ವಿಡಿಯೋ | ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆಗೆ ಯತ್ನ ; ಜೆಡಿಎಸ್‌ ನಾಯಕನ ಬಂಧನ

ಬೆಂಗಳೂರು: ಟ್ರಾಫಿಕ್‌ನಲ್ಲಿ ತಮ್ಮ ವಾಹನ ನಿಲ್ಲಿಸಿದ ಕಾರಣಕ್ಕೆ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಅವರ ಕಾಲರ್ ಹಿಡಿದು ಹಲ್ಲೆಗೆ ಮುಂದಾದ ಆರೋಪದ ಮೇಲೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬೆಂಗಳೂರಿನ ಗೊಟ್ಟಿಗೆರೆ ಜಂಕ್ಷನ್‌ನಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಅರುಣ … Continued

ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ವೀಡಿಯೊ..| ಶಿವಮೊಗ್ಗ: ಕಾರು ನಿಲ್ಲಿಸುವಂತೆ ಸೂಚಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಎಳೆದೊಯ್ದ ಕಾರು ಚಾಲಕ…!

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಸಹ್ಯಾದ್ರಿ ಕಾಲೇಜು ಬಳಿ ಅಧಿಕಾರಿಗಳು ನಿತ್ಯ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದ … Continued