ಕರ್ನಾಟಕದ 650 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್​ ರಾಜ​ಕುಮಾರ್​ಗೆ ಶ್ರದ್ಧಾಂಜಲಿ

ಬೆಂಗಳೂರು: ಇತ್ತೀಚಿಗೆ ನಿಧನರಾದ ಪುನೀತ್​ ರಾಜ್​ಕುಮಾರ್‌ ಸ್ಮರಣಾರ್ಥ ರಾಜ್ಯದ ಎಲ್ಲಾ 650 ಚಿತ್ರಮಂದಿರಗಳಲ್ಲಿ ಇಂದು (ನವೆಂಬರ್ 7) ಸಂಜೆ 6 ಗಂಟೆಗೆ ಪುನೀತ್ ರಾಜ್​​ಕುಮಾರ್​​ಗೆ ವಿಶೇಷ ಹಾಡನ್ನು ಹಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಲ್ಲ ಥಿಯೆಟರ್‌ಗಳಲ್ಲಿ ಪ್ರದರ್ಶಕರ ವಲಯ ಮತ್ತು ಥಿಯೇಟರ್ ಸಿಬ್ಬಂದಿ ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು. … Continued