ಶಿರಸಿ, ಕುಮಟಾ ತಾಲೂಕಿನ ಪಶ್ಚಿಮ ಘಟ್ಟದ ಭಾಗದಲ್ಲಿ ಭೂಕಂಪನದ ಅನುಭವ

ಕಾರವಾರ : ಉತ್ತರ ಕನ್ನಡ (Uttar Kannada) ಜಿಲ್ಲೆಯಲ್ಲಿ ಕೆಲವಡೆ ಭೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯ ಶಿರಸಿ ಹಾಗೂ ಕುಮಟಾ ತಾಲೂಕಿನ ದೇವಿಮನೆ ಘಟ್ಟ ಪ್ರದೇಶದ ಸುತ್ತಮುತ್ತ ಭೂಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ಮೂರ್ನಾಲ್ಕು ಸೆಕೆಂಡುಗಳ ಕಾಲ​ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹೇಳಲಾಗಿದೆ. ಶಿರಸಿ (Sirasi) ತಾಲೂಕಿನ ರಾಗಿಹೊಸಳ್ಳಿ, ಕಸಗೆ, ಬಂಡಲದಲ್ಲಿ … Continued

ಡಿಸೆಂಬರ್ 2ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌

ಕಾರವಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿ-766 ಕುಮಟಾ-ಶಿರಸಿ ರಸ್ತೆ ಅಗಲೀಕರಣ ಕಾಮಗಾರಿಯ ಕಾರಣದಿಂದ ಡಿಸೆಂಬರ್ 2 ರಿಂದ ಫೆಬ್ರವರಿ 25ರ ವರೆಗೆ ವಾಹನ ಸಂಚಾರ ಬಂದ್ ಆಗಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣ ಮಾಡಬೇಕಾಗಿರುವುದರಿಂದ ಅಗಲೀಕರಣ ನಡೆದಿರುವ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್‌ ಮಾಡಿ ಬದಲಿ ಮಾರ್ಗದಲ್ಲಿ ಸಂಚರಿಸಲು … Continued

ಇತಿಹಾಸ-ಪುರಾಣ ಎರಡನ್ನೂ ಕಾವ್ಯವಾಗಿಸಿದ ಹಿರಿಮೆ ಆದಿ ಕವಿ ಪಂಪನದ್ದು ; ಪಾದೆಕಲ್ಲು ವಿಷ್ಣು ಭಟ್ಟ

ಬನವಾಸಿ : ಇತಿಹಾಸ ಹಾಗೂ ಪುರಾಣ ಎರಡನ್ನೂ ಕಾವ್ಯವಾಗಿಸಿದ ಹಿರಿಮೆ ಆದಿ ಕವಿ ಪಂಪನದ್ದು. ಸಾಹಿತ್ಯ ಲೋಕದಲ್ಲಿ ಪಂಪನ ಕಾವ್ಯ ಅದರ ಶ್ರೇಷ್ಠತೆಯ ಕಾರಣಕ್ಕೆ ಶತಮಾನಗಳಿಂದಲೂ ಗೌರವಿಸಲ್ಪಡುತ್ತ ಬಂದಿದೆ. ಪಂಪನ ಕಾವ್ಯ ಸೃಷ್ಟಿಯ ಶಕ್ತಿಯೇ ಅಷ್ಟು ಅದ್ಭುತ ಎಂದು ನಿವೃತ್ತ ಪ್ರಾಂಶುಪಾಲ ಹಾಗೂ ಕನ್ನಡ ವಿದ್ವಾಂಸ ಉಡುಪಿಯ ಪಾದೆಕಲ್ಲು ವಿಷ್ಣು ಭಟ್ಟ ಹೇಳಿದರು. ಬನವಾಸಿಯ ಯಾತ್ರಿ … Continued

ಶಿರಸಿ | ಅಡಕೆಗೆ ಬಂದ ಕಳಂಕ ದೂರ ಮಾಡುವ ಪ್ರಯತ್ನ : ನವೆಂಬರ್‌ 23ರಂದು ʼಗುಣಮಟ್ಟದ ಅಡಕೆʼ ಕಾರ್ಯಾಗಾರ

