ಅನೇಕ ಯೋಜನೆಗಳಿಗಾಗಿ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಕ್ಷಣವೇ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಿ : ರಾಜ್ಯ ಸರ್ಕಾರಕ್ಕೆ ರಾಘವೇಶ್ವರ ಶ್ರೀಗಳ ಆಗ್ರಹ

ಗೋಕರ್ಣ: ದೇಶದ ಅನೇಕ ಯೋಜನೆಗಳಿಗೆ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪಶಾಲಿಟಿ ಆಸ್ಪತ್ರೆ ಆರಂಭಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆ ಬಹಳಷ್ಟು ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಜಿಲ್ಲೆ. … Continued

ಜೊಯಿಡಾ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜಾನಪದ ಭಂಡಾರ ಮಹಾದೇವ ವೇಳಿಪ ನಿಧನ

ಕಾರವಾರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ನಿಧನರಾಗಿದ್ದಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ನಾಗೋಡಾ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದವರು. ಅವರ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ರಾಜ್ಯ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ … Continued

ಪ್ರವಾಹಕ್ಕೆ ತತ್ತರಿಸಿದ ಉತ್ತರ ಕನ್ನಡ: 108 ಗ್ರಾಮಗಳಿಗೆ ಹಾನಿ, ನಾಲ್ವರು ಸಾವು

ಕಾರವಾರ: ಧಾರಾಕಾರವಾಗಿ ಸುರಿದ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ನದಿಗಳು ಉಕ್ಕಿ ಹರಿದ ಪರಿಣಾಮ ಈ ಬಾರಿ ದೊಡ್ಡ ಮಟ್ಟದಲ್ಲಿಯೇ ಹಾನಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಒಟ್ಟು 108 ಗ್ರಾಮಗಳಿಗೆ ನೆರೆಯಿಂದ ಹಾನಿಯಾಗಿದ್ದು, ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಮೂರು ದಿನಗಳಿಂದ ಜಿಲ್ಲೆಯ ಘಟ್ಟದ ಮೇಲೆ ಹಾಗೂ … Continued