ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲಿ ವಸಾಹತು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಮತ ಚಲಾಯಿಸಿದ ಭಾರತ

ನವದೆಹಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತುಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. “ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ” ವಸಾಹತು ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ ಏಳು ದೇಶಗಳಲ್ಲಿ ಅಮೆರಿಕ ಮತ್ತು ಕೆನಡಾ ಸೇರಿವೆ. ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು. … Continued

ಇಸ್ರೇಲ್-ಹಮಾಸ್ ಯುದ್ಧ : ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆ ನಿರ್ಣಯದ ಮೇಲಿನ ಮತದಾನಕ್ಕೆ ಗೈರಾದ ಭಾರತ ; ಯಾಕೆಂದರೆ….

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಲ್ಲಿ ಭಾರತ ಮತದಾನದಿಂದ ದೂರ ಉಳಿದಿದೆ. ತನ್ನ ಗೈರಾಗುವ ನಿರ್ಧಾರಕ್ಕೆ ವಿವರಿಸಿದ ಭಾರತ, ಭಯೋತ್ಪಾದನೆಯ ವಿರುದ್ಧ ವಿಶ್ವ ಸಂಸ್ಥೆಯು ಸ್ಪಷ್ಟ ಸಂದೇಶವನ್ನು ಕಳುಹಿಸಬೇಕಾಗಿದೆ, ಆದರೆ ಕದನ ವಿರಾಮಕ್ಕೆ ಕರೆ ನೀಡಿದ ನಿರ್ಣಯದಲ್ಲಿ ಹಮಾಸ್ ಬಗ್ಗೆ ಉಲ್ಲೇಖಿಸಿಲ್ಲ ಎಂದು ಹೇಳಿದೆ. … Continued