ಶಿರಸಿ ಟಿ ಎಸ್ ಎಸ್ : ಹೈಕೋರ್ಟ್‌ ತಡೆಯಾಜ್ಞೆ

ಶಿರಸಿ: ಇಲ್ಲಿಯ ಪ್ರಸಿದ್ಧ ಸಹಕಾರಿ ಸಂಸ್ಥೆ ಟಿಎಸ್ಎಸ್ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಬೆಳಗಾವಿ ಸಹಕಾರ ಸಂಘಗಳ ಸಂಯುಕ್ತ ನಿಬಂಧಕರ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟಿನ ಧಾರವಾಡ ಪೀಠ ತಡೆಯಾಜ್ಞೆ ನೀಡಿದೆ. ಗುರುವಾರ ಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬಂದಾಗ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಮೊದಲು, ಟಿಎಸ್ಎಸ್ ಆಡಳಿತ ಮಂಡಳಿ ಚುನಾವಣೆ ನಿಯಮ … Continued

ಜಿಲ್ಲಾ ನಿಬಂಧಕರ ನ್ಯಾಯಾಲಯದ ಆದೇಶಕ್ಕೆ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ : ಟಿಎಸ್‌ಎಸ್‌ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ ಪುನಃ ಅಧಿಕಾರ ಸ್ವೀಕಾರ

ಶಿರಸಿ: ಟಿಎಸ್‌ಎಸ್ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ರದ್ದತಿ ಹಾಗೂ ಆಡಳಿತ ಅಧಿಕಾರಿ ನೇಮಕದ ಕುರಿತು ಸಹಕಾರ ಸಂಘಗಳ ಜಿಲ್ಲಾ ನಿಬಂಧಕರ ನ್ಯಾಯಾಲಯ ನೀಡಿದ ಆದೇಶಕ್ಕೆ ಇಲಾಖೆಯ ಬೆಳಗಾವಿಯ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಗೋಪಾಲಕೃಷ್ಣ ವೈದ್ಯ ಅವರು ಹೇಳಿದ್ದು, ಈ ಹಿನ್ನೆಲೆಯಲ್ಲಿ ಅವರು ಪುನಃ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. … Continued

ಅಡಕೆ ಬಗ್ಗೆ ಯಾವ ಆತಂಕವೂ ಬೇಡ : ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ

ಶಿರಸಿ : ಮಾರುಕಟ್ಟೆಯಲ್ಲಿ ಅಡಕೆ ದರ ಏರಿಳಿತದ ಕುರಿತು ಕೆಲ‌ವು ಸುಳ್ಳು ವದಂತಿಗಳು ಹರಿದಾಡುತ್ತಿದ್ದು, ಈ ವದಂತಿಗಳಿಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹೇಳಿದ್ದಾರೆ. ಮಂಗಳವಾರ ನಗರದ ಟಿಎಸ್‌ಎಸ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ದರದ ಕುರಿತು ಕೆಲವೊಂದು ತಪ್ಪು ಮಾಹಿತಿ ಹರಿದಾಡುತ್ತಿದೆ. ಕೆಲವು ವಿಷಯಗಳು … Continued

ಹಿರಿಯ ಸಹಕಾರಿ ಧುರೀಣ, ಎಲ್ಲರ ʼಶಾಂತಣ್ಣʼ ಟಿಎಸ್‌ಎಸ್‌ ಮಾಜಿ ಅಧ್ಯಕ್ಷ ಶಾಂತಾರಾಮ ಹೆಗಡೆ ಶೀಗೇಹಳ್ಳಿ ಇನ್ನಿಲ್ಲ

ಶಿರಸಿ: ʼಶಾಂತಣ್ಣʼ ಎಂದೇ ಆಪ್ತವಲಯದಲ್ಲಿ ಜನಪ್ರಿಯರಾಗಿದ್ದ ಹಿರಿಯ ಸಹಕಾರಿ ಧುರೀಣ, ಸಜ್ಜನ ರಾಜಕಾರಣಿ, ಸಹೃದಯಿ ಟಿಎಸ್‌ಎಸ್‌ ಮಾಜಿ ಅಧ್ಯಕ್ಷರಾಗಿದ್ದ ಶಾಂತಾರಾಮ ಹೆಗಡೆ ಶೀಗೇಹಳ್ಳಿ ವಯೋ ಸಹಜ ಖಾಯಿಲೆಯಿಂದ ಬುಧವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಒಬ್ಬ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರು ಶಿಕ್ಷಣ, ಸಹಕಾರ, … Continued