ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್‌ ನಕಾರ

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ವಜಾ ಮಾಡಿದೆ. ಅರ್ಜಿಯ ಊರ್ಜಿತತ್ವಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿದೆ. … Continued