ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆ

ಮುಂಬೈ: ಶಿವಸೇನಾ (ಉದ್ಧವ್ ಠಾಕ್ರೆ) ಪಕ್ಷಕ್ಕೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶಿವಸೇನಾ (ಯುಬಿಟಿ)ಯಿಂದ ಬಂಡಾಯವೆದ್ದು ಹೊರಬಂದ ಆರು ಲೋಕಸಭಾ ಸದಸ್ಯರು ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯಲ್ಲಿ ವಿಲೀನಗೊಳ್ಳಲು ಅನುಮೋದನೆ ನೀಡಿದ್ದಾರೆ. ಈ ನಿರ್ಧಾರದಿಂದ ಬಂಡಾಯ ಸಂಸದರ ಪಕ್ಷಾಂತರವು ಸಂವಿಧಾನದ ಪಕ್ಷಾಂತರ ನಿಷೇಧ ಕಾಯ್ದೆ (Anti-Defection Law) ಅಡಿಯಲ್ಲಿ … Continued

ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಭಾರಿ ಆಘಾತ; ಶಿಂಧೆ ಬಣಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯ ಸಚಿನ್ ಅಹಿರ್

ಮುಂಬೈ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)ಗೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಪಕ್ಷದ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಸಚಿನ್ ಅಹಿರ್ ಅವರು ಶಿವಸೇನೆ (ಯುಬಿಟಿ) ತೊರೆದು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ಶಿಂಧೆ ಬಣ ಸೇರ್ಪಡೆಯಾದ ತಕ್ಷಣವೇ ಸಚಿನ್ ಅಹಿರ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ … Continued

ಉದ್ಧವ್‌ ಠಾಕ್ರೆಗೆ ಮಹಾ ಶಾಕ್ : ಶಿಂದೆ ಪಾಳಯ ಸೇರಿದ ಪಕ್ಷದ ಆರು ಬಂಡಾಯ ಸಂಸದರು !

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಶಿವಸೇನಾ (ಯುಬಿಟಿ) ಪಕ್ಷದ ಆರೂ ಜನ ಬಂಡಾಯ ಸಂಸದರು ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಬಿದ್ದ ಬಲವಾದ ಆಘಾತವಾಗಿದೆ. ಮುಂಬೈನಲ್ಲಿ  ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ … Continued

ಬಂಡಾಯದ ಬಿರುಗಾಳಿ: ನಂಬಿಕೆ ಇಲ್ಲದಿದ್ರೆ ಶಿವಸೇನೆ ಮುಖ್ಯಸ್ಥನ ಸ್ಥಾನ ತ್ಯಜಿಸಲು ಸಿದ್ಧ ಎಂದ ಉದ್ಧವ್ ಠಾಕ್ರೆ

ಮುಂಬೈ: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಬಂಡಾಯದ ಬಿರುಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ಕಾರ್ಯಕರ್ತರಿಗೆ ತಮ್ಮ ನಾಯಕತ್ವದ ಮೇಲೆ ವಿಶ್ವಾಸವಿಲ್ಲದಿದ್ದರೆ ತಕ್ಷಣವೇ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ ಎಂದು ಪಕ್ಷದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದಾರೆ. ಕಾರ್ಯಕರ್ತರು ತಾವು ಈ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಭಾವಿಸಿದರೆ, ಪಕ್ಷದ ಚುಕ್ಕಾಣಿಯನ್ನು ಯಾವುದೇ ಸಾಮಾನ್ಯ … Continued

ಉದ್ಧವ್‌ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ದೊಡ್ಡ ಹಿನ್ನಡೆಯಲ್ಲಿ ದೆಹಲಿಯಲ್ಲಿ ಗುರುವಾರ ನಡೆದ ಶಿವಸೇನಾ (ಯುಬಿಟಿ) ಪಕ್ಷದ ಮಹತ್ವದ ಸಂಸದೀಯ ಸಭೆಗೆ ಒಂಬತ್ತು ಲೋಕಸಭಾ ಸಂಸದರ ಪೈಕಿ ಕೇವಲ ಮೂವರು ಮಾತ್ರ ಹಾಜರಾಗಿದ್ದಾರೆ. ಹೀಗಾಗಿ ಅವರು ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಸೇರ್ಪಡೆಯಾಗುವ ಸಾಧ್ಯತೆ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿವೆ. ಈ ಸಭೆಯಿಂದ … Continued

ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ; ಮತ್ತೆ ಒಂದಾಗುವ ‘ಠಾಕ್ರೆ’ ಸಹೋದರರು ; ಕಾಂಗ್ರೆಸ್‌ ದೂರ..?

ಮುಂಬೈ: ಬೃಹನ್‌  ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಗೆ ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಮತ್ತು ರಾಜ ಠಾಕ್ರೆ ಅವರ ಎಂಎನ್‌ಎಸ್ (MNS) ಮೈತ್ರಿ ಮಾಡಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಈ ಬಗ್ಗೆ ಬುಧವಾರ(ಡಿ.24) ಮಧ್ಯಾಹ್ನ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಸಂಜಯ ರಾವತ್ ತಿಳಿಸಿದ್ದಾರೆ. ರಾಜ್ ಠಾಕ್ರೆ … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಉದ್ಧವ್ ಠಾಕ್ರೆ ʼಎಂವಿಎ ಸಿಎಂ ಅಭ್ಯರ್ಥಿʼ ಮಾಡುವ ಸಲಹೆ ಒಪ್ಪದ ಶರದ್‌ ಪವಾರ್

ಮುಂಬೈ : ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮುಖ್ಯಮಂತ್ರಿ ಮುಖವಾಗಿ ಬಿಂಬಿಸಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸುತ್ತಲೇ ಇದ್ದರೂ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಒಬ್ಬ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಲಹೆಯನ್ನು ತಿರಸ್ಕರಿಸಿದ್ದಾರೆ. ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued