ಲೋಕಸಭೆಯ ನೈತಿಕ ಸಮಿತಿ ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ ಮಹುವಾ ಮೊಯಿತ್ರಾ

ನವದೆಹಲಿ: ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆಯ ನೈತಿಕ ಸಮಿತಿಯು ಪ್ರಶ್ನೆಗಳಿಗೆ ಹಣದ ಆರೋಪಕ್ಕೆ ನೀಡಿದ ಸಮನ್ಸ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅವರ ಉತ್ತರದಲ್ಲಿ, ಅವರು ಅಕ್ಟೋಬರ್ 31 ರಂದು ನಿಗದಿಪಡಿಸಿದ ದಿನಾಂಕದಂದು ಸಮಿತಿಯ ಮುಂದೆ ಹಾಜರಾಗಲು ತನ್ನ ಅಸಮರ್ಥತೆಯನ್ನು ತಿಳಿಸಿದರು. ಆದಾಗ್ಯೂ, ಅವರು ನವೆಂಬರ್ 5 ರ ನಂತರದಲ್ಲಿ ಯಾವುದೇ ಸಮಯ ಹಾಗೂ … Continued

ಮಹುವಾ ಮೊಯಿತ್ರಾ ವಿರುದ್ಧದ ಆರೋಪ “ಗಂಭೀರ”ವಾದದ್ದು ಎಂದ ಸಂಸತ್ತಿನ ನೈತಿಕ ಸಮಿತಿ: ಅಕ್ಟೋಬರ್ 31 ರಂದು ಹಾಜರಾಗುವಂತೆ ಮೊಯಿತ್ರಾಗೆ ಸಮನ್ಸ್

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸಂಸತ್ತಿನ ಸಮಿತಿಯು ಸಮನ್ಸ್ ನೀಡಲಿದ್ದು, ಅಕ್ಟೋಬರ್ 31 ರಂದು ಅದರ ಮುಂದೆ ಹಾಜರಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮಹುವಾ ಮೊಯಿತ್ರಾ ವಿರುದ್ಧದ ‘ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಕ್ಕಾಗಿ ಹಣ’ ಆರೋಪಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸಭೆಯ ನಡುವೆಯೇ ಈ ವಿಷಯ ಬಹಿರಂಗವಾಗಿದೆ. ಸಂಸದೆ ಮಹುವಾ ಮೊಯಿತ್ರಾ … Continued

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆಗೆ ಕೋರಿ ʼಲೋಕಪಾಲʼಕ್ಕೆ ಪತ್ರ ಬರೆದ ಬಿಜೆಪಿ ಸಂಸದ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿಯೊಬ್ಬರಿಂದ “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದ ನಂತರ, ಬಿಜೆಪಿ ಸಂಸದ ನಿಶಿಕಾಂತ ದುಬೆ ಈಗ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ, ಅವರು ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಪಾಲಕ್ಕೆ ತೆರಳಿ, “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು … Continued

ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ಸಂಸದೀಯ ಲಾಗಿನ್ ಐಡಿ ಬಳಸಲಾಗಿದೆ : ಬಿಜೆಪಿ ಸಂಸದ ನಿಶಿಕಾಂತ ದುಬೆ ಆರೋಪ

ನವದೆಹಲಿ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಂಸತ್ತಿನಲ್ಲಿ ‘ಪ್ರಶ್ನೆಗಾಗಿ ಹಣ’ದ ಗಂಭೀರ ಆರೋಪದ ನಡುವೆಯೇ, ಲೋಕಸಭೆ ಸದಸ್ಯ ನಿಶಿಕಾಂತ ದುಬೆ ಅವರು ಈಗ ಮತ್ತೊಂದು ಆರೋಪ ಮಾಡಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ʼಸಂಸದೀಯ ಲಾಗಿನ್‌ ಐಡಿʼಯನ್ನು ಬಳಸಲಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ. ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) … Continued

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ: ಬಿಜೆಪಿ ಸಂಸದನ ಗಂಭೀರ ಆರೋಪ

ನವದೆಹಲಿ: ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್‌ ಮಾಡಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಸಂಸತ್ತಿನಲ್ಲಿ “ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ” ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಬಿಜೆಪಿಯ ನಿಶಿಕಾಂತ ದುಬೆ ಒತ್ತಾಯಿಸಿದ್ದಾರೆ. ಈ ಬಗ್ಗೆ ದುಬೆ ಅವರು ಲೋಕಸಭೆಯ ಸ್ಪೀಕರ್ … Continued

ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ಟಿಎಂಸಿ, ಎಎಪಿ, ಸಿಪಿಐ ನಿರ್ಧಾರ

ನವದೆಹಲಿ: ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಘೋಷಿಸಿದ ಕೆಲವೇ ಗಂಟೆಗಳ ನಂತರ, ಆಮ್ ಆದ್ಮಿ ಪಕ್ಷವೂ (ಎಎಪಿ) ಕಾರ್ಯಕ್ರಮಕ್ಕೆ ಹಾಜರಾಗಲು ಗೈರುಹಾಜರಾಗಲು ನಿರ್ಧರಿಸಿತು. ಎಎಪಿ ರಾಜ್ಯಸಭಾ ಸಂಸದ ಸಂಜಯ ಸಿಂಗ್ ಅವರು ಟ್ವಿಟರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ರಾಷ್ಟ್ರಪತಿಗಳನ್ನು … Continued

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಶಾಸಕ ಅರೆಸ್ಟ್: ಮಾಜಿ ಸಚಿವರ ನಂತರ 2ನೇ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ.) ರಾತ್ರಿ ವಿಚಾರಣೆ ನಡೆಸಿದ ನಂತರ ಇಂದು, ಮಂಗಳವಾರ ಮುಂಜಾನೆ ಬಂಧಿಸಿದೆ. ಇವರು ಈ ಹಗರಣದಲ್ಲಿ ಬಂಧಿತರಾದ ಎರಡನೇ ತೃಣಮೂಲ ನಾಯಕರಾಗಿದ್ದಾರೆ. ಜುಲೈನಲ್ಲಿ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿಗೆ ಸಂಬಂಧಿಸಿದ ಆಸ್ತಿಗಳಿಂದ ನಗದು ರಾಶಿಯನ್ನು … Continued

ದೀದಿ ಮುಖದಲ್ಲಿ ಸೋಲಿನ ಭೀತಿ ಕಾಣುತ್ತಿದೆ: ಅಧೀರ್‌ ರಂಜನ್‌

ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ತಮ್ಮ ಪಕ್ಷ ಪಶ್ಚಿಮ ಬಂಗಾಳದಲ್ಲಿ ಪರಾಭವಗೊಳ್ಳುವ ಭೀತಿ ಉಂಟಾಗಿದ್ದು, ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯುವಂತೆ ಕೋರಿ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ರಂಜನ್‌ ತಿಳಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯ ಬೆರ್ಹಾಂಪುರದಲ್ಲಿ ನಡೆದ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಧೀರ್ ರಂಜನ್ … Continued

೨೦೨೪ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಮೋದಿ ವಿರುದ್ಧ ದೀದಿ ಸ್ಪರ್ಧೆ: ಟಿಎಂಸಿ

ಕೋಲ್ಕತ್ತ: ನಂದಿಗ್ರಾಮ ಕ್ಷೇತ್ರದಲ್ಲಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಗೆಲ್ಲುವುದು ಖಚಿತವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೀದಿ ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಟಿಎಂಸಿ ತಿಳಿಸಿದೆ. ನಂದಿಗ್ರಾಮದಲ್ಲಿ ಸೋಲುವ ಮಾತೇ ಇಲ್ಲ. ಬೇರೆ ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಅವಶ್ಯಕತೆಯಿಲ್ಲ. ಮಮತಾ ಬ್ಯಾನರ್ಜಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಿಂದ ಸೆಣೆಸಲಿದ್ದು, ಮೋದಿಯವರು ಸುರಕ್ಷಿತ ಕ್ಷೇತ್ರ … Continued

ಪಶ್ಚಿಮ ಬಂಗಾಳ ಎಬಿಪಿ-ಸಿ ವೋಟರ್ಸ್‌ ಸಮೀಕ್ಷೆ 2021:ಟಿಎಂಸಿ ಅಧಿಕಾರಕ್ಕೆ, ಬಿಜೆಪಿ ತುಸು ಹಿಂದೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮುಂಚಿನ ಮನಸ್ಥಿತಿಯನ್ನು ನಿರ್ಧರಿಸುವ ಸಲುವಾಗಿ, ಎಬಿಪಿ ನ್ಯೂಸ್ ಮತ್ತು ಸಿ-ವೋಟರ್ ಮತದಾರರ ಮನಸ್ಸಿನಲ್ಲಿ ಯಾವ ರಾಜಕೀಯ ಪಕ್ಷವು ಪ್ರಗತಿ ಸಾಧಿಸಿದೆ ಎಂಬುದನ್ನು ನೋಡಲು ಕ್ಷಿಪ್ರ ಸಮೀಕ್ಷೆ ನಡೆಸಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ಮೊದಲ ಹಂತದ ಮತದಾನವು ಶನಿವಾರ ನಡೆಯಲಿದೆ. ಮತದಾನದ ದಿನಾಂಕ ಹತ್ತಿರವಾಗುವ ಸಂದರ್ಭದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ … Continued