ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ತುಮಕೂರು : ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 4೨ ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಕುಣಿಗಲ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್‌ ತಾಲೂಕಿನ ಅಮೃತೂರು ಪೊಲೀಸ್ ಠಾಣೆ … Continued

ಗುತ್ತಿಗೆದಾರನ ಮೇಲೆ ಹಲ್ಲೆ: ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು

ತುಮಕೂರು : ಗುತ್ತಿಗೆದಾರರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್‌.ಆರ್. ಶ್ರೀನಿವಾಸ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿದೆ. ರವಿಕುಮಾರ ಎಂಬ ಗುತ್ತಿಗೆದಾರರು ರವಿಕುಮಾರ್ ತುಮಕೂರಿನ ತಿಲಕ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಲ್ಲೆಯ ನಂತರ ಅವರು ಒಂದು ದಿನ ಆಸ್ಪತ್ರೆಯಲ್ಲಿದ್ದರು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎಂದು ದೂರಿನಲ್ಲಿ … Continued

ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾದ ಮುದ್ದಹನುಮೇಗೌಡ : ಅಸಮಾಧಾನ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಸಚಿವರಾದ ಕೆ.ಎನ್‌. ರಾಜಣ್ಣ, ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಡಾ.ರಂಗನಾಥ್‌, ಕೆ.ವೈ.ನಂಜೇಗೌಡ … Continued

ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು : ಪಂಚರ್ ಆಗಿದ್ದ ಕಾರನ್ನು ದುರಸ್ತಿ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40) ಮತ್ತು ವಕೀಲರ ಸಹಕಾರ ಬ್ಯಾಂಕ್ ಉದ್ಯೋಗಿ ಉಮೇಶ(40) ಎಂದು ಗುರುತಿಸಲಾಗಿದೆ. ಮಹೇಶ … Continued

ಕಾರು-ಸ್ಕೂಟರ್ ಮುಖಾಮುಖಿ ಡಿಕ್ಕಿ : ಮೂವರು ಸಾವು

ತುಮಕೂರು: ಕಾರು ಹಾಗೂ ಸ್ಕೂಟರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಬಳಿ ಶನಿವಾರ ನಡೆದಿದೆ. ಮೃತರನ್ನು ತಿಪಟೂರು ಮೂಲದ ಅನಿಲಕುಮಾರ (21), ನರಸಿಂಹ ಮೂರ್ತಿ (21), ಕಾವ್ಯ (19) ಎಂದು ಗುರುತಿಸಲಾಗಿದೆ. ಮೂವರು ಆದಿಚುಂಚನಗಿರಿ ಮಠಕ್ಕೆ ತೆರಳಿ ಸ್ಕೂಟರ್‌ನಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ ಜೋಡಗಟ್ಟೆ … Continued

ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ತುಮಕೂರು : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರ ಕಾರು ಅಪಘಾತವಾಗಿದ್ದು, ಸಚಿವರಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬರುವಾಗ ಗುರುವಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಮಧು ಬಂಗಾರಪ್ಪ ಕಾರು ಹಾಗೂ ಲಾರಿ ಡಿಕ್ಕಿಯಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿರುವ ಸಚಿವ ಮಧು … Continued

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ತುಮಕೂರು: ಇಲ್ಲಿನ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಭಾನವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಕ್ಕಪಕ್ಕದ ಮನೆಯವರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರನ್ನು ಗರೀಬ್‌ಸಾಬ್‌ (36), ಸುಮಯಾ (೩೨), ಹಾಜೀರಾ ( 14) , ಮಹ್ಮಮದ್ ಶುಭಾನ್ (10) ಮಹ್ಮದ್ ಮುನೀರ್ ( 8) ಎಂದು ಗುರುತಿಸಲಾಗಿದೆ. ಜಿಲ್ಲೆಯ … Continued

ಶಿರಾ : ಕೆರೆಗೆ ಬಿದ್ದ ಕಾರು ; ಒಂದೇ ಕುಟುಂಬದ ಮೂವರು ಸಾವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ. … Continued

ಮಧುಗಿರಿ ಬಳಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನ ಆಕಾಶ (20), ಹೇಮಂತ(28) ಹಾಗೂ ಶಿವಕುಮಾರ ಎಂದು ಗುರುತಿಸಲಾಗಿದೆ. ಮತ್ತೋರ್ವ ಉಜ್ವಲ್ ಕೃಷ್ಣ ಎಂಬಾತ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಪಾವಗಡ ಕಡೆ, … Continued

ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. … Continued