14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದು, ಒಟ್ಟು 14 ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮತ್ತೆ ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಗಳನ್ನು ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ ಅವರು ಈ ಅಧಿಕೃತ … Continued

ರಾಜ್ಯ ಸರ್ಕಾರದಿಂದ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, … Continued

ಎಂಇಎಸ್‌ ಮುಖಂಡನ ಜೊತೆ ಸೆಲ್ಫಿ: ಸಿಪಿಐ ಎತ್ತಂಗಡಿ…

ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಶುಭಂ ಶೆಳಕೆ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಗೆ ಅವರಿಗೆ ಸರ್ಕಾರ ವರ್ಗಾವಣೆಯ ಶಿಕ್ಷೆ ನೀಡಿದೆ. ನವಂಬರ್ ಒಂದರ ಶನಿವಾರ ಕರ್ನಾಟಕ ರಾಜ್ಯೋತ್ಸವ ನಡೆದಿತ್ತು. ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರೋಧವಾಗಿ ಎಂಇಎಸ್ ಕರಾಳ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ. ಜಿಲ್ಲಾಡಳಿತ ಅನುಮತಿ … Continued

ಹೊಸ ವರ್ಷಕ್ಕೆ ಸರ್ಕಾರದಿಂದ 62 ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಬಡ್ತಿ ನೀಡಿದೆ. ಇತ್ತೀಚೆಗಷ್ಟೆ ಏಳು ಐಪಿಎಸ್ (IPS transfer)​ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ ಮತ್ತೆ ಹಲವರಿಗೆ ಬಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಹೊಸ ವರ್ಷಕ್ಕೆ ರಾಜ್ಯ ಸರ್ಕಾರ 62 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ … Continued

ನಾಗಮಂಗಲ ಹಿಂಸಾಚಾರ: ಗುಪ್ತಚರ ಇಲಾಖೆ ಎಡಿಜಿಪಿ ಎತ್ತಂಗಡಿ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ಗುಪ್ತಚರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಇದೆ ಎಂಬ ಆರೋಪ ಕೇಳಿಬರುತ್ತಿರುವ ಮಧ್ಯೆ ರಾಜ್ಯ ಸರ್ಕಾರ ಶುಕ್ರವಾರ ಗುಪ್ತಚರ ಇಲಾಖೆ ಎಡಿಜಿಪಿಯನ್ನು ವರ್ಗಾವಣೆ ಮಾಡಿದೆ. ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಶರತಚಂದ್ರ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಂಚಾರ, ರಸ್ತೆ … Continued

ಉತ್ತರ ಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಬಂದಿದ್ದ ಗಂಗೂಬಾಯಿ ‌ಮಾನಕರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕಿಯಾಗಿದ್ದ ಲಕ್ಷ್ಮಿ ಪ್ರಿಯಾ ಅವರನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರ್ಕಾರ ‌ನೇಮಕ‌ ಮಾಡಿದೆ.‌ ರಾಜ್ಯ ಸರ್ಕಾರ ಇದೀಗ ಲಕ್ಷ್ಮಿ ಪ್ರಿಯಾ ಅವರನ್ನು … Continued

ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ 21 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಅವರ ಬದಲಿಗೆ ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಅವರು ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಡಾ. … Continued

ಅಧಿಕಾರ ದುರ್ಬಳಕೆ ಆರೋಪ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಎತ್ತಂಗಡಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಲ್ಲಿದ್ದ ಅವರನ್ನು ಕೋಲಾರಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ … Continued

ಡಿಸಿಎಂ ಡಿ.ಕೆ. ಶಿವಕುಮಾರ ಟಿಪ್ಪಣಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್‌ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್‌ಡಿಎ, ಎಫ್‌ಡಿಎ, … Continued

10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರಕಾರ ಶುಕ್ರವಾರ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾದ 10 ಐಎಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ. ಡಾ. ಕುಮಾರ- ಜಿಲ್ಲಾಧಿಕಾರಿ, ಮಂಡ್ಯ ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ ಡಾ. ವೆಂಕಟೇಶ ಎಂ.ವಿ.- ಆಯುಕ್ತರು, ಪಶುಸಂಗೋಪನಾ ಇಲಾಖೆ ರವೀಂದ್ರ ಪಿ.ಎನ್.- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಶ್ರೀನಿವಾಸ ಕೆ.- … Continued