ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ … Continued

ನಟಿ, ಮಾಜಿ ಸಂಸದೆ ವಿಜಯಶಾಂತಿ ಬಿಜೆಪಿಗೆ ಗುಡ್‌ ಬೈ

ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಕೆಲವೇ ದಿನಗಳಿರುವಾಗ ಮಾಜಿ ಸಂಸದೆ, ನಟಿ ವಿಜಯಶಾಂತಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ವಿಜಯಶಾಂತಿ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಜಿ.ಕಿಶನ್ ರೆಡ್ಡಿ ಅವರಿಗೆ ಕಳುಹಿಸಿದ್ದಾರೆ. ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಭಾಗವಹಿಸುವ ಸಮಾರಂಭದಲ್ಲಿ … Continued

ವೀಡಿಯೊ.: ತೆಲಂಗಾಣದಲ್ಲಿ ಪ್ರಧಾನಿ ರ‍್ಯಾಲಿಯಲ್ಲಿ ಲೈಟ್‌ ಟವರ್ ಏರಿದ ಮಹಿಳೆ ; ಭಾಷಣದ ಮಧ್ಯೆ ಗಮನಿಸಿ ʼಮಗಳೇ ಕೆಳಗೆ ಇಳಿʼ ಎಂದು ಪದೇ ಪದೇ ಮನವಿ ಮಾಡಿದ ಮೋದಿ | ವೀಕ್ಷಿಸಿ

ಹೈದರಾಬಾದ್‌ : ಶನಿವಾರ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಯಲ್ಲಿ, ಮಹಿಳೆಯೊಬ್ಬರು ಅವರ ಗಮನ ಸೆಳೆಯಲು ಮತ್ತು ತನ್ನ ಸಮಸ್ಯೆಗಳ ಬಗ್ಗೆ ಮಾತನಾಡಲು ಲೈಟ್ ಟವರ್ ಅನ್ನು ಏರಿದ್ದರು. ಭಾಷಣ ಮಾಡುತ್ತಿರುವಾಗ ಟವರ್‌ ಏರಿದ ಮಹಿಳೆಯನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಟವರ್‌ನಿಂದ ಕೆಳಗೆ ಬರುವಂತೆ ಮನವಿ ಮಾಡಿದರು. ವೀಡಿಯೊದಲ್ಲಿ ಮಹಿಳೆ ಎತ್ತರದ … Continued

ವೀಡಿಯೊ…: : ಚುನಾವಣಾ ಪ್ರಚಾರದ ವಾಹನದಿಂದ ಕೆಳಗೆ ಬೀಳುತ್ತಿದ್ದ ತೆಲಂಗಾಣ ಸಚಿವ ಕೆಟಿಆರ್ ; ರಕ್ಷಿಸಿದ ಗನ್‌ಮ್ಯಾನ್‌

ಹೈದರಾಬಾದ್ : ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ತೆಲಂಗಾಣದ ಐಟಿ ಸಚಿವ ಕೆ.ಟಿ. ರಾಮರಾವ್ ಅವರು ಗುರುವಾರ ಆರ್ಮೂರ್‌ನಲ್ಲಿ ರೋಡ್‌ಶೋ ವೇಳೆ ತಮ್ಮ ಪ್ರಚಾರ ವಾಹನದಿಂದ ಮುಕ್ಕುರಿಸಿ ಬಿದ್ದಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪ್ರಚಾರ ವಾಹನದ ಚಾಲಕ ಥಟ್ಟನೆ ಬ್ರೇಕ್ ಹಾಕಿದ್ದರಿಂದ ವಾಹನದ ಮೇಲೆ ಹಾಕಿದ್ದ ರೇಲಿಂಗ್ ಕೆಳಕ್ಕೆ ಜಾರಿ ನಿಂತಿದ್ದ ಸಚಿವರು ಮತ್ತು ಇತರರನ್ನು ಕೆಳಕ್ಕೆ … Continued

