ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಶಾಸಕ ಅರೆಸ್ಟ್: ಮಾಜಿ ಸಚಿವರ ನಂತರ 2ನೇ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ.) ರಾತ್ರಿ ವಿಚಾರಣೆ ನಡೆಸಿದ ನಂತರ ಇಂದು, ಮಂಗಳವಾರ ಮುಂಜಾನೆ ಬಂಧಿಸಿದೆ. ಇವರು ಈ ಹಗರಣದಲ್ಲಿ ಬಂಧಿತರಾದ ಎರಡನೇ ತೃಣಮೂಲ ನಾಯಕರಾಗಿದ್ದಾರೆ. ಜುಲೈನಲ್ಲಿ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿಗೆ ಸಂಬಂಧಿಸಿದ ಆಸ್ತಿಗಳಿಂದ ನಗದು ರಾಶಿಯನ್ನು … Continued

ದೀದಿ ಮುಖದಲ್ಲಿ ಸೋಲಿನ ಭೀತಿ ಕಾಣುತ್ತಿದೆ: ಅಧೀರ್‌ ರಂಜನ್‌

ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ತಮ್ಮ ಪಕ್ಷ ಪಶ್ಚಿಮ ಬಂಗಾಳದಲ್ಲಿ ಪರಾಭವಗೊಳ್ಳುವ ಭೀತಿ ಉಂಟಾಗಿದ್ದು, ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯುವಂತೆ ಕೋರಿ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ರಂಜನ್‌ ತಿಳಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯ ಬೆರ್ಹಾಂಪುರದಲ್ಲಿ ನಡೆದ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಧೀರ್ ರಂಜನ್ … Continued

೨೦೨೪ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಮೋದಿ ವಿರುದ್ಧ ದೀದಿ ಸ್ಪರ್ಧೆ: ಟಿಎಂಸಿ

ಕೋಲ್ಕತ್ತ: ನಂದಿಗ್ರಾಮ ಕ್ಷೇತ್ರದಲ್ಲಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಗೆಲ್ಲುವುದು ಖಚಿತವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೀದಿ ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಟಿಎಂಸಿ ತಿಳಿಸಿದೆ. ನಂದಿಗ್ರಾಮದಲ್ಲಿ ಸೋಲುವ ಮಾತೇ ಇಲ್ಲ. ಬೇರೆ ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಅವಶ್ಯಕತೆಯಿಲ್ಲ. ಮಮತಾ ಬ್ಯಾನರ್ಜಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಿಂದ ಸೆಣೆಸಲಿದ್ದು, ಮೋದಿಯವರು ಸುರಕ್ಷಿತ ಕ್ಷೇತ್ರ … Continued

ಪಶ್ಚಿಮ ಬಂಗಾಳ ಎಬಿಪಿ-ಸಿ ವೋಟರ್ಸ್‌ ಸಮೀಕ್ಷೆ 2021:ಟಿಎಂಸಿ ಅಧಿಕಾರಕ್ಕೆ, ಬಿಜೆಪಿ ತುಸು ಹಿಂದೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮುಂಚಿನ ಮನಸ್ಥಿತಿಯನ್ನು ನಿರ್ಧರಿಸುವ ಸಲುವಾಗಿ, ಎಬಿಪಿ ನ್ಯೂಸ್ ಮತ್ತು ಸಿ-ವೋಟರ್ ಮತದಾರರ ಮನಸ್ಸಿನಲ್ಲಿ ಯಾವ ರಾಜಕೀಯ ಪಕ್ಷವು ಪ್ರಗತಿ ಸಾಧಿಸಿದೆ ಎಂಬುದನ್ನು ನೋಡಲು ಕ್ಷಿಪ್ರ ಸಮೀಕ್ಷೆ ನಡೆಸಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ಮೊದಲ ಹಂತದ ಮತದಾನವು ಶನಿವಾರ ನಡೆಯಲಿದೆ. ಮತದಾನದ ದಿನಾಂಕ ಹತ್ತಿರವಾಗುವ ಸಂದರ್ಭದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ … Continued

ಟಿಎಂಸಿ ಪರ ಪ್ರಚಾರ ಮಾಡಬೇಡಿ: ಪವಾರ್,‌ ತೇಜಸ್ವಿಗೆ ಕಾಂಗ್ರೆಸ್ ಮನವಿ ‌

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪರ ಪ್ರಚಾರ ಮಾಡಬೇಡಿ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರಿಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದ ಪ್ರದೀಪ್‌ ಭಟ್ಟಾಚಾರ್ಯ ಉಭಯ ಮುಖಂಡರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸ್ಟಾರ್‌ ಪ್ರಚಾರಕರಿಬ್ಬರೂ ಟಿಎಂಸಿ ಪರ ಪ್ರಚಾರ ಮಾಡಿದರೆ ರಾಜ್ಯದ ಮತದಾರರು ಗೊಂದಲಕ್ಕೀಡಾಗುವರು. ಆದ್ದರಿಂದ ತೃಣಮೂಲ … Continued

