ವೀಡಿಯೊ..|ನ್ಯೂ ಓರ್ಲಿಯನ್ಸ್‌ನಲ್ಲಿ ಜನಸಂದಣಿ ಮೇಲೆ ವಾಹನ ನುಗ್ಗಿಸಿದ ಶಂಕಿತ ಉಗ್ರ ; 15 ಮಂದಿ ಸಾವು, 35 ಜನರಿಗೆ ಗಾಯ : ನಿವೃತ್ತ ಯೋಧನೇ ಶಂಕಿತ ಉಗ್ರ..!

ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಘಟನೆಯಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಕಾರಣನಾದ ಶಂಕಿತನನ್ನು ಗುರುತಿಸಲಾಗಿದ್ದು, ಈತ ಅಫ್ಘಾನಿಸ್ತಾನದಲ್ಲಿ ಸೇವೆ ಸಲ್ಲಿಸಿದ್ದ ಅಮೆರಿಕದ ಮಾಜಿ ಸೈನಿಕ ಎನ್ನಲಾಗಿದೆ. ಅಲ್ಲದೆ, ಆತ ಓಡಿಸಿಕೊಂಡು … Continued

ಅಮೆರಿಕ ಶ್ವೇತ ಭವನದ ಎಐ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ ಕೃಷ್ಣನ್ ನೇಮಿಸಿದ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಭಾರತೀಯ ಮೂಲದ ಅಮೆರಿಕನ್ ವಾಣಿಜ್ಯೋದ್ಯಮಿ, ಸಾಹಸೋದ್ಯಮ ಬಂಡವಾಳಶಾಹಿ ಮತ್ತು ಲೇಖಕ ಶ್ರೀರಾಮ ಕೃಷ್ಣನ್ (Sriram Krishnan) ಅವರನ್ನು ಕೃತಕ ಬುದ್ಧಿಮತ್ತೆಯ ಹಿರಿಯ ಶ್ವೇತಭವನದ (White House) ನೀತಿ ಸಲಹೆಗಾರರಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನೇಮಿಸಿದ್ದಾರೆ. ಈ ಬಗ್ಗೆ ಭಾನುವಾರ ಅಧಿಕೃತವಾಗಿ ಪ್ರಕಟಿಸಿರುವ ಡೊನಾಲ್ಡ್‌ ಟ್ರಂಪ್‌ ಅವರು, ಶ್ರೀರಾಮ ಕೃಷ್ಣನ್‌ ಅವರು ಶ್ವೇತ … Continued

ಹೆಸರಾಂತ ತಬಲಾ ವಾದಕ ಜಾಕಿರ್ ಹುಸೇನ್ ಆಸ್ಪತ್ರೆಗೆ ದಾಖಲು; ಐಸಿಯುವಿನಲ್ಲಿ ಚಿಕಿತ್ಸೆ

ನವದೆಹಲಿ: ಹೆಸರಾಂತ ತಬಲಾ ವಾದಕ ಜಾಕಿರ್ ಹುಸೇನ್ ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರ ಕುಟುಂಬದ ಪ್ರಕಾರ, ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹೃದಯ ಸಂಬಂಧಿ ತೊಂದರೆಗಳು ಎಉದರಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಖ್ಯಾತ ಕೊಳಲು ವಾದಕ … Continued

ಓಪನ್‌ಎಐ (OpenAI) ವಿಷಲ್‌ ಬ್ಲೋವರ್‌ ಸುಚಿರ್‌ ಬಾಲಾಜಿ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ…!

ಖ್ಯಾತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಕಂಪನಿ ಓಪನ್‌ಎಐನಲ್ಲಿ ಮಾಜಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಸಂಶೋಧಕರಾಗಿದ್ದ ಭಾರತೀಯ ಮೂಲದ ಸುಚಿರ್ ಬಾಲಾಜಿ (26 ವರ್ಷ)ಅವರು ಸ್ಯಾನ್ ಫ್ರಾನ್ಸಿಸ್ಕೋ ಅಪಾರ್ಟ್ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. “ಪ್ರಾಥಮಿಕ ತನಿಖೆಯ ಸಮಯದಲ್ಲಿ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಅಹಿತಕರ ಅಂಶಗಳು ಕಂಡು ಬಂದಿಲ್ಲ,” ಎಂದು ಸ್ಯಾನ್ ಫ್ರಾನ್ಸಿಸ್ಕೋ ಪೊಲೀಸ್ ಇಲಾಖೆಯ ವಕ್ತಾರ ರಾಬರ್ಟ್ ರುಯೆಕಾ ಮಾಧ್ಯಮಗಳಿಗೆ … Continued