ಶಿರಸಿ: ಅಡಕೆ ಗುಣಮಟ್ಟ ಕಾಯ್ದುಕೊಳ್ಳಲು ಹಾಗೂ ಅಡಕೆ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಳಂಕದಿಂದ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಗುಣಮಟ್ಟದ ಅಡಕೆ ಕಾರ್ಯಾಗಾರವನ್ನು ನಗರದ ಶ್ರೀಪಾದ ಹೆಗಡೆ ಕಡವೆ ಕಲ್ಯಾಣಮಂಟಪದಲ್ಲಿ ನವೆಂಬರ್‌ 23ರ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಅಡಕೆ ಮತ್ತು ಸಂಬಾರ ಬೆಳೆಗಾರರ ಸಂಘದ ಪ್ರಮುಖರಾದ ಗಣೇಶ ಭಟ್ಟ ಉಪ್ಪೋಣಿ ಹೇಳಿದರು. … Continued

ವೀಡಿಯೊಗಳು..| ಶಿರಸಿ ; ಸುಗಾವಿ ಬಳಿ ಚಿರತೆಗಳ ಓಡಾಟ ; ದೃಶ್ಯ ಕ್ಯಾಮರಾದಲ್ಲಿ ಸೆರೆ…

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿಯ ಸುತ್ತಮುತ್ತ ಚಿರತೆಗಳು ಓಡಾಡುತ್ತಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮೊದಲೆಲ್ಲ ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪದೇಪದೇ ಕಾಣಿಸಿಕೊಳ್ಳುತ್ತಿವೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಸುಗಾವಿ ಸಮೀಪದ ಓಣೀಕೇರಿ ಹೈಸ್ಕೂಲ್‌ ಬಳಿ ಹಾಗೂ ಸಮೀಪದ ಬಿದ್ರಳ್ಳಿ ಸೇತುವೆ ಹಾಗೂ ದೇವಸ್ಥಾನದ ಬಳಿ ಒಂದೇ ದಿನ … Continued

ವೀಡಿಯೊ…| ಶಿರೂರು ಗುಡ್ಡ ಕುಸಿತದ ದುರಂತ ; 71 ದಿನಗಳ ಬಳಿಕ ನಾಪತ್ತೆಯಾಗಿದ್ದ ಲಾರಿ-ಚಾಲಕನ ಮೃತದೇಹ ಪತ್ತೆ

ಕಾರವಾರ : ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಲಾರಿಯಲ್ಲಿ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈವರೆಗೆ ಒಂಬತ್ತು ಮೃತದೇಹ ಪತ್ತೆಯಾದಂತಾಗಿದೆ. ನಿವೃತ್ತ ಸೇನಾಧಿಕಾರಿ ಇಂದ್ರಬಾಲನ್ ಅವರು ನೀಡಿದ್ದ ನಿರ್ದೇಶನದಂತೆ ಶಿರೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಲಕ್ಷ್ಮಣ ನಾಯ್ಕ … Continued

ಕಾರವಾರ : ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಉದ್ಯಮಿಯ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣದಲ್ಲಿ ಉದ್ಯಮಿಯೊಬ್ಬರ ಬರ್ಬರ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ವಿನಾಯಕ ನಾಯ್ಕ (54) ಎಂಬವರು ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಉದ್ಯಮಿ ವಿನಾಯಕ ಸಾವಿಗೀಡಾಗಿದ್ದು, ಅವರ ಪತ್ನಿ ಗಂಭೀರಗಾಯಗೊಂಡಿದ್ದಾರೆ … Continued

ಕುಮಟಾ | ಲಾರಿಯಲ್ಲಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ ; ನಾಲ್ವರ ಬಂಧನ

ಕುಮಟಾ : ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 27 ಕೋಣಗಳನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಪಿಎಂಸಿ ಬಳಿ ರಕ್ಷಣೆ ಮಾಡಿರುವ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ … Continued

ಕಾರವಾರ | ಗಣೇಶ ಚತುರ್ಥಿ ಖರ್ಚಿನ ವಿಚಾರವಾಗಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ…!

ಕಾರವಾರ : ಮನೆಯಲ್ಲಿ ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಜಗಳ ಕೊಲೆಯಲ್ಲಿ ಮುಕ್ತಾಯವಾದ ಘಟನೆ ಜಿಲ್ಲೆಯ ಕಾರವಾರದ ಸಾಯಿಕಟ್ಟಾ ಬಿಂದು ಮಾಧವ ದೇವಸ್ಥಾನದ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸಂದೇಶ ಪ್ರಭಾಕರ ಬೋರ್ಕರ್ ಎಂದು ಗುರುತಿಸಲಾಗಿದೆ. ಮನೀಶ್ ಕಿರಣ ಬೋರ್ಕರ್ ಎಂಬಾತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸಂದೇಶ … Continued

ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued