ಹೊನ್ನಾವರ | ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿನಿಂದ ಗೋಕರ್ಣಕ್ಕೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಾಳೆಗದ್ದೆ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ತಾಲೂಕಿನ ಬಾಳೆಗದ್ದೆ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರು ಇದ್ದರು ಎಂದು … Continued

ಸಿದ್ದಾಪುರ ; ಪಿಗ್ಮಿ ಹಣಕ್ಕಾಗಿ ವೃದ್ದೆಯ ಕತ್ತು ಹಿಸುಕಿ ಕೊಲೆ

ಸಿದ್ದಾಪುರ: ಪಿಗ್ಮಿ ಸಂಗ್ರಹಿಸುತ್ತಿದ್ದ ಒಂಟಿ ವೃದ್ಧೆಯ ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ಒಳ ನುಗ್ಗಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಹಣ ದೋಚಿಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಸೊರಬ ರಸ್ತೆಯ ಬಸವನಗಲ್ಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡ್ಮೂರು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ. ಸಹಕಾರಿ ಬ್ಯಾಂಕ್‌ ಒಂದರ … Continued

ಕೂಜಳ್ಳಿಯಲ್ಲಿ ಡಿಸೆಂಬರ್‌ 29ರಂದು ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪ್ರಶಸ್ತಿ ಪ್ರದಾನ

ಕುಮಟಾ: ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ-2024 ಸಂಗೀತೋತ್ಸವ ಹಾಗೂ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಡಿ. 29ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪಂ. ವಿನಾಯಕ ತೊರ್ವಿ ಅವರಿಗೆ ಈ ಬಾರಿ ಷಡಕ್ಷರಿ ರಾಷ್ಟ್ರೀಯ … Continued

ಯಲ್ಲಾಪುರ : ಬೈಕ್‌ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು ; ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಿಗೆ ಗಂಭೀರ ಗಾಯ

ಯಲ್ಲಾಪುರ : ಶನಿವಾರ ಬೆಳಿಗ್ಗೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಂದ್ಗುಳಿ ವ್ಯಾಪ್ತಿಯ ಉಪಳೇಶ್ವರ ಹುತ್ಕಂಡ ಭಾಗದಲ್ಲಿ ನಡೆದಿದೆ. ಈ ಭಾಗದಲ್ಲಿ ಮೂರು ಕರಡಿಗಳು ಸಂಚರಿಸುತ್ತಿದ್ದು ಶನಿವಾರ ಬೆಳಿಗ್ಗೆ ಏಳು ಗಂಟೆ ಹೊತ್ತಿಗೆ ಕಾರ್ಯನಿರ್ಮಿತ್ತ ದ್ವಿಚಕ್ರವಾಹನದಲ್ಲಿ ಚಂದ್ಗುಳಿ ಪಂಚಾಯತದ ಸದಸ್ಯ ಹಾಗೂ ಪಿ.ಎಲ್.ಡಿ ಬ್ಯಾಂಕ್ … Continued

ಕದಂಬ ಕನ್ನಡ ಜಿಲ್ಲೆ ರಚನೆಗೆ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಹೋರಾಟ; ಸಿಎಂ ಗಮನಕ್ಕೆ ತರುವೆ ಎಂದ ಸಚಿವ ತಂಗಡಗಿ

ಬೆಳಗಾವಿ : ಕಳೆದ ಹತ್ತು ವರ್ಷಗಳಿಂದ ಉತ್ತರ ಕನ್ನಡದಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ನಡೆಯುತ್ತಿರುವ ಹೋರಾಟ ಗಮನಕ್ಕಿದೆ. ನೂತನವಾಗಿ ಕದಂಬ ಕನ್ನಡ ಜಿಲ್ಲೆ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರ ಗಮನಕ್ಕೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಕದಂಬ ಕನ್ನಡ … Continued

ನಾಲ್ವರು ವಿದ್ಯಾರ್ಥಿಗಳ ಸಾವಿನ ನಂತರ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ : ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದೆ. ಪ್ರ ಈ ಕುರಿತು ಎಸ್​ಪಿ ಎಂ.ನಾರಾಯಣ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದ ವತಿಯಿಂದ ಪ್ರವಾಸಕ್ಕೆ ಆಗಮಿಸಿದ್ದ ಉಳಿದ ವಿದ್ಯಾರ್ಥಿಗಳನ್ನು ಕೋಲಾರದ … Continued

ಮುರುಡೇಶ್ವರ ಬೀಚ್‌ ದುರಂತ; ಕೋಲಾರ ಶಾಲೆಯ ಪ್ರಿನ್ಸಿಪಾಲ್, ಅತಿಥಿ ಶಿಕ್ಷಕರು ಅಮಾನತು

ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಐವರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ … Continued

ಮುರುಡೇಶ್ವರ ; ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ಮೃತದೇಹಗಳನ್ನು ಹುಡುಕಿ ತಂದಿವೆ. ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಎಂದು ಗುರುತಿಸಲಾಗಿದೆ. ಮುರುಡೇಶ್ವರದ ನವೀನ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ಎರಡು ಮೃತದೇಹ ಹಾಗೂ ಸಮುದ್ರದ ಅಳಿವೆಯಲ್ಲಿ … Continued

ಶಾಸಕ ದಿನಕರ ಶೆಟ್ಟಿ ಕಾರು-ಬೈಕ್ ಡಿಕ್ಕಿ : ಬೈಕ್‌ ಸವಾರನಿಗೆ ಗಾಯ

ಹೊನ್ನಾವರ : ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರ ಕಾರಿನ ಹಿಂಬದಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಕರ್ಕಿ ನಾಕಾ ಬಳಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಹಳದಿಪುರದ ನಿವಾಸಿ ನಾಗಪ್ಪ ಗೌಡ (60) ಎಂದು ಗುರುತಿಸಲಾಗಿದೆ. ಶಾಸಕ … Continued

ಪ್ರತ್ಯೇಕ ಕದಂಬ ಜಿಲ್ಲೆಯ ಹೋರಾಟ ಇದು ಜನರ ಅಗತ್ಯದ ಹೋರಾಟ ; ಅನಂತಮೂರ್ತಿ ಹೆಗಡೆ

ಶಿರಸಿ : ಉತ್ತರ ಕನ್ನಡ ಜಿಲ್ಲೆ ಅಖಂಡವಾಗಿರಬೇಕೆಂಬುದು ಒಂದಷ್ಟು ಜನರ ಆಶಯವಾಗಿದೆ. ಅದು ತಪ್ಪೆಂದು ನಾನು ಹೇಳುವುದಿಲ್ಲ, ಆದರೆ ಬಹುತೇಕರಿಗೆ ದೂರವಾಗಿರುವ ಜಿಲ್ಲಾ ಕೇಂದ್ರ ಕಾರವಾರದ ಬದಲು ಶಿರಸಿಯನ್ನು ಮಾಡುತ್ತಾರೆಯೇ ? ಜಿಲ್ಲೆ ಅಖಂಡವಾಗಿರಬೇಕು ಎಂದು ನಮ್ಮ ವಿರುದ್ಧ ಮಾತನಾಡಿದವರು ಜಿಲ್ಲೆಯ ಮಧ್ಯದ ಭಾಗವಾಗಿರುವ ಶಿರಸಿಗೆ ಜಿಲ್ಲಾ ಕೇಂದ್ರ ತರುತ್ತಾರೆಯೇ ? ಅದಕ್ಕೆ ಅವರು ಒಪ್ಪುವುದಿಲ್ಲ. … Continued