ವೀಡಿಯೊದಲ್ಲಿ, ಪರಿಸರ ಕಾರ್ಯಕರ್ತ ನಾಗರಹಾವಿಗೆ ಬಾಟಲಿಯಿಂದ ನೀರು … Continued

ಅಚ್ಚರಿಯ ನಡೆಯಲ್ಲಿ ಬಂಧಿತ ಸಚಿವ ಸೆಂಥಿಲ್ ಬಾಲಾಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ತಮಿಳುನಾಡು ರಾಜ್ಯಪಾಲ

ಚೆನ್ನೈ: ಬಂಧಿತ ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಗುರುವಾರ ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ. ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಹಣ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ … Continued

ಸಮುದ್ರದ ಹುಲ್ಲಿನಲ್ಲಿದೆ ಯಕೃತ್ತಿನ ಕ್ಯಾನ್ಸರ್ ಗುಣಪಡಿಸುವ ಸಾಮರ್ಥ್ಯ : ಸಂಶೋಧನೆಯಲ್ಲಿ ಕಂಡುಹಿಡಿದ ಭಾರತೀಯ ವಿಜ್ಞಾನಿಗಳು…!

ಕ್ಯಾನ್ಸರ್ ಸೇರಿದಂತೆ ರೋಗಗಳ ವಿರುದ್ಧ ಹೋರಾಡಲು ವಿಜ್ಞಾನಿಗಳು ಹೊಸ ಸಂಪನ್ಮೂಲಗಳನ್ನು ಹುಡುಕುತ್ತಿದ್ದಾರೆ. ಅವುಗಳಲ್ಲಿ ಒಂದು ಸೀಗ್ರಾಸ್ ಇದುವರೆಗೆ ಅನ್ವೇಷಿಸದೆ ಉಳಿದಿದೆ. ಆದರೆ ಅದರ ಜೈವಿಕ ಸಕ್ರಿಯ ಸಂಯುಕ್ತಗಳು ಆಧುನಿಕ-ದಿನದ ಔಷಧಗಳಾಗುವ ಸಾಮರ್ಥ್ಯವನ್ನು ಹೊಂದಿವೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮಂಡಪಂ ಪ್ರದೇಶದಿಂದ ಸಂಗ್ರಹಿಸಲಾದ ಸಮುದ್ರದ ಹುಲ್ಲುಗಳ ಪ್ರಭೇದಗಳಾದ ಸಿರಿಂಗೋಡಿಯಮ್ ಐಸೋಟಿಫೋಲಿಯಮ್ ಅನ್ನು ಯಕೃತ್ತಿನ ಕ್ಯಾನ್ಸರ್ (liver cancer) … Continued