ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಗಂಡ

ತುಮಕೂರು :  ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಲ್ಕೆರೆ ಗ್ರಾಮದಲ್ಲಿ ಶನಿವಾರ ಅತ್ಯಂತ ಕರುಣಾಜನಕ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅರ್ಚಕರೊಬ್ಬರು ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಲ್ಕೆರೆ ಗ್ರಾಮದ ನಿವಾಸಿ ಶಿವಣ್ಣ (40) ಮತ್ತು ಅವರ ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ (5) ಎಂದು … Continued

ಕಬಡ್ಡಿ ಪಂದ್ಯಾವಳಿಯಲ್ಲಿ ಬೆಟ್ಟಿಂಗ್: ಗೃಹ ಸಚಿವ ಪರಮೇಶ್ವರ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ಬೆಂಗಳೂರು : ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ವಿರುದ್ಧ ಎಫ್ಐ‌ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿ‌ನಿಧಿಗಳ ವಿಶೇಷ‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಎಚ್ ಆರ್ ನಾಗಭೂಷಣ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ … Continued

ಮಾಟ-ಮಂತ್ರದ ಶಂಕೆ: ಜ್ಯೋತಿಷಿಯ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು…!

ತುಮಕೂರು: ಜ್ಯೋತಿಷಿಯೊಬ್ಬರ ಮಾತನ್ನು ನಂಬಿ, ತನ್ನ ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಭಾವಿಸಿದ ಮಗಳೊಬ್ಬಳು ಹೆತ್ತ ತಾಯಿಯನ್ನೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಘೋರ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ಮೃತ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ ಹಣ ಇತ್ತು. … Continued

ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ : ‘ಸ್ಫೋಟಕʼ ಹೇಳಿಕೆ ನೀಡಿದ ಕೆಎನ್ ರಾಜಣ್ಣ

ತುಮಕೂರು: ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ, ಮುಂದೆ ಕಾಲ ಬಂದೇ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ … Continued

ತುಮಕೂರು : 19 ನವಿಲುಗಳ ನಿಗೂಢ ಸಾವು

ತುಮಕೂರು: 19 ನವಿಲುಗಳು ನಿಗೂಢವಾಗಿ ಸತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ಹನುಮಂಪುರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳ ನವಿಲುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಅದರಲ್ಲಿ, ಐದು ಗಂಡು ಮತ್ತು 14 ಹೆಣ್ಣು ನವಿಲುಗಳಿವೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಖಚಿತಪಡಿಸಿದ್ದಾರೆ. ಗ್ರಾಮದ ಕೆರೆ … Continued

ಪಾವಗಡ: ಶಸ್ತ್ರಚಿಕಿತ್ಸೆ ಬಳಿಕ 3 ಮಹಿಳೆಯರ ಸಾವು; ಮೂವರು ಸಿಬ್ಬಂದಿ ವಜಾ

ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ಪೂಜಾ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ … Continued

ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ಜಿಲ್ಲೆಯ ತಿಪಟೂರು ನಗರದ ಹಿಂಡಿಸ್ಕೆರೆ ಗೇಟ್ ಬಳಿಯ ಪೆಟ್ರೋಲ್ ಬಂಕ್‌ನ ಟ್ಯಾಂಕ್​ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ನಡೆದ ವರದಿಯಾಗಿದೆ. ಮೃತ ಕಾರ್ಮಿಕರನ್ನು ನಾಗರಾಜು (50), ರವಿ (38) ಎಂದು ಗುರುತಿಸಲಾಗಿದೆ. ಅವರು ಬಂಕ್​ ಸ್ವಚ್ಛಗೊಳಿಸುವಾಗ ಉಸಿರುಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಟ್ಯಾಂಕ್‌ ಸ್ವಚ್ಛಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ ಕಾರಣ … Continued

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಹೊಸ ವಾಹನ ಕಳುಹಿಸಿಕೊಟ್ಟ ಮಹಿಂದ್ರ ಕಂಪನಿ..! ಶುಭ ಕೋರಿದ ಆನಂದ ಮಹಿಂದ್ರ

ತುಮಕೂರು : ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ಬೆಳವಣಿಗೆ ನಡೆದಿದೆ. ನಗರದ ಮಹೀಂದ್ರಾ ಅಂಡ್ ಮಹೀಂದ್ರಾ ಎಸ್ ಯುವಿ ಶೋರೂಂನಲ್ಲಿ ಮಾರಾಟ ಸಿಬ್ಬಂದಿಯಿಂದ ರೈತರೊಬ್ಬರು ಅವಮಾನಕ್ಕೊಳಗಾಗಿದ್ದರು. ಈಗ ತುಮಕೂರು ಶುಕ್ರವಾರ ರಾಮನಪಾಳ್ಯದ ರೈತ ಕೆಂಪೇಗೌಡ ಅವರಿಗೆ ಮಹೀಂದ್ರಾ ಕಂಪನಿ ಹೊಸ ವಾಹನ ಕಳುಹಿಸಿಕೊಟ್ಟಿದೆ. ಈ ಕುರಿತು ಸ್ವತಃ … Continued