ತೃಣಮೂಲ ಕಾಂಗ್ರೆಸ್‌ ಸೇರಿದ ಬಿಜೆಪಿ ಮಾಜಿ ನಾಯಕ ಯಶ್ವಂತ ಸಿನ್ಹಾ

ಬಿಜೆಪಿ ಮಾಜಿ ನಾಯಕ ಮತ್ತು ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಮಾಜಿ ಹಣಕಾಸು ಸಚಿವರು ಕೊಲ್ಕತ್ತಾದ ಟಿಎಂಸಿ ಭವನಕ್ಕೆ ಆಗಮಿಸಿ ಔಪಚಾರಿಕವಾಗಿ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ರಾಜ್ಯವು ಬಹು-ಹಂತದ ವಿಧಾನಸಭಾ ಚುನಾವಣೆ ಪ್ರಾರಂಭಿಸುವ ಕೆಲವೇ ವಾರಗಳ ಮೊದಲು ಸಿನ್ಹಾ ಟಿಎಂಸಿ ಸೇರುವ ನಿರ್ಧಾರ ಹೊರಬಿದ್ದಿದೆ. ಅವರು … Continued

ಪಶ್ಚಿಮ ಬಂಗಾಳ: ಬಿಜೆಪಿ ತೆಕ್ಕೆಗೆ ಸೇರಿದ ಟಿಎಂಸಿ ಸಚಿವ, ಶಾಸಕ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಎಂಸಿ ಟಿಕೇಟ್‌ ನಿರಾಕರಿಸಿದ ನಂತರ ಸಚಿವ ಬಚ್ಚು ಹನ್ಸದಾ ಹಾಗೂ ಶಾಸಕ ಗೌರಿಶಂಕರ ದತ್ತ ಬಿಜೆಪಿ ಪಾಳೆಯಕ್ಕೆ ಬಂದು ಸೇರಿದ್ದಾರೆ. ಉತ್ತರ ಬಂಗಾಳ ಅಭಿವೃದ್ಧಿ ರಾಜ್ಯ ಸಚಿವ ಬಚ್ಚು ಹನ್ಸದಾ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಅವರು ದಕ್ಷಿಣ ದಿನಾಜ್‌ಪುರ ಜಿಲ್ಲೆಯ … Continued

ಚುನಾವಣೆ ಹೊಸ್ತಿಲಲ್ಲಿ ಮತ್ತೆ ಐವರು ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆ…!

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯಲಿರುವ ಚುನಾವಣೆ ಸಮೀಪಿಸತ್ತಿದ್ದಂತೆಯೇ ಮಮತಾ ಬ್ಯಾನರ್ಜಿಗೂ ತಲೆನೋವು ಜಾಸ್ತಿಯಾಗುತ್ತಿದೆ. ಚುನಾವಣೆಯ ಹೊಸ್ತಿಲಲ್ಲಿಯೇ ಪಕ್ಷದ ಐವರು ಶಾಸಕರು ತೃಣಮೂಲ ಕಾಂಗ್ರೆಸ್‌ ತೊರೆದು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ಸೇರಿದ್ದಾರೆ. ಅದೂ ಪ್ರಧಾನಿ ಮೋದಿ ನಡೆಸಿದ ಮಹಾ ಸಾವೇಶದ ಮಾರನೇ ದಿನವೇ..! ಟಿಎಂಸಿಯ ಐವರು ಶಾಸಕರು ಸೋಮವಾರ ಬಿಜೆಪಿ ಸೇರಿದ್ದು, … Continued

ಪಶ್ಚಿಮ ಬಂಗಾಳ: ಟಿಎಂಸಿ-ಬಿಜೆಪಿ ಘರ್ಷಣೆ, ಬಾಂಬ್‌ ದಾಳಿಗೆ ೬ ಗಾಯ

ಕೊಲ್ಕತ್ತಾ:  ಶುಕ್ರವಾರ ರಾತ್ರಿ, ಗೋಸಾಬಾ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗೆ ಸಾಕ್ಷಿಯಾಗಿದ್ದು, ಪರಸ್ಪರ ಬಾಂಬ್‌ಗಳನ್ನು ಎಸೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಕ್ಯಾನಿಂಗ್ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಬಾಂಬ್ ಸ್ಕ್ವಾಡ್ ಮತ್ತು … Continued

ಕೊವಿಡ್‌ ವ್ಯಾಕ್ಸಿನೇಶನ್‌ ಪ್ರಮಾಣಪತ್ರದ ಮೇಲಿನ ಮೋದಿ ಚಿತ್ರ ತೆಗೆಯಲು ಹೇಳಿದ ಚುನಾವಣಾ ಆಯೋಗ

ಮಾದರಿ ನೀತಿ ಸಂಹಿತೆಯ ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ವಿತರಿಸಲಾದ ಕೊವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಛಾಯಾಚಿತ್ರವನ್ನು ತೆಗೆದುಹಾಕಲು ಭಾರತ ಚುನಾವಣಾ ಆಯೋಗ (ಇಸಿಐ) ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯವನ್ನು ಕೇಳಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ . ಕೊವಿಡ್‌ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರವು … Continued