ವಕ್ಫ್ ತಿದ್ದುಪಡಿ ಕಾಯಿದೆ : ಕೆಲ ಸೆಕ್ಷನ್‌ಗಳಿಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ 2025ರ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಲುನಿರಾಕರಿಸಿದ ಸುಪ್ರೀಂಕೋರ್ಟ್, ಅಂತಿಮ ತೀರ್ಪು ಬರುವವರೆಗೆ ಕಾಯಿದೆಯ ಕೆಲ ಸೆಕ್ಷನ್‌ಗಳಿಗೆ ಸುಪ್ರೀಂ ಕೋರ್ಟ್‌ ಸೋಮವಾರ (ಸೆಪ್ಟೆಂಬರ್ 14) ತಡೆ ನೀಡಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ … Continued

5%, 18% ಎರಡು ಜಿಎಸ್‌ಟಿ ಸ್ಲ್ಯಾಬ್‌ಗಳನ್ನು ಪ್ರಸ್ತಾಪಿಸಿದ ಸರ್ಕಾರ; ಹಾನಿಕಾರಕ ವಸ್ತುಗಳಿಗೆ 40% ಜಿಎಸ್‌ಟಿ ಸಾಧ್ಯತೆ: ಮೂಲಗಳು

ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಗೆ ಕೇವಲ ಎರಡು ಸ್ಲ್ಯಾಬ್‌ಗಳಾದ 5% ಮತ್ತು 18% ಮಾತ್ರ ಉಳಿಸಿಕೊಳ್ಳಲು ಕೇಂದ್ರವು ಪ್ರಸ್ತಾಪಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಈ ಪ್ರಸ್ತಾವನೆಯಡಿಯಲ್ಲಿ, 28% ರಲ್ಲಿರುವ ಶೇಕಡಾ 90 ರಷ್ಟು ವಸ್ತುಗಳನ್ನು 18%ರ ಸ್ಲ್ಯಾಬ್‌ಗೆ ತರಲಾಗುತ್ತದೆ, ಶೇಕಡಾ 12 ರಷ್ಟು ಸ್ಲ್ಯಾಬ್‌ನಲ್ಲಿರುವ ಶೇಕಡಾ 99 ರಷ್ಟು … Continued

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ : ಕೇಂದ್ರ ಸರ್ಕಾರ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು … Continued

ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ

ಬೆಂಗಳೂರು : ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ 8682 (MSP) ರೂ.ಗಳಂತೆ 2215 ಮೆಟ್ರಿಕ್‌ ಟನ್‌ ಹೆಸರುಕಾಳು ಖರೀದಿಸಲು ಅನುಮತಿ ನೀಡಿದೆ. … Continued

ಮೋದಿ ಸರ್ಕಾರ 3.0 : ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ -ಸಂಪೂರ್ಣ ಪಟ್ಟಿ ಇಲ್ಲಿದೆ..

ನವದೆಹಲಿ: ನವದೆಹಲಿ: ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ತಮ್ಮ ಸತತ ಮೂರನೇ ಇನ್ನಿಂಗ್ಸ್‌ ಅನ್ನು ಆರಂಭಿಸಿದ ಬೆನ್ನಲ್ಲೇ ನೂತನ ಸಂಪುಟ ಸಹೋದ್ಯೋಗಿಗಳಿಗೆ ಇಂದು (ಸೋಮವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಸಚಿವರ ತಂಡದಲ್ಲಿ 30 ಕ್ಯಾಬಿನೆಟ್ ಸಚಿವರು, ಐದು ಸ್ವತಂತ್ರ ಉಸ್ತುವಾರಿ ರಾಜ್ಯ ಸಚಿವರು ಮತ್ತು 36 ರಾಜ್ಯ ಸಚಿವರಿದ್ದಾರೆ. ಯಾರಿಗೆ ಯಾವ … Continued

ಅಪಾಯಕಾರಿ 23 ಶ್ವಾನ ತಳಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಮನುಷ್ಯನ ಜೀವಕ್ಕೆ ಅಪಾಯವಾಗಬಹುದಾದ 23 ಭೀಷಣ ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಿಗೆ ಹೊರಡಿಸಿದ್ದ ಸುತ್ತೋಲೆಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ತಜ್ಞರು ಸಂಬಂಧಿತ ಯಾರನ್ನೂ ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ ಹ್ಯಾಂಡ್ಲರ್‌ ಮತ್ತು ರಾಟ್‌ವೈಲರ್‌ … Continued

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಕ್ಯಾಬಿನೆಟ್‌ ಒಪ್ಪಿಗೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ ಶೇಕಡಾ 4%ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಈ ತಿಂಗಳ ಮಧ್ಯಭಾಗದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಈಗಲೇ ಈ ನಿರ್ಧಾರ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಕೇಂದ್ರ ಸರ್ಕಾರಿ ನೌಕರರಿಗೆ … Continued

1 ಕೋಟಿ ಕುಟುಂಬಗಳಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವ ಸೌರ ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ : ಏನಿದು ಯೋಜನೆ..?

ನವದೆಹಲಿ: ನವೀಕರಿಸಬಹುದಾದ ಇಂಧನ ಬಳಕೆ ಉತ್ತೇಜಿಸುವ ಪ್ರಯತ್ನದಲ್ಲಿ ಮೇಲ್ಛಾವಣಿಯ ಸೌರ ವ್ಯವಸ್ಥೆಗಳನ್ನು ಸ್ಥಾಪಿಸಲು 1 ಕೋಟಿ ಕುಟುಂಬಗಳಿಗೆ ₹ 78,000 ವರೆಗೆ ನೆರವು ಒದಗಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದು ತಿಂಗಳಿಗೆ 300 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡುತ್ತದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ ಠಾಕೂರ್ ಅವರು, … Continued

1ನೇ ತರಗತಿಗೆ ಪ್ರವೇಶ ಪಡೆಯಲು ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸೂಚನೆ

ನವದೆಹಲಿ : ಕೇಂದ್ರ ಶಿಕ್ಷಣ ಸಚಿವಾಲಯವು 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಬೇಕಾದ ವಯಸ್ಸಿನ ಅರ್ಹತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ನಿರ್ದೇಶನ ಪತ್ರ ಹೊರಡಿಸಿದೆ. 2024-25ರ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷ ವಯಸ್ಸನ್ನು ನಿಗದಿಪಡಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. … Continued

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ- ದೆಹಲಿ ಪ್ರತಿಭಟನೆಯು ಕರ್ನಾಟಕ, ಕನ್ನಡಿಗರ ಹಿತ ಕಾಯುವ ಚಳವಳಿ ಎಂದು ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು, ಬುಧವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳುವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ … Continued