ವಿಧಾಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು ; ಸದನದಿಂದ ಹೊರಗೆ ಹೊತ್ತೊಯ್ದ ಮಾರ್ಷಲ್‌ ಗಳು

ಬೆಂಗಳೂರು : ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ 18 ಬಿಜೆಪಿ ಶಾಸಕರನ್ನು ಆರು ತಿಂಗಳವರೆಗೆ ಅಮಾನತುಗೊಳಿಸಿದ್ದಾರೆ. ಸಭಾಪತಿ ಆದೇಶವನ್ನು ಧಿಕ್ಕರಿಸಿ ಅಶಿಸ್ತು ಮತ್ತು ಅಗೌರವದಿಂದ ನಡೆದುಕೊಂಡು ಸದಸ್ಯರು ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡ ಶಾಸಕರು ಸಭಾಧ್ಯಕ್ಷರ ವೇದಿಕೆ ಏರುವುದು, ಸಭಾಧ್ಯಕ್ಷರತ್ತ ಪೇಪರ್ ಎಸೆದು ಸದನದ ಬಾವಿಗಿಳಿದು … Continued

ಸಾವರ್ಕರ್ ಫೋಟೋ ತೆರವಿಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ : ಸ್ಪೀಕರ್‌ ಯುಟಿ ಖಾದರ್‌

ಬೆಳಗಾವಿ: ವಿಧಾನಸಭೆ ಸಭಾಂಗಣದಲ್ಲಿ ವೀರ್‌ ಸಾವರ್ಕರ್ ಫೋಟೋ ತೆರವಿಗಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ‌ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆ ಸಭಾಂಗಣದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಯಾವುದೇ ಪ್ರಸ್ತಾವನೆ ಬಂದಿಲ್ಲ.‌ ಪ್ರಸ್ತಾವನೆ ಬಂದ ಮೇಲೆ ಆ ಬಗ್ಗೆ ವಿಚಾರ ಮಾಡೋಣ. ಈಗಲೇ ಅದರ ಬಗ್ಗೆ ಏಕೆ..? … Continued

ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ … Continued