ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ : ಕೋಲ್ಕತ್ತಾ ಪೊಲೀಸ್‌ ಆಯುಕ್ತ, ಮಾಜಿ ಪ್ರಾಂಶುಪಾಲರ ‘ಕಸ್ಟಡಿ ವಿಚಾರಣೆ’ಗೆ ಟಿಎಂಸಿ ಸಂಸದ ಒತ್ತಾಯ

ಕೋಲ್ಕತ್ತಾ : ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರನ್ನು ಸಿಬಿಐ “ಕಸ್ಟಡಿ ವಿಚಾರಣೆ”ಗೆ ಒಳಪಡಿಸಬೇಕು ಎಂದು ಆಡಳಿತಾರೂಢ ಟಿಎಂಸಿ ಸಂಸದ ಸುಖೇಂದು ಶೇಖರ ರೇ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಸಿಬಿಐ, ವೈದ್ಯಕೀಯ ಸಂಸ್ಥೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ … Continued

ವೀಡಿಯೊ…| ಪಶ್ಚಿಮ ಬಂಗಾಳದಲ್ಲಿ ‘ಬೀದಿ ನ್ಯಾಯʼದಲ್ಲಿ ನಡು ರಸ್ತೆಯಲ್ಲೇ ಮಹಿಳೆಗೆ ದೊಣ್ಣೆಯಿಂದ ಥಳಿತ ; ವಿಪಕ್ಷಗಳಿಂದ ಮಮತಾ ವಿರುದ್ಧ ವಾಗ್ದಾಳಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಅನಾಗರಿಕ ಘಟನೆಯಲ್ಲಿ ಜನಸಂದಣಿ ಮುಂದೆಯೇ ನಡು ರಸ್ತೆಯಲ್ಲಿಯೇ ವ್ಯಕ್ತಿಯೊಬ್ಬ ಮಹಿಳೆ ಸೇರಿದಂತೆ ಇಬ್ಬರನ್ನು ಥಳಿಸುತ್ತಿರುವ ದೃಶ್ಯದ ವೀಡಿಯೊ ವೈರಲ್‌ ಆಗಿದ್ದು, ಪಶ್ಚಿಮ ಬಂಗಾಳದ ಪ್ರತಿಪಕ್ಷಗಳು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ವಿಪಕ್ಷಗಳಾದ ಸಿಪಿಎಂ ಮತ್ತು ಬಿಜೆಪಿ ಈ ವೀಡಿಯೊ ಉತ್ತರ ಬಂಗಾಳದ ಉತ್ತರ ದಿನಾಜಪುರ … Continued

ಮಮತಾ ಬ್ಯಾನರ್ಜಿ ಹಣೆಗೆ ದೊಡ್ಡ ಗಾಯ : ಹೊಲಿಗೆ ಹಾಕಿದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯಲ್ಲಿ ಬಿದ್ದ ಪರಿಣಾಮ ಅವರ ಹಣೆಗೆ ದೊಡ್ಡ ಗಾಯವಾಗಿದೆ. ಅವರ ಹಣೆಗೆ ಹೊಲಿಗೆ ಹೊಲಿಗೆ ಹಾಕಿದ್ದು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಗತ್ಯ ಪರೀಕ್ಷೆಗಳನ್ನು ನಡೆಸಿದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಕುಟುಂಬ ಸದಸ್ಯರು … Continued

ಮಮತಾ ಬ್ಯಾನರ್ಜಿ ಹಣೆಗೆ “ದೊಡ್ಡ ಗಾಯ”: ತೃಣಮೂಲ ಕಾಂಗ್ರೆಸ್

ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ದೊಡ್ಡ ಗಾಯವಾಗಿದೆ ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ತಿಳಿಸಿದೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಮಮತಾ ಬ್ಯಾನರ್ಜಿ ಅವರ ಹಣೆಯ ಮಧ್ಯದಲ್ಲಿ ಆಳವಾದ ಗಾಯವಾಗಿರುವುದು ಮತ್ತು ಮುಖದ ಮೇಲೆ ರಕ್ತ ಬಿದ್ದಿರುವ ಫೋಟೋಗಳನ್ನು ತೃಣಮೂಲ ಕಾಂಗ್ರೆಸ್ ಹಂಚಿಕೊಂಡಿದೆ. ಆದರೆ … Continued

‘ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯ’: ತೃಣಮೂಲನಿಂದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬಗ್ಗೆ ಕಾಂಗ್ರೆಸ್‌