“ನಿಮ್ಮ ಅವಿರತ ಪ್ರಯತ್ನಗಳು ಇಲ್ಲದಿದ್ದರೆ….”: ಎಸ್.ಎಂ.ಕೃಷ್ಣಗೆ ಧನ್ಯವಾದ ಹೇಳಿ ಪತ್ರ ಬರೆದಿದ್ದ ಅಂದಿನ ಅಮೆರಿಕದ ಅಧ್ಯಕ್ಷ ಜಾನ್ ಕೆನಡಿ

ಬೆಂಗಳೂರು : ಇಂದು, ಮಂಗಳವಾರ ನಿಧನರಾದ ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ಅರ್ಧ ಶತಮಾನದ ರಾಜಕೀಯ ಜೀವನದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಹೀಗೆ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ದೇಶದ ರಾಜಕೀಯದಲ್ಲಿ ಆಳವಾದ ಧುಮುಕುವ ಮೊದಲು, ಅವರು ಅಮೆರಿಕದಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದಾಗ ಅಲ್ಲಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…!. ವರ್ಚಸ್ವಿ … Continued

ಬಶರ್ ಅಲ್-ಅಸ್ಸಾದ್ ರಷ್ಯಾಕ್ಕೆ ಪಲಾಯನ ; ಸಿರಿಯಾದಲ್ಲಿ ಐಸಿಸ್ ಶಿಬಿರಗಳ ಮೇಲೆ ಅಮೆರಿಕ ವಾಯುದಾಳಿ

ಬಂಡುಕೋರರು ರಾಜಧಾನಿ ದಮಾಸ್ಕಸ್ ಅನ್ನು ವಶಪಡಿಸಿಕೊಂಡ ಬೆನ್ನಲ್ಲೇ 13 ವರ್ಷಗಳ ಅಂತರ್ಯುದ್ಧ ಮತ್ತು ಆರು ದಶಕಗಳ ಅಸ್ಸಾದ್‌ ಕುಟುಂಬದ ನಿರಂಕುಶ ಆಡಳಿತ ಕೊನೆಗೊಂಡಿತು. ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ರಷ್ಯಾಕ್ಕೆ ಪಲಾಯನ ಮಾಡಿದ ಕೆಲವೇ ಗಂಟೆಗಳ ನಂತರ, ಅಮೆರಿಕ ಸಿರಿಯಾದೊಳಗಿನ ಐಸಿಸ್ ಘಟಕಗಳ ಮೇಲೆ ದಾಳಿ ನಡೆಸಿದೆ. ಐಸಿಸ್ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ … Continued

ವೀಡಿಯೊ..| ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪಕ್ಕೆ ಬೆಚ್ಚಿ ಬಿದ್ದ ಪಕ್ಷಿಗಳು ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಉತ್ತರ ಕ್ಯಾಲಿಫೋರ್ನಿಯಾದಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅದರ ಕ್ಷಣವನ್ನು ಸೆರೆಹಿಡಿದ ತುಣುಕನ್ನು ಅಮೆರಿಕದ ಮೀನು ಮತ್ತು ವನ್ಯಜೀವಿ ಸರ್ವಿಸ್‌ ಬಿಡುಗಡೆ ಮಾಡಿದೆ. ಸ್ಯಾಕ್ರಮೆಂಟೊ ನ್ಯಾಷನಲ್ ವೈಲ್ಡ್‌ಲೈಫ್ ರೆಫ್ಯೂಜ್ ಕಾಂಪ್ಲೆಕ್ಸ್‌ನಲ್ಲಿರುವ ಪಕ್ಷಿಗಳು ಮತ್ತು ಸ್ಯಾಕ್ರಮೆಂಟೊ ಕಣಿವೆಯ ಸುತ್ತಮುತ್ತಲಿನ ಪ್ರದೇಶಗಳು ನಡುಕಕ್ಕೆ ಹೇಗೆ ಪ್ರತಿಕ್ರಿಯಿಸಿದವು ಎಂಬುದನ್ನು ವೀಡಿಯೊ ತೋರಿಸುತ್ತದೆ. ಪ್ರಬಲ ಭೂಕಂಪವು ಗುರುವಾರ (ಡಿಸೆಂಬರ್ 5) ಉತ್ತರ … Continued

