ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್…!

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು, ಅದರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಟೆಂಪೋ ಟ್ರಾವೆಲರ್ ವಿಮಾನಕ್ಕೆ ಡಿಕ್ಕಿ ಹೊಡೆದಿದ್ದು, ತನಿಖೆ ನಡೆಯುತ್ತಿದೆ ಎಂದು ಇಂಡಿಗೋ ಹೇಳಿಕೆ ತಿಳಿಸಿದೆ. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. … Continued