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭಾನುವಾರ (ಮಾರ್ಚ್‌ 10) ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಂಬರುವ ಲೋಕಸಭೆ ಚುನಾವಣೆಗಳಿಗೆ ಸೀಟು ಹಂಚಿಕೆ ಮಾತುಕತೆಗೆ “ಬಾಗಿಲುಗಳು ಇನ್ನೂ ತೆರೆದಿವೆ” ಎಂದು ಕೆಲವೇ ದಿನಗಳ ಹಿಂದೆ ಹೇಳಿದ್ದ ಕಾಂಗ್ರೆಸ್ ಮಾತನ್ನು ತಳ್ಳಿಹಾಕಿದೆ. ಕಾಂಗ್ರೆಸ್ ಮತ್ತು ತೃಣಮೂಲಎರಡೂ ಪಕ್ಷಗಳು ವಿಪಕ್ಷಗಳ ಮೈತ್ರಿಕೂಟ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued

ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ : ಬಿಜೆಪಿ ಸೇರುವೆ ಎಂದ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ ಗಂಗೋಪಾಧ್ಯಾಯ

ನವದೆಹಲಿ: ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ ಗಂಗೋಪಾಧ್ಯಾಯ ಅವರು ಕೆಲವೇ ಗಂಟೆಗಳ ಹಿಂದೆ ರಾಜೀನಾಮೆ ನೀಡಿರುವುದನ್ನು ದೃಢಪಡಿಸಿದ್ದು, ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ. ಮಾರ್ಚ್ 7 ರಂದು ಮಧ್ಯಾಹ್ನದ ವೇಳೆಗೆ ಬಹುಶಃ ನಾನು ಬಿಜೆಪಿಗೆ ಸೇರುವ ಕಾರ್ಯಕ್ರಮವಿದೆ ಎಂದು ಅವರು ಹೇಳಿದರು. ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು … Continued

ಲೋಕಸಭೆ ಚುನಾವಣೆ : ಬಿಜೆಪಿ ಟಿಕೆಟ್ ಘೋಷಣೆಯಾದ ನಂತ್ರ ನಾನು ಸ್ಪರ್ಧಿಸುವುದಿಲ್ಲ ಎಂದ ಭೋಜಪುರಿ ನಟ…!

ನವದೆಹಲಿ: ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಂದು ಹೆಸರು ಘೋಷಿಸಲಾಗಿದ್ದ ಭೋಜಪುರಿ ಗಾಯಕ ಮತ್ತು ನಟ ಪವನ್ ಸಿಂಗ್ ಅವರು, ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಭಾನುವಾರ ಘೋಷಿಸಿದ್ದಾರೆ. “ನನ್ನನ್ನು ನಂಬಿ ಅಸನ್ಸೋಲ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಘೋಷಿಸಿದ್ದಕ್ಕಾಗಿ ನಾನು ಬಿಜೆಪಿ ನಾಯಕತ್ವಕ್ಕೆ ಧನ್ಯವಾದ ಹೇಳುತ್ತೇನೆ, ಆದರೆ ಕೆಲವು ಕಾರಣಗಳಿಂದ … Continued

55 ದಿನಗಳಿಂದ ತಲೆಮರೆಸಿಕೊಂಡಿದ್ದ ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧನ : ಪಕ್ಷದಿಂದ 6 ವರ್ಷ ಅಮಾನತು ಮಾಡಿದ ಟಿಎಂಸಿ

ಕೋಲ್ಕತ್ತಾ: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ಷಹಜಹಾನ್ ಬಂಧನದ ಬಳಿಕ ತೃಣ ಮೂಲ ಕಾಂಗ್ರೆಸ್ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ ಎಂದು ಹೇಳಿದೆ. ಆತ ಮತ್ತು ಆತನ ಸಹಚರರ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರ … Continued

ತೃಣಮೂಲ ಸಂಸದೆ ಮಿಮಿ ಚಕ್ರವರ್ತಿ ರಾಜೀನಾಮೆ ಘೋಷಣೆ : ಮಮತಾ ಬ್ಯಾನರ್ಜಿಗೆ ಸಲ್ಲಿಕೆ

ಕೋಲ್ಕತ್ತಾ: ನಟಿಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಅವರು ತಮ್ಮ ಕ್ಷೇತ್ರದ ಸ್ಥಳೀಯ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮಿಮಿ ಚಕ್ರವರ್ತಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ, ಆದರೆ ಅದನ್ನು ಇನ್ನೂ ಅಂಗೀಕರಿಸಲಾಗಿಲ್ಲ. ಆದಾಗ್ಯೂ, ಅವರು … Continued