ಕಾರವಾರ | ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ 7 ಎಮ್ಮೆಗಳು ಸಾವು

ಕಾರವಾರ: ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಕೃಷಿಕ ಮಹಿಳೆಯರ 7 ಜಾನುವಾರುಗಳು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರದಲ್ಲಿ ನಡೆದಿದೆ. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗದ್ದೆ ಕೆಲಸದ ಜೊತೆ ಎಮ್ಮೆಗಳನ್ನು ಸಾಕಿ ಪಾಲನೆ ಮಾಡುತ್ತಿರುವ ಕಿನ್ನರದ ಮಸೀದಿ ಹತ್ತಿರದ … Continued

ಭಾರಿ ಮಳೆ ಮುನ್ನೆಚ್ಚರಿಕೆ : ಮೇ 29ರಂದು ಉತ್ತರ ಕನ್ನಡ ಜಿಲ್ಲೆಯ ಅಂಗನಾಡಿಗಳಿಗೆ ರಜೆ ಘೋಷಣೆ, ಶಾಲೆಗಳಿಗೆ….

ಕಾರವಾರ: ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಎಲ್ಲ ಅಂಗನವಾಡಿಗಳಿಗೆ ಮೇ 29 ರಂದು ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯಿ ಮೇ 29ರ ಬೆಳಿಗ್ಗೆ 8:30 ವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಕಿರಿಯ … Continued

ವೀಡಿಯೊ..| ಶಿರಸಿ : ಬಚ್ಚಲು ಮನೆಗೆ ಬಂದ ಚಿರತೆ

ಶಿರಸಿ: ಚಿರತೆಯೊಂದು ಊರಿನೊಳಗೆ ಬಂದು ಬಚ್ಚಲು (ಸ್ನಾನದ) ಮನೆಯಲ್ಲಿ ಅಡಗಿ ಕುಳಿತು ಮನೆಯವರ ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಕ್ಕೆ ಹೊಂದಿಕೊಂಡಿರುವ ಮೂಲೆ ಮನೆಯಲ್ಲಿ ಶುಕ್ರವಾರ ನಡೆದಿದೆ. ಶಿರಸಿ ನಗರದಿಂದ ಅನತಿ ದೂರದ ಮೂಲೆಮನೆ ಹಳ್ಳಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ನೀರು ಕಾಯಿಸಲು ಬಚ್ಚಲ ಮನೆಗೆ ಹೋದಾಗ  … Continued

ಗೋಕರ್ಣ : ಸಮುದ್ರ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ ಇಬ್ಬರು ವೈದ್ಯ ವಿದ್ಯಾರ್ಥಿನಿಯರು

ಕುಮಟಾ : ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಜಟಾಯುತೀರ್ಥ ಗುಡ್ಡದ ಬಳಿ ನಡೆದಿದೆ. ತಮಿಳುನಾಡಿನ ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ಕನ್ನಿಮೋಳಿ ಈಶ್ವರನ್(23) ಮತ್ತು ಹಿಂದುಜಾ ನಟರಾಜನ್(23) ಮೃತರು ಎಂದು ಗುರುತಿಸಲಾಗಿದೆ. ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ 23 … Continued

ಭಟ್ಕಳ | ಗರ್ಭಿಣಿ ಹಸುವಿನ ಹತ್ಯೆ ಮಾಡಿದ ದುಷ್ಕರ್ಮಿಗಳು…

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಗರ್ಭಿಣಿ ಹಸುವನ್ನು ಕಡಿದು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್ ಬಳಿಯಲ್ಲಿ ಗರ್ಭಿಣಿ ಹಸು ಕಡಿದು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದ ದುರುಳರು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ … Continued

ಉತ್ತರ ಕನ್ನಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ಮೇಲೆ ಗುಂಡುಹಾರಿಸಿದ ಪೊಲೀಸರು

ಕಾರವಾರ : ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿನಲ್ಲಿ ಕೋಟಿ ರೂ.ಸಿಕ್ಕಿದ್ದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನೀಲವೇಣಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕೆಲದಿನಗಳ ಹಿಂದೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಕೋಟಿ ರೂ.ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಉಚಿತ ಯೋಜನೆಗಳು ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು; ಕಾಂಗ್ರೆಸ್‌ ನಾಯಕ ಆರ್​ವಿ ದೇಶಪಾಂಡೆ

