ವಿಡಿಯೋ | ತೀರ್ಥಹಳ್ಳಿ ಕಾರ್ಯಕ್ರಮದಲ್ಲಿ ವಂದೇ ಮಾತರಂನ ಎರಡೇ ಚರಣ ಹಾಡಿದ್ದಕ್ಕೆ ಸಿಎಂ ಎದುರೇ ಬಿಜೆಪಿ ಶಾಸಕ ಆಕ್ಷೇಪ

ಶಿವಮೊಗ್ಗ: ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ರಾಷ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಕ್ರಮಕ್ಕೆ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಮತ್ತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರಅವರ ಅಧ್ಯಕ್ಷತೆಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ಶನಿವಾರ ನಡೆದ ಸಭೆಯಲ್ಲಿ ಈ ವಿಚಾರ ಮತ್ತೆ ಚರ್ಚೆಗೆ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬೆಂಗಳೂರು, ತೀರ್ಥಹಳ್ಳಿ ಹಾಗೂ ಚೆನ್ನೈನ ಅನೇಕ ಭಾಗಗಳಲ್ಲಿ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ಪಟ್ಟಣದ ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿ ತೀರ್ಥಹಳ್ಳಿ ಮೂಲದವನು ಎಂದು … Continued

ಒಂದೇ ಕುಟುಂಬದ ಮೂವರು ಸಜೀವ ದಹನ : ಮತ್ತೊಬ್ಬ ಗಂಭೀರ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಕೆಕೋಡ ಗ್ರಾಮದಲ್ಲಿ ಒಂದೇ ಮನೆಯ ಮೂವರು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ ಎನ್ನಲಾಗಿದ್ದು, ಮತ್ತೊಬ್ಬರು ಗೋಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ … Continued

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇ.ಡಿ. ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಡಿಸಿಸಿ) ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ಮನೆ, ಕಚೇರಿ, ಫಾರಂ ಹೌಸ್‌ಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ … Continued

ತೀರ್ಥಹಳ್ಳಿ : ತುಂಗಾ ನದಿಗೆ ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನೀರುಪಾಲು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಈ ಘಟನೆ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ … Continued