ತೆಲಂಗಾಣ ಚುನಾವಣೆ : ಪ್ರಚಾರದ ವೇಳೆ ಮೇದಕ್ ಸಂಸದರಿಗೆ ಚಾಕು ಇರಿತ | ವೀಡಿಯೊ

ಹೈದರಾಬಾದ್: ತೆಲಂಗಾಣ ಸಿದ್ದಿಪೇಟ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಇಂದು ಸೋಮವಾರ ಬಿಆರ್‌ಎಸ್‌ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಸದರು ಪಾದ್ರಿಯೊಬ್ಬರ ಮನೆಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ. ಒಬ್ಬ ಅಪರಿಚಿತ ವ್ಯಕ್ತಿ ಸಂಸದರ ಬಳಿಗೆ ಬಳಿಗೆ ಹೋದ ಮತ್ತು ಸಂಸದರೊಂದಿಗೆ ಕೈಕುಲುಕಲು ಬಯಸಿದ್ದಾನೆ, ಆದರೆ ಆತ ಇದ್ದಕ್ಕಿದ್ದಂತೆ … Continued

ಟಿವಿ ಶೋ ನೇರ ಪ್ರಸಾರದ ವೇಳೆ ಬಿಜೆಪಿ ಅಭ್ಯರ್ಥಿ ಕತ್ತು ಹಿಸುಕಿದ ಬಿಆರ್‌ಎಸ್ ಶಾಸಕ | ವೀಕ್ಷಿಸಿ

ಚುನಾವಣಾ ಕಣಕ್ಕಿಳಿದಿರುವ ತೆಲಂಗಾಣದಲ್ಲಿ ರಾಜಕೀಯ ತಾಪಮಾನ ತಾರಕಕ್ಕೇರುತ್ತಿದೆ. ಪ್ರತಿಸ್ಪರ್ಧಿ ರಾಜಕೀಯ ಬಿರುಸಿನ ವಾತಾವರಣದಲ್ಲಿ ಕೆಲ ಕೊಳಕು ಘಟನೆಗಳೂ ರಾಜ್ಯದಲ್ಲಿ ನಡೆಯುತ್ತಿವೆ. ತಾಜಾ ಘಟನೆಯೊಂದರಲ್ಲಿ, ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆ.ಪಿ. ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ … Continued

ತೆಲಂಗಾಣ ವಿಧಾನಸಭಾ ಚುನಾವಣೆ : ಬಿಆರ್‌ ಎಸ್‌-ಕಾಂಗ್ರೆಸ್‌ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ತಾರೆ..? ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ತೆಲಂಗಾಣದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲು ಕಂಡುಬಂದಿದೆ. 119 ಅಸೆಂಬ್ಲಿ ಸ್ಥಾನಗಳ ವಿಧಾನಸಭೆಯಲ್ಲಿ ಭಾರತ ರಾಷ್ಟ್ರ ಸಮಿತಿ (BRS ) ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 88 ಸ್ಥಾನಗಳಿಗೆ ಹೋಲಿಸಿದರೆ 70 … Continued

ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಗಢ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ : 5 ರಾಜ್ಯಗಳಲ್ಲಿ ಎಬಿಪಿ-ಸಿವೋಟರ್ ಸಮೀಕ್ಷೆ- ತುರುಸಿನ ಸ್ಪರ್ಧೆಯಲ್ಲಿ ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಲ್ಪ ಮುಂದೆ, ರಾಜಸ್ಥಾನದಲ್ಲಿ ಬಿಜೆಪಿಗೆ ಬಹುಮತ ಸಾಧ್ಯತೆ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಮತದಾನವು ನವೆಂಬರ್ 7 ರಂದು ಪ್ರಾರಂಭವಾಗಿ ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತ್ತು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕಗಳ ಘೋಷಣೆ

ನವದೆಹಲಿ: ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಚುನಾವಣಾ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ. ಈ ಐದು ರಾಜ್ಯಗಳ ಚುನಾವಣೆಗಳು ನವೆಂಬರ್ 7ರಿಂದ ನಡೆಯಲಿದ್ದು, ಮತಗಳ ಎಣಿಕೆ ಡಿಸೆಂಬರ್ 3, 2023 ರಂದು ನಡೆಯಲಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಸುಗಮ ಮತ್ತು … Continued