ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ನೋಡಲು ತೆರಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿ 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಹಿನ್ನೆಲೆಯಲ್ಲಿ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಏಪ್ರಿಲ್‌ 14ರಿಂದ ನಿರ್ಬಂಧ ವಿಧಿಸಲಾಗಿದೆ. ಕಳೆದೆರಡು ದಿನಗಳಿಂದ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ … Continued

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಬನವಾಸಿ: ಬಿಜೆಪಿ ತೊರೆದು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ…!

ಬನವಾಸಿ (ಶಿರಸಿ): ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ಹಾಗೂ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು, ಗುರುವಾರ ಅಧಿಕೃತವಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟ್ಟಣದ ಟಿ‌.ಎಂ.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ  ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. … Continued

ಕುಮಟಾ: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಕೂಜಳ್ಳಿಯ ಭಾವಧಾರಾ ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಉತ್ಸವ ಸಮಿತಿ ಕುಮಟಾ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಕೂಜಳ್ಳಿಯ ಭಾವಧಾರಾ ಭಜನಾ ಮಂಡಳಿ ಪ್ರಥಮ ಸ್ಥಾನ ಪಡೆದಿದೆ. ಕುಮಟಾದ ನೆಲ್ಲಿಕೇರಿಯ ಮಹಾಸತಿ ದೇವಸ್ಥಾನದಲ್ಲಿ ಶನಿವಾರ (ಏಪ್ರಿಲ್‌ 6) ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ನಡೆಯಿತು. ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳೇ ಇದ್ದ ಕೂಜಳ್ಳಿಯ ಭಾವಧಾರಾ ಭಜನಾ ಮಂಡಳಿ ಪ್ರಥಮ ಸ್ಥಾನ … Continued

ಶಿರಸಿ: ಶಾಸಕ ಹೆಬ್ಬಾರ ಕಾಂಗ್ರೆಸ್‌ ಸೇರ್ಪಡೆಗೆ ವಿರೋಧ : ಕಾಂಗ್ರೆಸ್‌ ಕಚೇರಿಯಲ್ಲಿಯೇ ವಿರೋಧಿ ಪೋಸ್ಟರ್‌ ಅಂಟಿಸಿದ ಕಾರ್ಯಕರ್ತರು…!

ಶಿರಸಿ : ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಯೇ ಸೋಮವಾರ ಶಾಸಕ ಶಿವರಾಮ ಹೆಬ್ಬಾರ ವಿರೋಧಿ ಪೋಸ್ಟರ್ ಗಳನ್ನು ಅಂಟಿಸಲಾಗಿದೆ. ಹೆಬ್ಬಾರ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿ ನಾಯಕರಿಂದ ಹಾಗೂ … Continued

ವೀಡಿಯೊ…| ಕುಮಟಾ: ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು…!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ, ಹಳಕಾರ, ಚಿತ್ರಗಿ ಮೊದಲಾದ ಪ್ರದೇಶಗಳಲ್ಲಿ ರಾತ್ರಿ ಅವಧಿಯಲ್ಲಿ ಆಗಾಗ ಜನರಿಗೆ ಕಾಣಿಸಿಕೊಂಡು ಜನರಿಗೆ ಆತಂಕ ಮೂಡಿಸಿದ್ದ ಚಿರತೆಯೊಂದು ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ. ಕುಮಟಾ ತಾಲೂಕಿನ ಚಿತ್ರಗಿಯ ಶೇಷಾದ್ರಿ ಗುಡ್ಡದಲ್ಲಿ ಅರಣ್ಯ ಇಲಾಖೆಯವರು ಇಟ್ಟಿರುವ ಬೋನಿನಲ್ಲಿ ಈ ಚಿರತೆ ಸೆರೆಯಾಗಿದೆ. ಈ ಭಾಗದ ಜನರು … Continued

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆ ಸಾವು

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆಯೊಂದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಟ್ಟಿಗೆಯ ಇಡಕೆಮನೆ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಇಡಕೆಮನೆಯ ಪರಮೇಶ್ವರ ರಾಮಾ ಕುಣಬಿ ಅವರ ತೋಟಕ್ಕೆ ಕಾಡಾನೆ ಬಂದಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎನ್ನಲಾಗಿದೆ. ಆಹಾರ … Continued

ವೀಡಿಯೊ….| ಕುಮಟಾ : ಕಡ್ಲೆಯ ಸಮುದ್ರ ತೀರದಲ್ಲಿ ಬೃಹತ್‌ ಆಮೆ ಕಳೇಬರ ಪತ್ತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನ ಗದ್ದೆಯ ಕಡ್ಲೆಯ ಅರಬ್ಬಿ ಸಮುದ್ರ ತೀರದಲ್ಲಿ ಆಲಿವರ್ ರಿಡ್ಲೆ ತಳಿಯ ಬೃಹತ್‌ ಆಮೆಯ ಕಳೇಬರ ಪತ್ತೆಯಾಗಿದೆ. ಆಮೆಯು ಮೂರು ಅಡಿಗಿಂತ ಹೆಚ್ಚು ( 96 ಸೆಂಮೀ) ಉದ್ದವಿದೆ. ಇದರ ವಯಸ್ಸು 30 ರಿಂದ 40 ವರ್ಷ ಆಗಿರಬಹುದು. ಈ ಜಾತಿಯ ಬೃಹತ್‌ ಆಮೆಗಳು ಸಾಮಾನ್ಯವಾಗಿ … Continued

ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ ಮಂಗಳವಾರ(ಮಾ.19)ದಿಂದ ಆರಂಭ

ಶಿರಸಿ : ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ರಾಜ್ಯದ ಅತಿದೊಡ್ಡ ಜಾತ್ರೆಯಾದ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಮಾರ್ಚ್‌ 19ರಂದು ಜಾತ್ರಾ ಮಹೋತ್ಸವ ಆರಂಭವಾಗಲಿದೆ. ರಥಕ್ಕೆ ಕಲಶ ಪ್ರತಿಷ್ಠೆ ಮಾರ್ಚ್‌ 19 ರಂದು ಮಧ್ಯಾಹ್ನ 12:27ಕ್ಕೆ ನಡೆಯಲಿದ್ದು, ಅದೇ ದಿನ ರಾತ್ರಿ 11:39ರಿಂದ ಕಲ್ಯಾಣ ಪ್ರತಿಷ್ಠೆ ನಡೆಯಲಿದೆ. ಬಣ್ಣ ಹಾಗೂ ಕಾವಿಯ ಕಲೆಯ ಸಾಂಪ್ರದಾಯಿಕ ಚಿತ್ರಗಳಿಂದ … Continued

ಚಂದಾವರ : ಮಾರ್ಚ್‌ 16ರಿಂದ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾ ಮಹೋತ್ಸವ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಸುಪ್ರಸಿದ್ಧ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಮಾರ್ಚ್ 16ರಿಂದ 18ರ ವರೆಗೆ ನಡೆಯಲಿದೆ. ಹೊನ್ನಾವರ, ಕುಮಟಾ ತಾಲೂಕಿನ ಅನೇಕ ಗ್ರಾಮಗಳು ಸೇರಿದಂತೆ ಚಂದಾವರ ಸೀಮೆಯಷ್ಟೇ ಅಲ್ಲದೆ ಉತ್ತರ ಕನ್ನಡ ಜಿಲ್ಲೆ ಹಾಗೂ ನಾಡಿನ ವಿವಿಧೆಡೆಯ ಭಕ್ತರ ಆರಾಧ್ಯ ದೈವವಾಗಿರುವ ಚಂದಾವರದ ಹನುಮಂತ … Continued