ಸಂತೋಷ ಪಾಟೀಲ ಸಾವಿನ ಪ್ರಕರಣ: ಉಡುಪಿ ಎಸ್ಪಿ ನೇತೃತ್ವದಲ್ಲಿ ತನಿಖೆಗೆ 7 ತಂಡಗಳ ರಚನೆ

ಉಡುಪಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ನಾನು ಈ ತನಿಖಾ ತಂಡಗಳ ಮೇಲುಸ್ತುವಾರಿಯನ್ನು ವಹಿಸಿಕೊಂಡಿದ್ದೇನೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದರು. ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಶನಿವಾರ ಎಸ್‌ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ … Continued

ಹಿರಿಯ ಸಸ್ಯವಿಜ್ಞಾನಿ ಡಾ.ಕೆ ಗೋಪಾಲಕೃಷ್ಣ ಭಟ್ ನಿಧನ

ಉಡುಪಿ: ಹಿರಿಯ ಸಸ್ಯವಿಜ್ಞಾನಿ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ.ಕೆ ಗೋಪಾಲಕೃಷ್ಣ ಭಟ್ (75 ) ಗುರುವಾರ (ಏಪ್ರಿಲ್ 7) ಮುಂಜಾನೆ ಚಿಟ್ಪಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಕಾಕುಂಜೆಯವರಾದ ಡಾ.ಕೆ ಗೋಪಾಲಕೃಷ್ಣ ಭಟ್ಟರು 33 ವರ್ಷಗಳ ಕಾಲ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಸ್ಯ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. … Continued

ಮುಸಲ್ಮಾನ ವರ್ತಕರಿಂದ ಪೇಜಾವರ ಶ್ರೀಗಳ ಭೇಟಿ; ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ

ಉಡುಪಿ: ಉಡುಪಿಯಲ್ಲಿ ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಮಾಡದೆ ಅವಕಾಶ ನೀಡಬೇಕು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಮುಸಲ್ಮಾನ ವರ್ತಕರು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಅಬೂಬಕ್ಕರ್ ಆತ್ರಾಡಿ ನೇತೃತ್ವದಲ್ಲಿ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಮುಸ್ಲಿಂ ವರ್ತಕರು, ದೇವಸ್ಥಾನಗಳಲ್ಲಿ ಮುಸ್ಲಿಂ … Continued

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಸಜೀವ ದಹನ, ಮೂವರಿಗೆ ಗಾಯ

ಉಡುಪಿ: ಕಾಪು ಸಮೀಪದ ಮಲ್ಲಾರುವಿನ ಫಕೀರನ ಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡು, ಮೂವರು ಗಾಯಗೊಂಡ ಘಟನೆ ಸೋಮವಾರ (ಮಾರ್ಚ್‌ ೨೧) ನಡೆದಿದೆ. ಮೃತರನ್ನು ರಜಾಕ್ ಹಾಗೂ ಅಂಗಡಿಯ ಪಾಲುದಾರರಾದ ರಜಬ್ ಎಂದು ಹೇಳಲಾಗಿದೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ ಒಬ್ಬರು ಗ್ರಾಪಂ ಸದಸ್ಯರೂ ಇದ್ದಾರೆ ಎಂದು … Continued

ಮಲ್ಪೆಯಲ್ಲಿ ಹಿಜಾಬ್ ಪರ ಗೋಡೆ ಬರಹ

ಉಡುಪಿ: ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಹಿಜಾಬ್ ಪರವಾಗಿ ಕಿಡಿಗೇಡಿಗಳು ಗೋಡೆಬರಹ ಬರೆದಿದ್ದಾರೆ. ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಗೋಡೆ ಬರಹ ಬರೆಯಲಾಗಿದೆ. ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಬರಹ ಕಂಡುಬಂದಿದೆ. “ಹಿಜಾಬ್ ಮೂವ್ ಮೆಂಟ್”, “ಹಿಜಾಬ್ ಈಸ್ ಅವರ್ ರೈಟ್” ಎಂಬ ಗೋಡೆ ಬರಹ ಪತ್ತೆಯಾಗಿದೆ. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ನ್ಯಾಯಾಲಯದ … Continued

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರಾಕರಣೆ: 9 ಮಂದಿ ಮನೆಗೆ ವಾಪಸ್

ಉಡುಪಿ: ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜು ಪರೀಕ್ಷೆಗೆ ಪ್ರವೇಶಿಸಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರು ಮನೆಗೆ ಹಿಂತಿರುಗಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿರಿಸಿ ತರಗತಿಗೆ ತೆರಳಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ … Continued

ಆಟೊದಲ್ಲಿ ಪ್ರಯಾಣಿಸಿದ ಪೇಜಾವರ ಶ್ರೀಗಳು…

ಉಡುಪಿ: ಕಾರ್ಯಕ್ರಮವೊಂದಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ರಿಕ್ಷಾದಲ್ಲಿ ತೆರಳಿದ ವಿದ್ಯಾಮಾನದ ಬಗ್ಗೆ ವರದಿಯಾಗಿದೆ. ಉಡುಪಿಯ ಪ್ರಸಿದ್ಧ ಕಡಿಯಾಳಿ ದೇವಳಕ್ಕೆ ನೂತನ ಧ್ವಜಮರವನ್ನು ಹೊತ್ತು ತರುವ ಮೆರವಣಿಗೆಯಲ್ಲಿ ಭಾಗವಹಿಸಿದ ಶ್ರೀಗಳಿಗೆ ಮುಂದಿನ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವರು ಅನಂತೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೆರವಣಿಗೆಯ ಕಾರಣಕ್ಕೆ ರಸ್ತೆಯುದ್ದಕ್ಕೂ ವಾಹನಗಳು ಸಾಲು ಸಾಲು ಬರುತ್ತಿದ್ದರಿಂದ ಟ್ರಾಫಿಕ್ … Continued

ಸ್ಕೂಟರಿಗೆ ಬಸ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು

ಉಡುಪಿ: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಮೃತಪಟ್ಟ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58)ಹಾಗೂ ಪುತ್ರಿ ಗಾಯತ್ರಿ ಪೈ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ … Continued

ಉಡುಪಿ: ಎಂಜಿಎಂ ಕಾಲೇಜಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಹಿಜಾಬ್-ಕೇಸರಿ ಶಾಲು ವಿವಾದ, ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಉಡುಪಿಯಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ, ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರಿಂದ ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ಧರಿಸಿ ಬಂದಿದ್ದು ಇದಕ್ಕೆ ಪ್ರತಿಯಾಗಿ ಕೇಸರಿ ಪೇಟ, ಕೇಸರಿ … Continued

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಣೆ

ಉಡುಪಿ : ಕಾಲೇಜಿಗೆ ಹಿಜಾಬ್ ಧರಿಸಿ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ ಹಿಜಾಬ್ ಧರಿಸಿ ತರಗತಿಗಳಿಗೆ ಪ್ರವೇಶ ನಿರಾಕರಿಸಿತ್ತು. ಆದರೆ, ಇಂದು, ಮಂಗಳವಾರ ಕಾಲೇಜಿನ ಆಡಳಿತ ಮಂಡಳಿಯ ಆದೇಶ ಧಿಕ್ಕರಿಸಿ ಹಿಜಾಬ್​ ಧರಿಸಿ ಕ್ಯಾಂಪಸ್​​ಗೆ ಬಂದ ವಿದ್ಯಾರ್ಥಿನಿಯರು ತರಗತಿಗೆ ಹೋಗುವ ಬೇಡಿಕೆ ಇಟ್ಟಿದ್ದಾರೆ. ಆದರೆ ಕಾಲೇಜಿನ ಪ್ರಾಂಶುಪಾಲರು ಮಾತ್ರ ವಿದ್ಯಾರ್ಥಿನಿಯರಿಗೆ … Continued