ಅಮೆರಿಕದಲ್ಲಿ ಜನ್ಮದಿನಾಚರಣೆ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಭಾರತೀಯ ವಿದ್ಯಾರ್ಥಿ ಸಾವು

ಭಾರತದ 23 ವರ್ಷದ ವಿದ್ಯಾರ್ಥಿಯೊಬ್ಬ ಅಮೆರಿಕದಲ್ಲಿ ತನ್ನ ಜನ್ಮದಿನ ಆಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ನವೆಂಬರ್ 13 ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಆರ್ಯನ್ ರೆಡ್ಡಿ ಜಾರ್ಜಿಯಾದ ಅಟ್ಲಾಂಟಾದಲ್ಲಿರುವ ಮನೆಯಲ್ಲಿ ಸ್ನೇಹಿತರೊಂದಿಗೆ ತಮ್ಮ ಜನ್ಮದಿನ ಸಂಬ್ರಮಾಚಾರಣೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಜನ್ಮದಿನದ ಆಚರಣೆಯ ಸಮಯದಲ್ಲಿ, … Continued

ಅಮೆರಿಕದ ಲಂಚದ ಆರೋಪ ಆಧಾರರಹಿತ ಎಂದ ತಿರಸ್ಕರಿಸಿದ ಅದಾನಿ ಗ್ರೂಪ್‌ : ಕಾನೂನು ಕ್ರಮದ ಪರಿಶೀಲನೆ

ನವದೆಹಲಿ; ತನ್ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಪ್ರಮುಖ ಕಾರ್ಯನಿರ್ವಾಹಕರ ವಿರುದ್ಧ ಅಮೆರಿಕದ ಪ್ರಾಸಿಕ್ಯೂಟರ್‌ಗಳು ಮಾಡಿದ ಲಂಚ ಮತ್ತು ಭದ್ರತಾ ವಂಚನೆಯ ಆರೋಪಗಳನ್ನು ಅದಾನಿ ಗ್ರೂಪ್ ಬಲವಾಗಿ ನಿರಾಕರಿಸಿದೆ. ಆರೋಪಗಳನ್ನು “ಆಧಾರರಹಿತ” ಎಂದು ತಳ್ಳಿಹಾಕಿದೆ ಮತ್ತು ಇದು ಸಮಗ್ರತೆ ಮತ್ತು ಅನುಸರಣೆಯ ಅತ್ಯುನ್ನತ ಮಾನದಂಡಗಳೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದೆ. ಆರೋಪಗಳ ಬಗ್ಗೆ ಸಾಧ್ಯವಿರುವ ಎಲ್ಲಾ … Continued

ಅಮೆರಿಕ: ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್‌ನಲ್ಲಿ ಎಲೋನ್ ಮಸ್ಕ್, ವಿವೇಕ ರಾಮಸ್ವಾಮಿಗೆ ಮಹತ್ವದ ಸ್ಥಾನ

ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರು ಎಲೋನ್ ಮಸ್ಕ್ ಅವರು ‘ಸರ್ಕಾರಿ ದಕ್ಷತೆಯ ಇಲಾಖೆ’ಯನ್ನು ಮುನ್ನಡೆಸಲಿದ್ದಾರೆ ಎಂದು ಪ್ರಕಟಿಸಿದ್ದಾರೆ. ಮಸ್ಕ್ ಹಾಗೂ ಭಾರತೀಯ-ಅಮೆರಿಕನ್ ಉದ್ಯಮಿ ವಿವೇಕ ರಾಮಸ್ವಾಮಿ ಅವರು ಈ ವಿಭಾಗದ ಮುಖ್ಯಸ್ಥರಾಗಿರುತ್ತಾರೆ ಎಂದು ಪ್ರಕಟಿಸಿದ್ದಾರೆ, “ಈ ಇಬ್ಬರು ಅದ್ಭುತ ಅಮೆರಿಕನ್ನರು ಒಟ್ಟಾಗಿ, ಸರ್ಕಾರಿ ಅಧಿಕಾರಶಾಹಿಯನ್ನು ಕಿತ್ತೊಗೆಯಲು, ಹೆಚ್ಚುವರಿ ನಿಯಮಾವಳಿಗಳನ್ನು ಕಡಿತಗೊಳಿಸಲು, ವೆಚ್ಚಗಳನ್ನು ಕಡಿತಗೊಳಿಸಲು … Continued