ಟಿವಿ, ಸಿನಿಮಾದಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರಶ್ನಿಸಿ ಅರ್ಜಿ : ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸಲು ವಕೀಲನಿಗೆ ದೆಹಲಿ ಹೈಕೋರ್ಟ್ ಸೂಚನೆ

ನವದೆಹಲಿ: ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರದರ್ಶಿಸುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರನ್ನು ದೆಹಲಿ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು ಎರಡು ದಿನಗಳಲ್ಲಿ ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಎರಡು ದಿನಗಳಲ್ಲಿ, ಕ್ಷಮೆಯಾಚಿಸಿರುವ ಪ್ರಮಾಣಪತ್ರ ಸಲ್ಲಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರಿದ್ದ … Continued

ಕೆಲವು ನಿರೂಪಕರು, ಟಿವಿ ಶೋಗಳನ್ನು ಬಹಿಷ್ಕರಿಸಲು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಿರ್ಧಾರ : ಶೀಘ್ರದಲ್ಲೇ ಪಟ್ಟಿಯ ತಯಾರಿ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಕೆಲ ಸುದ್ದಿ ವಾಹಿನಿಗಳ ನಿರೂಪಕರು ಮತ್ತು ಕಾರ್ಯಕ್ರಮಗಳನ್ನು ಬಹಿಷ್ಕರಿಸಲಿದೆ. ವಿಪಕ್ಷಗಳ ಮೈತ್ರಿಕೂಟ ಹೇಳಿಕೆಯಲ್ಲಿ, ಸಮನ್ವಯ ಸಮಿತಿಯು ಅಂತಹ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಪಟ್ಟಿ ಮಾಡುತ್ತದೆ ಎಂದು ಹೇಳಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಬಹಿಷ್ಕರಿಸಲಿರುವ … Continued