ದಾಂಡೇಲಿ: ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.​​ವಿ. ದೇಶಪಾಂಡೆ ಕೂಡ ಉಚಿತ ಯೋಜನೆಗಳು ಅಪಾಯಕಾರಿ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ … Continued

ಕುಮಟಾ | ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ; ಶಾಸ್ತ್ರೀಯ ಶೈಲಿಯಲ್ಲಿ ಕುಮಟಾದ ಸ್ವರಧಾರಾ ತಂಡ, ಸಾಂಪ್ರದಾಯಿಕ ಶೈಲಿಯಲ್ಲಿ ಬಳ್ಕೂರಿನ ಮಹಾವಿಷ್ಣು ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಹಾಸತಿ ಸಭಾಭವನದಲ್ಲಿ ನಡೆಯಿತು. ಕುಮಟಾ, ಹೊನ್ನಾವರ, ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ವಿವಿಧ ಭಜನಾ ತಂಡಗಳು ಪಾಲ್ಗೊಂಡಿದ್ದವು. ಈ ವರ್ಷದ ಭಜಾ ಸ್ಪರ್ಧೆಯಲ್ಲಿ ಶಾಸ್ತ್ರೀಯ ಶೈಲಿಯ ಭಜಾ ಸ್ಪರ್ಧೆ ಹಾಗೂ ಸಾಂಪ್ರದಾಯಿಕ ಶೈಲಿಯ ಭಜನಾ … Continued

ಬಸ್‌ ಒಳಗೆ ಜಗಳ ; ಚಾಕುವಿನಿಂದ ಇರಿದು ಪ್ರಯಾಣಿಕನ ಕೊಲೆ

ಶಿರಸಿ : ಹೆಂಡತಿ ಜೊತೆ ಬೆಂಗಳೂರಿಗೆ  ವಾಪಸ್ ಬರುತ್ತಿದ್ದ ವ್ಯಕ್ತಿಯನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂಥದ್ದೊಂದು ಘಟನೆ ಉತ್ತರ ಕನ್ನಡ ( ಉತ್ತರ ಕನ್ನಡ  ಜಿಲ್ಲೆಯ ಶಿರಸಿಯಲ್ಲಿ (Sirsi) ಶನಿವಾರ ಸಂಜೆ ನಡೆದಿದೆ. ಗಂಗಾಧರ ಎಂಬಾತ ಕೊಲೆಯಾದ ವ್ಯಕ್ತಿ. ಪ್ರೀತಮ್ ಡಿಸೋಜಾ ಎಂಬಾತ ಚಾಕು ಇರಿದು ಕೊಲೆ ಮಾಡಿದ ಆರೋಪಿಯಾಗಿದ್ದ. ಆದರೆ ನಂತರ ಪೊಲೀಸರು … Continued

ಯಾಣಕ್ಕೆ ಭೇಟಿ ನೀಡಿದ ನಟ ಶಿವರಾಜಕುಮಾರ ; 29 ವರ್ಷಗಳ ಹಿಂದೆ ನಡೆದ ʼನಮ್ಮೂರ ಮಂದಾರ ಹೂವೆʼ ಸಿನೆಮಾ ಚಿತ್ರೀಕರಣದ ಮೆಲುಕು

ಕಾರವಾರ: ಖ್ಯಾತ ಚಲನಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ( Shiva Rajkumar) ಇತ್ತೀಚೆಗೆ ಅನಾರೋಗ್ಯದಿಂದ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಅವರು ಈಗ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿತಾಣವಾಗಿರುವ ಯಾಣ (Yana)ಕ್ಕೆ ಭೇಟಿ ನೀಡಿದ್ದಾರೆ. ಈ ಮೊದಲು ಅವರು 29 ವರ್ಷದ ಹಿಂದೆ ಯಾಣದಲ್ಲಿ ಚಿತ್ರೀಕರಣವಾಗಿದ್ದ ನಮ್ಮೂರ ಮಂದಾರಹೂವೆ ಸಿನಿಮಾ … Continued