ಶಾರ್ಜಾದಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಭೀಕರ ಹತ್ಯೆ ; ಒಂಬತ್ತು ತುಂಡುಗಳಾಗಿ ಕತ್ತರಿಸಿದ ಮೃತದೇಹ ಪತ್ತೆ : ಪತ್ನಿ-ಪುತ್ರ ನಾಪತ್ತೆ

ಉಡುಪಿ/ಶಾರ್ಜಾ: ಕರ್ನಾಟಕದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಸುಮಾರು 50 ವರ್ಷದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಸುಮಾರು ಎರಡು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಜುಲೈ ತಿಂಗಳಲ್ಲಿ ನಡೆದಿರುವ ಈ ಹತ್ಯೆ ಪ್ರಕರಣವು, ಅವರ ನಾಪತ್ತೆ ಕುರಿತು ಕುಟುಂಬದವರು ಆತಂಕ ವ್ಯಕ್ತಪಡಿಸಿದ ಬಳಿಕ ನಡೆದ ತನಿಖೆಯ ವೇಳೆ ಬಹಿರಂಗವಾಗಿದೆ. ಮೃತರನ್ನು ಅಲ್ವಿನ್ … Continued

ತುಳು ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆ ; ಸಿಎಂ ಶಿವಕುಮಾರ ಘೋಷಣೆ

ಮಂಗಳೂರು : ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಲು ಸರ್ಕಾರ ತೀರ್ಮಾನಿಸಿದೆ.  ದಕ್ಷಿಣ ಕನ್ನಡ ಹಾಗೂ ಉಡಪಿ ಜಿಲ್ಲೆಯ ಜನರ ದಶಕಗಳ ಬೇಡಿಕೆಯಾಗಿದ್ದ ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ವಿಶೇಷ ಸಚಿವ … Continued

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ ; 27 ಮೀನುಗಾರರ ರಕ್ಷಣೆ

ಉಡುಪಿ :ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ಬೋಟಿನಲ್ಲಿದ್ದ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಅವರಿಗೆ ಸೇರಿದ ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಸಿನ್ ಬೋಟಿನಲ್ಲಿ 27 ಮಂದಿ ಮೀನುಗಾರರು ಬುಧವಾರ ಗಂಗೊಳ್ಳಿಯಿಂದ ಮೀನುಗಾರಿಕೆಗೆ … Continued

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಉಡುಪಿ: ನಗರದ ತೆಂಕಪೇಟೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ (15) ಎಂದು ಗುರುತಿಸಲಾಗಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಆಗಮಿಸಿದ್ದ ಆದಿತ್ಯ, ಈ ವೇಳೆ ಕೆರೆಯಲ್ಲಿ ಕೆಲ ಭಕ್ತರು … Continued

ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !

ಉಡುಪಿ :  ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. … Continued

ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಉಡುಪಿ : ಉದ್ಯಮಿ ಹಾಗೂ ಕಾಂಗ್ರೆಸ್‌ ನಾಯಕ ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಮುಂಬೈನ ಅನುಜ ಪಾಟೀಲ(35) ಪೊಲೀಸರು ಬಂಧಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರು ಅನುಜ ಪಾಟೀಲ್‌ನನ್ನು ಬಂಧಿಸಿ ಹೆಬ್ರಿಗೆ ಕರೆದೊಯ್ಯುತ್ತಿದ್ದ … Continued

ಕಾಂಗ್ರೆಸ್‌ ಮುಖಂಡ-ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ … Continued

ಉಡುಪಿ: ಕಾಂಗ್ರೆಸ್‌ ಮುಖಂಡ- ಉದ್ಯಮಿ ಡೇವಿಡ್ ಡಿ’ಸೋಜಾಗೆ ಗುಂಡಿಕ್ಕಿ ಹತ್ಯೆ

ಉಡುಪಿ : ಖ್ಯಾತ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿ’ಸೋಜಾ (ಡೇವಿಡ್ ಡಾಲಿಯಾ) ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು  ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯಲ್ಲಿ ಮುದರಂಗಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ … Continued

ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ … Continued

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ ಅವರು ಇಂದು, ಶುಕ್ರವಾರ (ಜೂನ್‌ 12) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಜಯ ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತಿಸಿದರು. ಬಳಿಕ ಅರ್ಚಕರು ಮಂತ್ರ ಘೋಷದೊಂದಿಗೆ ಅವರನ್ನು ದೇವಾಲಯದ ಒಳಗೆ ಬರಮಾಡಿಕೊಂಡರು. ಮುಖ್ಯಮಂತ್ರಿಯಾಗಿ ಅಧಿಕಾರ … Continued