ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…

ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಹೇಳಿದ್ದಾರೆ. ಇಂದು, ಶುಕ್ರವಾರ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಉಪಾಹಾರ ಸೇವನೆ ಬಳಿಕ … Continued

ಜಿಪಂ,ತಾಪಂ ಚುನಾವಣೆ:ವಿಸ್ತೃತ ವಿಚಾರಣೆ ಆಗಬೇಕು ಎಂದ ಹೈಕೋರ್ಟ್, ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವುದಕ್ಕೆ ತಡೆ ನೀಡುವ ವಿಚಾರದಲ್ಲಿ ವಿಸ್ತೃತ ವಿಚಾರಣೆಯ ಅಗತ್ಯವಿದೆ ಎಂದು … Continued

ಗ್ರಾಪಂ, ತಾಪಂ, ಜಿಪಂ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೆ ಚಿಂತನೆ: ಸಚಿವ ಈಶ್ವರಪ್ಪ

ಬೆಂಗಳೂರು: ಸರ್ಕಾರ ಈಗ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೂ ಚಿಂತನೆ ನಡೆಸಿದೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಪ್ರತಿನಿಧಿಗಳ ವೇತನ ಹೆಚ್ಚಳ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಸ್ಥಳೀಯ … Continued

ತಾಪಂ-ಜಿಪಂ ಮೀಸಲಾತಿ ನಿಗದಿಗೆ ಸಚಿವ ಈಶ್ವರಪ್ಪ ಅಸಮಾಧಾನ

ಕಲಬುರಗಿ: ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಪ್ರತಿನಿಧಿಯಾಗಿ ಇದು ನನ್ನ ವಯಕ್ತಿಕ ಅಭಿಪ್ರಾಯವೇ ಹೊರತು ಸಚಿವನಾಗಿ ಅಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ ವರೆಗೆ ಚುನಾವಣೆ ಮುಂದೂಡಬೇಕೆಂದು ಸರ್ಕಾರ ರಾಜ್ಯ … Continued

ನಿಗದಿತ ಸಮಯಕ್ಕೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡುವುದಿಲ್ಲ ಇಲ್ಲ. ನಿಗದಿತ ಸಮಯಕ್ಕೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಶಾಸಕ ಸುನೀಲುಕುಮಾರ ಅವರು ವಿಷಯ ಪ್ರಸ್ತಾಪಿಸಿದ ವೇಳೆ ಅವರು ಜಿಪಂ, ತಾಪಂ ಚುನಾವಣೆ ಮುಂದೂಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು … Continued