ತುಮಕೂರು | ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್‌ ಟ್ಯಾಂಕ್‌ ಸ್ಫೋಟ; ಇಬ್ಬರ ಸಾವು, ಮೂವರಿಗೆ ಗಾಯ

ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂತಸರನಹಳ್ಳಿಯಲ್ಲಿರುವ ಇಂಡಸ್ಟ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಟ್ಯಾಂಕ್‌ ಸ್ಪೋಟಗೊಂಡಿದೆ ಎನ್ನಲಾಗಿದೆ. ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕರನ್ನು ಸಂತೋಷ … Continued

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ಪುತ್ರ, 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ತುಮಕೂರು: ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತ್ರಿಶಾಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಎನ್ನಲಾಗಿದ್ದು, ವಿಶಾಲ ಸರ್ವೋದಯ ಸ್ಕೂಲ್‌ನಲ್ಲಿ 7ನೇ … Continued

ವೀಡಿಯೊ…| ತಿಪಟೂರು : ಧೈರ್ಯ ಅಂದ್ರೆ ಇದಪ್ಪ…ಓಡಿ ಹೋಗುತ್ತಿದ್ದ ಚಿರತೆ ಬಾಲ ಹಿಡಿದೆಳೆದು ಬೋನಿಗೆ ಹಾಕಿದ ಯುವಕ…!

ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಚಿರತೆಯನ್ನು ಯುವಕನೊಬ್ಬ ಅದರ ಬಾಲದಿಂದ ಹಿಡಿದು ಬೋನಿಗೆ ಹಾಕಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆನಂದ ಎಂಬ ಯುವಕ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕನಾಗಿದ್ದಾನೆ. ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ … Continued

ತುಮಕೂರು | ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಿವೈಎಸ್ಪಿ ಬಂಧನ

ತುಮಕೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಎಸಗಿದ್ದು ಎನ್ನಲಾದ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ … Continued

ಶೈಕ್ಷಣಿಕ-ಸಾಂಸ್ಕೃತಿಕ ಚಿಂತಕ ಡಾ. ಎಸ್.ಎಲ್. ಕಾಡದೇವರಮಠ ; ಡಿ.18ರಂದು ಅಭಿನಂದನಾ ಗ್ರಂಥ ಲೋಕಾರ್ಪಣೆ

(ಬುಧವಾರ (೧೮-೧೨-೨೦೨೪ರಂದು) ಸಾಯಂಕಾಲ ೫:೩೦ ಗಂಟೆಗೆ ತುಮಕೂರಿನ ಶ್ರೀ ಸಿದ್ಧಗಂಗಾಮಠದಲ್ಲಿ ಡಾ. ಎಸ್.ಎಲ್. ಕಾಡದೇವರಮಠ ಅವರ ೭೦ನೇ ವರ್ಷದ ಅಂಗವಾಗಿ ಗ್ರಂಥ ಗಾರುಡಿಗ ಅಭಿನಂದನಾ ಗ್ರಂಥ ಲೋಕಾರ್ಪಣೆ ಗೊಳ್ಳಲಿದ್ದು, ತನ್ನಿಮಿತ್ತ ಲೇಖನ) ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಶಿವಶಂಕರ ಲಿಂಗಯ್ಯ ಕಾಡದೇವರಮಠ ತಮ್ಮ ಕಾರ್ಯಕ್ಷೇತ್ರವನ್ನಾಗಿರಿಸಿ ಕೊಂಡಿದ್ದು ತುಮಕೂರನ್ನು. ೭೦ರ ವಯಸ್ಸಿನ (ಜನನ: ನವಂಬರ್‌ … Continued

ಬಿಗ್ ಬಾಸ್‌’ ಖ್ಯಾತಿಯ ‘ಡ್ರೋನ್’ ಪ್ರತಾಪ ಬಂಧನ

ತುಮಕೂರು : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದರು. ಅಲ್ಲದೆ ಇದನ್ನು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ನೀರಿಗೆ ಸೋಡಿಯಂ … Continued

ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯೊಬ್ಬಲಳು ಸಾವನ್ನು ಗೆದ್ದು ಬಂದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ಎಂಬ ವಿದ್ಯಾರ್ಥಿನಿ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು. 12 ಗಂಟೆಗಳ ಕಾರ್ಯಾಚರಣೆ ನಡೆಸಿದ ಅಗ್ನಿ … Continued

ಮಗಳ ಸಾವಿನ ನೋವಿನಲ್ಲೂ ಅಂಗಾಂಗ ದಾನ : 6 ಜನರ ಬಾಳಿಗೆ ಬೆಳಕಾದ ಚಂದನಾ

ತುಮಕೂರು: ಅಪಘಾತಕ್ಕೀಡಾಗಿ ಮೃತಪಟ್ಟ 12 ವರ್ಷದ ಬಾಲಕಿ ಸಾವಿನಲ್ಲೂ ಸಾರ್ಥಕತೆ ತೋರಿದ್ದಾಳೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ ಚಂದನಾ ಎಂಬ ಬಾಲಕಿ ಆರು ಮಂದಿಯ ಜೀವಕ್ಕೆ ಬೆಳಕಾಗಿದ್ದಾಳೆ. ಜಿಲ್ಲೆಯ ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿದ್ದ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ನ್ಯಾಷನಲ್ ಶಾಲೆ ವಿದ್ಯಾರ್ಥಿನಿ. ಜುಲೈ 23ರಂದು ಆಕೆಗೆ ಅಪಘಾತವಾಗಿತ್ತು. ಸ್ಕೂಲ್ ಮುಗಿಸಿ ಮನೆಗೆ … Continued

ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ತುಮಕೂರು : ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 4೨ ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಕುಣಿಗಲ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್‌ ತಾಲೂಕಿನ ಅಮೃತೂರು ಪೊಲೀಸ್ ಠಾಣೆ … Continued

ಗುತ್ತಿಗೆದಾರನ ಮೇಲೆ ಹಲ್ಲೆ: ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು

ತುಮಕೂರು : ಗುತ್ತಿಗೆದಾರರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್‌.ಆರ್. ಶ್ರೀನಿವಾಸ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿದೆ. ರವಿಕುಮಾರ ಎಂಬ ಗುತ್ತಿಗೆದಾರರು ರವಿಕುಮಾರ್ ತುಮಕೂರಿನ ತಿಲಕ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಲ್ಲೆಯ ನಂತರ ಅವರು ಒಂದು ದಿನ ಆಸ್ಪತ್ರೆಯಲ್ಲಿದ್ದರು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎಂದು ದೂರಿನಲ್ಲಿ … Continued