ಅಸನಿ ಚಂಡುಮಾರತ: ಕರ್ನಾಟಕದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮೂರು ದಿನ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಅಸನಿ ಚಂಡಮಾರುತದಿಂದ ಕರ್ನಾಟಕದಲ್ಲಿ ಮುಂದಿನ 3ರಿಂದ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. … Continued