ಪಶ್ಚಿಮ ಘಟ್ಟದ 1449 ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ : ಕೇಂದ್ರದ ಕರಡು ಅಧಿಸೂಚನೆ ತಿರಸ್ಕರಿಸಲು ಕರ್ನಾಟಕ ನಿರ್ಧಾರ

ಬೆಂಗಳೂರು : ಪಶ್ಚಿಮ ಘಟ್ಟ ಪ್ರದೇಶದ 10 ಜಿಲ್ಲೆಗಳ 1,449 ಗ್ರಾಮಗಳನ್ನು ಒಳಗೊಂಡಂತೆ ಒಟ್ಟು 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco-Sensitive Area—ESA) ಎಂದು ಘೋಷಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಇತ್ತೀಚಿನ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜುಲೈ 27, 2026ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು … Continued

ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ

ನವದೆಹಲಿ : ವಂದೇ ಮಾತರಂಗೆ ಸಂಬಂಧಿಸಿದಂತೆ 1937ರಲ್ಲಿ ಅಂದಿನ ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಅಂಗೀಕರಿಸಿದ್ದ ನಿರ್ಣಯಕ್ಕೆ ಬದ್ಧವಾಗಿರಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಬುಧವಾರ ತೀರ್ಮಾನಿಸಿದೆ. ಇದರಂತೆ, ಇನ್ನು ಮುಂದೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ನಾಯಕರು … Continued

ಅನಗತ್ಯ ವೆಚ್ಚ ಕಡಿವಾಣಕ್ಕೆ ಕೇಂದ್ರದ ಕ್ರಮ ; ಒಬ್ಬ ಅಧಿಕಾರಿ–ಒಂದು ಕಾರು’ ನೀತಿ ಜಾರಿ

ನವದೆಹಲಿ: ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವುದು ಹಾಗೂ ಅಧಿಕೃತ ಸಂಪನ್ಮೂಲಗಳ ದುರುಪಯೋಗವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಹಣಕಾಸು ಸಚಿವಾಲಯವು “ಒಬ್ಬ ಅಧಿಕಾರಿ – ಒಂದು ಅಧಿಕೃತ ಕಾರು” (One Officer, One Official Car) ನೀತಿಯನ್ನು ಜಾರಿಗೆ ತಂದಿದೆ. ವೆಚ್ಚ ಇಲಾಖೆ (Department of Expenditure) ಹೊರಡಿಸಿರುವ ಕಚೇರಿ ಜ್ಞಾಪನ (Office Memorandum) ಮೂಲಕ ಈ … Continued

ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ : ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ : ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ (Balancing Reservoir) ನಿರ್ಮಾಣಕ್ಕೆ ಕರ್ನಾಟಕವು ಕೆಳಹರಿವು ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ (ಜುಲೈ 27) ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ … Continued

ನೀಟ್ 2026 ಮರುಪರೀಕ್ಷೆ ; ಟೆಲಿಗ್ರಾಂ ತಾತ್ಕಾಲಿಕ ನಿರ್ಬಂಧ : ಕೇಂದ್ರದ ನಿರ್ಧಾರ ಎತ್ತಿ ಹಿಡಿದ ದೆಹಲಿ ಹೈಕೋರ್ಟ್

ನವದೆಹಲಿ : 2026ರ ನೀಟ್ (NEET-UG) ಮರುಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ತಪ್ಪುಮಾಹಿತಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೆಜಿಂಗ್‌ ಪ್ಲಾಟ್‌ಫಾರ್ಮ್‌ (messaging platform) ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕ್ರಮವನ್ನುಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರು ತೀರ್ಪು ಪ್ರಕಟಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ … Continued

ಒಳನುಸುಳುವಿಕೆ, ಇತರ ಕಾರಣಗಳಿಂದಾಗಿ ‘ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆ’ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿನ ಅಕ್ರಮ ನುಸುಳುವಿಕೆ ಹಾಗೂ ಇತರ ಕಾರಣಗಳಿಂದ ಉಂಟಾಗುತ್ತಿರುವ “ಅಸ್ವಾಭಾವಿಕ ಜನಸಂಖ್ಯೆ ಬದಲಾವಣೆ”ಯನ್ನು (ಡೆಮೋಗ್ರಫಿಕ್ ಚೇಂಜ್) ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. 2025ರ ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಈ ಪ್ರಮುಖ ನಿರ್ಧಾರದ ಅನುಷ್ಠಾನದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ … Continued

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

 ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಶ್ರೇಣಿಯ ಪುನರ್ರಚನೆಗೆ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಸಂಪುಟವು ಶನಿವಾರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (DA) ಶೇಕಡಾ 2ರಷ್ಟು ಹೆಚ್ಚಿಸಲು ಒಪ್ಪಿಗೆ ನೀಡಿದೆ. ಈ ಹೆಚ್ಚಳವು ಜುಲೈ 1, 2025 ರಿಂದಲೇ ಅನ್ವಯವಾಗಲಿದ್ದು, ಬಾಕಿ ಹಣದ (Arrears) ಸಮೇತ ಪಾವತಿಸಲಾಗುತ್ತದೆ. ಇದರಿಂದ ಹಾಲಿ ನೌಕರರು ಹಾಗೂ ನಿವೃತ್ತ … Continued

ಪಿಒಕೆ ಮೇಲೆ ಭಾರತದ ಹಕ್ಕು ಪ್ರತಿಪಾದನೆ ; ಪಾಕ್ ಆಕ್ರಮಿತ ಕಾಶ್ಮೀರಕ್ಕೂ ಅನ್ವಯವಾಗಲಿದೆ ಡಿಲಿಮಿಟೇಶನ್ ಮಸೂದೆ ; ಕ್ಷೇತ್ರಗಳು ನಿಗದಿ..!

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಒಂದು ವೇಳೆ ಭಾರತದ ನಿಯಂತ್ರಣಕ್ಕೆ ಮರಳಿದರೆ, ಅಲ್ಲಿನ ಚುನಾವಣಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಲು ಅಗತ್ಯವಿರುವ ಕಾನೂನು ಚೌಕಟ್ಟನ್ನು ರೂಪಿಸುವ ‘ಡಿಲಿಮಿಟೇಶನ್ ಬಿಲ್ 2026’ (ಕ್ಷೇತ್ರ ಮರುವಿಂಗಡಣೆ ವಿಧೇಯಕ) ಅನ್ನು ಕೇಂದ್ರ ಸರ್ಕಾರ ಈ ವಾರ ಸಂಸತ್ತಿನಲ್ಲಿ ಮಂಡಿಸಲು ಸಜ್ಜಾಗಿದೆ. ಈ ಪ್ರದೇಶದ ಮೇಲಿನ ಭಾರತದ ದೀರ್ಘಕಾಲದ ಸಾಂವಿಧಾನಿಕ … Continued

ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ … Continued

ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಹಾಡುವುದು ಕಡ್ಡಾಯ : ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ದೇಶದ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ‘ವಂದೇ ಮಾತರಂ’ ಅನ್ನು ಇನ್ಮುಂದೆ ಅದರ ಮೂಲ 6 ಚರಣಗಳೊಂದಿಗೆ ಹಾಡಬೇಕು ಎಂದು ಗೃಹ ಸಚಿವಾಲಯವು ತಿಳಿಸಿದೆ. ರಾಷ್ಟ್ರೀಯ ಗೌರವ ಮತ್ತು … Continued