ತುಮಕೂರು : ಲಾಡ್ಜ್‌ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ

ತುಮಕೂರು : ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್​ … Continued

ಅಕ್ರಮ ಸಂಬಂಧಕ್ಕೆ ಅಡ್ಡಿ : ಕಣ್ಣಿಗೆ ಖಾರದ ಪುಡಿ ಎರಚಿ, ಕುತ್ತಿಗೆ ಮೇಲೆ ಕಾಲಿಟ್ಟು ಗಂಡನ ಕೊಂದ ಪತ್ನಿ..!

ತುಮಕೂರು : ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಹಾಗೂ ಆಕೆಯ ಪ್ರಿಯಕರನ ಸೇರಿ ಬರ್ಬರವಾಗಿ ಹತ್ಯೆಗೈದ ಘಟನೆ ತಿಪಟೂರು (Tiptur) ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನು ಕೊಂದು ಆತನ ಶವವನ್ನು ಸುಮಾರು 30 ಕಿಲೋಮೀಟರ್ ದೂರದಲ್ಲಿ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ. ಜೂನ್ 24 ರಂದು ತುಮಕೂರು … Continued

ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ

ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ … Continued

ತುರುವೇಕೆರೆ: ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ನೀರು ಪಾಲು

ತುಮಕೂರು : ಭಾನುವಾರ ಗಣಪತಿ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ ತಂದೆ, ಮಗ ಸೇರಿ ಮೂವರು ನೀರು ಪಾಲಾದ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಂಗನಹಟ್ಟಿ ಗ್ರಾಮದ ರೇವಣ್ಣ (50), ಪುತ್ರ ಶರತ್ (26) ಮತ್ತು ದಯಾನಂದ(22) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ … Continued