ಟಿಎಂಸಿ ಪಕ್ಷದ ಹೆಸರು-ಚಿಹ್ನೆ ವಿವಾದ: 3 ತಿಂಗಳಲ್ಲಿ ತೀರ್ಮಾನಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಗಡುವು

ನವದೆಹಲಿ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಹೆಸರು ಹಾಗೂ ‘ಹೂವು-ಹುಲ್ಲು’ (Flower and Grass) ಚುನಾವಣಾ ಚಿಹ್ನೆ ಕುರಿತಂತೆ ಪಕ್ಷದ ಎರಡು ಬಣಗಳ ನಡುವೆ ಉಂಟಾಗಿರುವ ವಿವಾದವನ್ನು ಮೂರು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ … Continued

ಟಿಎಂಸಿ ಕಿತ್ತಾಟ : ಉಪಚುನಾವಣೆಗೆ ಪಕ್ಷದ ಹೆಸರು, ಚಿಹ್ನೆ ಬಳಸದಂತೆ ಎರಡೂ ಬಣಗಳಿಗೆ ಚುನಾವಣಾ ಆಯೋಗ ನಿರ್ಬಂಧ

ನವದೆಹಲಿ: ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಮೇಲಿನ ನಿಯಂತ್ರಣಕ್ಕಾಗಿ ನಡೆಯುತ್ತಿರುವ ಎರಡು ಬಣಗಳ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ (ಇಸಿಐ) ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪಕ್ಷದ ಹೆಸರು ಹಾಗೂ ಅದರ ಚುನಾವಣಾ ಚಿಹ್ನೆಯಾದ ‘ಹೂವು ಮತ್ತು ಹುಲ್ಲು’ (Flowers & … Continued

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಿರಿಯ ನಾಯಕ ಆಶಿಶ್ ಬ್ಯಾನರ್ಜಿ (74) ಅವರು ಭಾನುವಾರ ಬೆಳಗ್ಗೆ ಬೀರಭೂಮ್ ಜಿಲ್ಲೆಯ ರಾಮಪುರಹತ್‌ನಲ್ಲಿರುವ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಚೇರಿಯಲ್ಲೇ ಅವರ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಈ ಕಚೇರಿ ಬ್ಯಾನರ್ಜಿ ಅವರ ನಿವಾಸದ … Continued

ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮೂವರು ಟಿಎಂಸಿ ಮಾಜಿ ಸಂಸದರಿಗೆ ರಾಜ್ಯಸಭೆ ಟಿಕೆಟ್ ನೀಡಿದ ಬಿಜೆಪಿ

ನವದೆಹಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಗುರುವಾರ ಸಂಜೆ (ಜುಲೈ 9) ಬಿಜೆಪಿ ಸೇರ್ಪಡೆಯಾದ ಬೆನ್ನಿಗೇ ರಾಜ್ಯಸಭೆ ಮೂವರು ಮಾಜಿ ಸದಸ್ಯರಾದ ಸುಖೇಂದು ಶೇಖರ ರಾಯ್, ಸುಷ್ಮಿತಾ ದೇವ್ ಹಾಗೂ ಪ್ರಕಾಶ ಚಿಕ್ ಬರಾಯಿಕ್ ಅವರಿಗೆ ಜುಲೈ 24ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಪಕ್ಷಾಂತರಕ್ಕೂ ಮುನ್ನವೇ ಈ ಮೂವರು … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued

ತೃಣಮೂಲ Vs ತೃಣಮೂಲ ಕದನ ತೀವ್ರ : ಪಕ್ಷದ ಪ್ರಧಾನ ಕಚೇರಿಯನ್ನೇ ತಮ್ಮ ವಶಕ್ಕೆ ತೆಗೆದುಕೊಂಡ ಬಂಡಾಯ ಬಣ

ಕೊಲ್ಕತ್ತಾ: ರಿತಬ್ರತ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬಂಡಾಯ ಬಣವು ಕೊಲ್ಕತ್ತಾದ ಮೆಟ್ರೋಪಾಲಿಟನ್ ಪ್ರದೇಶದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಫಿರ್ಹಾದ್ ಹಕೀಮ್, ಸಂದೀಪನ್ ಸಹಾ, ಜಾವೇದ್ ಖಾನ್ ಹಾಗೂ ಪಕ್ಷದ ಖಜಾಂಚಿ ಅಕ್ರುಜ್ಜಮಾನ ಸೇರಿದಂತೆ ಹಲವು ಶಾಸಕರೊಂದಿಗೆ ಕಚೇರಿಗೆ ಆಗಮಿಸಿದ ಬಂಡಾಯ ಬಣದ ನಾಯಕರು, ಕಚೇರಿಯ … Continued

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿ ರಾಜ್ಯಸಭಾ ಸದಸ್ಯತ್ವಕ್ಕೆ ಸುಶ್ಮಿತಾ ದೇವ್ ರಾಜೀನಾಮೆ

ನವದೆಹಲಿ: ಪಕ್ಷದೊಳಗಿನ ಭಿನ್ನಮತ ಮತ್ತು ಸರಣಿ ಬಂಡಾಯದಿಂದ ಕಂಗಾಲಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (TMC) ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ತೀವ್ರ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್ ಅವರು ಬುಧವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿಗಳಾದ ಸಿ. ಪಿ. ರಾಧಾಕೃಷ್ಣನ್ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued