ಮುಂದುವರೆದ ಭಾರೀ ಮಳೆ: ಜುಲೈ 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು/ಉಡುಪಿ : ಮಂಗಳವಾರ (ಜುಲೈ 25) ಹವಾಮಾನ ಇಲಾಖೆಯ ಭಾರೀ ಮಳೆ ಮುನ್ಸೂಚನೆ ನೀಡಿ ರೆಡ್‌ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಣೆ … Continued

ಉಡುಪಿ: ಹಿಂಬದಿ ಡಂಪರ್‌‌ಗೆ ಸಿಲುಕಿದ ಕಾರನ್ನು 2 ಕಿಮೀ ಎಳೆದೊಯ್ದ ಟಿಪ್ಪರ್‌ | ವೀಕ್ಷಿಸಿ

ಉಡುಪಿ : ಟಿಪ್ಪರಿನ ಹಿಂಬದಿಯ ಡಂಪರ್‌‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರದ ವರೆಗೆ ಟಿಪ್ಪರ್ ಎಳೆದೊಯ್ದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. , ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ … Continued

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣ: ಕೆ.ಎಸ್. ಈಶ್ವರಪ್ಪ ನಿರಾಳ

ಬೆಂಗಳೂರು : ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ ಅವರ ಮೇಲೆ ಮಾಡಲಾಗಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಡುಪಿ ಪೊಲೀಸರು ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್​​ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಅಂಗೀಕರಿಸಿದೆ. ಬಿಜೆಪಿ … Continued

ಮುಂದುವರಿದ ಮಳೆ : ದಕ್ಷಿಣ ಕನ್ನಡ, ಉಡುಪಿ ಶಾಲೆ-ಪಿಯು ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಣೆ

ಮಂಗಳೂರು/ಉಡುಪಿ : ಜೋರಾದ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 7 ರಂದು ರಜೆ ಘೋಷಿಸಲಾಗಿದೆ. ಸತತ ನಾಲ್ಕನೇ ದಿನ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ಶುಕ್ರವಾರದ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಮಳೆಯ ಆರ್ಭಟ … Continued

ವೀಡಿಯೊ: 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿ ರಕ್ಷಣೆ ಮಾಡಿದ ಪೇಜಾವರ ಸ್ವಾಮೀಜಿ | ವೀಕ್ಷಿಸಿ

ಉಡುಪಿ ಮಠದ ಪೇಜಾವರ ಶ್ರೀಗಳು ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬೆಕ್ಕನ್ನು ರಕ್ಷಿಸಲು ಸ್ವತಃ ಸ್ವಾಮೀಜಿ ಬಾವಿಗೆ ಇಳಿದಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ನಗರದ ಹೊರವಲಯದಲ್ಲಿರುವ ಮುಚ್ಲಕೋಡು ದೇವಸ್ಥಾನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು (Pejawar Sri) ಭೇಟಿ ಮಾಡಿದ್ದರು. ಆಗ ಅಲ್ಲಿ … Continued

ಉಡುಪಿ: 35 ಅಡಿ ಎತ್ತರದ ಬೃಹತ್‌ ಮರವೇರಿ ಹಲಸಿನ ಹಣ್ಣು ಕೊಯ್ದ ಪೇಜಾವರ ಶ್ರೀಗಳು…!

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಮ್ಮ ಬಿಡುವಿನ ವೇಳೆ ಶಿಷ್ಯಂದಿರಿಗೆ ಪಾಠ ಪ್ರವಚನ ಮಾಡುವುದಲ್ಲದೆ, ಶ್ರೀಮಠದ ಗೋಶಾಲೆಗೆ ಹೋಗುತ್ತಾರೆ. ಅವರು ಆಗಾಗ ಶಿಷ್ಯಂದಿರೇ ಅಚ್ಚರಿಪಡುವಂತಹ ಕೆಲಸಕ್ಕೆ ಕೈ ಹಾಕುತ್ತಾರೆ. ಇದೀಗ ಅವರು ಬೃಹತ್‌ ಗಾತ್ರದ ಹಲಸಿನ ಮರವೇರಿ ಹಲಸಿನ ಕಾಯಿಗಳನ್ನು ಕೊಯ್ದು ಸುದ್ದಿಯಾಗಿದ್ದಾರೆ. ಅವರು ಹಲಸಿನ ಮರ ಏರಿದ ಫೋಟೋಗಳು ಭಾರೀ … Continued

ಉಡುಪಿ: ಸೀತಾನದಿ ಬಳಿ ಭೀಕರ ಅಪಫಾತ ; ಇಬ್ಬರು ಶಿಕ್ಷಕರು ಸಾವು, ಮತ್ತೊಬ್ಬರು ಗಂಭೀರ

ಉಡುಪಿ: ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ ಎಂಬಲ್ಲಿ ಭಾನುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸೀತಾನದಿ ಜಕ್ಕನಮಕ್ಕಿ ಬಳಿ ನಡೆದ ಈ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, … Continued

ರಾಜ್ಯದ ಕರಾವಳಿ ಭಾಗದಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚಳ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಬೆಂಗಳೂರು: ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆ ಮತ್ತಷ್ಟು ತಾಪಮಾನದ ಬೇಗೆ ಎದುರಿಸಬೇಕಿದೆ. ರಾಜ್ಯದಲ್ಲಿ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಅಂದರೆ ಕರಾವಳಿ ಜಿಲ್ಲೆಗಳಲ್ಲಿ ‘ಉಷ್ಣ ಅಲೆ’ ಗರಿಷ್ಠ … Continued

ಸಾಹಿತಿ-ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ

ಉಡುಪಿ: ಸಾಹಿತಿ, ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಅರ್ಥಧಾರಿಯಾಗಿದ್ದ ಅಪರೂಪದ ವ್ಯಕ್ತಿತ್ವದ ಅಂಬಾತನಯ ಮುದ್ರಾಡಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಹಾಗೂ ಶಿಷ್ರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಅಂಬಾತನಯ ಮುದ್ರಾಡಿ ಅವರು 1935ರ … Continued

ಉಡುಪಿಯಲ್ಲಿ ಫೆಬ್ರವರಿ 11, 12ರಂದು ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ, 1300 ಕಲಾವಿದರು ಭಾಗಿ

ಕುಮಟಾ: ರಾಜ್ಯ ಸರ್ಕಾರದ ವತಿಯಿಂದ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನ ಫೆಬ್ರವರಿ 11ಮತ್ತು 12ರಂದು ಉಡುಪಿಯ ಎ. ಎಲ್. ಎಂ ಕಾಲೇಜಿನ ಎ. ಎಲ್. ಎನ್. ರಾವ್‌ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್‌.ಹೆಗಡೆ ತಿಳಿಸಿದ್ದಾರೆ. ಕುಮಟಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Continued