ವಿಪರೀತ ಮಳೆ : ಇಂದು (ಆಗಸ್ಟ್‌ 2) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶುಕ್ರವಾರ (ಆಗಸ್ಟ್‌ 2) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯು ಭಾರಿ ಮಳೆಯಾಗುವ ಮೆನ್ನೆಚ್ಚರಿಕೆ ನೀಡಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕಾರವಾರ, … Continued

ಲಿಂಗನಮಕ್ಕಿ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಶಿವಮೊಗ್ಗ: ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಅತಿದೊಡ್ಡ ಜಲಾಶಯವಾದ ಲಿಂಗನಮಕ್ಕಿ ಅಣೆಕಟ್ಟು ಭರ್ತಿಯಾಗುತ್ತಿದ್ದು, ಗುರುವಾರ 3 ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. ಅಣೆಕಟ್ಟಿನಲ್ಲಿ 1,814 ಅಡಿ ನೀರು ಸಂಗ್ರಹವಾಗಿದೆ. ಹೀಗಾಗಿ … Continued

ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ ಆರು ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಜೋಯೊಡಾ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ … Continued

ಮಳೆ : ಇಂದು (ಜುಲೈ 31)ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಇಂದು ಬುಧವಾರ (ಜುಲೈ 31) ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ … Continued

ಶಿರೂರು ಗುಡ್ಡ ಕುಸಿತ ದುರಂತ : 13ನೇ ದಿನವೂ ಸಿಗದ ನಾಪತ್ತೆಯಾದವರ ಸುಳಿವು ; ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಸತತ 13 ದಿನಗಳ ಕಾರ್ಚಾರಣೆ ನಡೆದರೂ ಕೇರಳ ಲಾರಿ ಚಾಲಕ ಅರ್ಜುನ್ ಸೇರಿದಂತೆ ನಾಪತ್ತೆಯಾಗಿರುವ ಮೂವರು ಮತ್ತು ಲಾರಿ ಪತ್ತೆಯಾಗಿಲ್ಲ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ನದಿಯೊಳಗೆ ಹೋಗಲು ಸ್ಕೂಬಾ ಡೈ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದ್ಯಕ್ಕೆ ಶೋಧ ಕಾರ್ಯಚರಣೆಯನ್ನು … Continued

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ, ಉಳುವರೆಗೆ ಸಂಸದ ಕಾಗೇರಿ ಭೇಟಿ : ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ ಮತ್ತು ಘಟನೆಯಿಂದಾಗಿ ಹಾನಿ ಸಂಭವಿಸಿದ ಉಳುವರೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ರಕ್ಷಣಾ ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರೊಂದಿಗೆ ಚರ್ಚೆ ನಡೆಸಿದ ಸಂಸದರು ದುರ್ಘಟನೆಯಲ್ಲಿ ನಾಪತ್ತೆ ಆಗಿರುವ ಸ್ಥಳೀಯ … Continued

ಶಿರೂರು ಗುಡ್ಡ ಕುಸಿತ | ನದಿಯಲ್ಲಿ ಟ್ರಕ್ ಇರುವಿಕೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ ತಜ್ಞ ಕಂಪನಿ; ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಆಗಮನ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರುಬಳಿ ಗುಡ್ಡ ಕುಸಿತದ ದುರಂತದಲ್ಲಿ ಗಂಗಾವಳಿ ನದಿ ನೀರಿನಲ್ಲಿ ಮಣ್ಣಿನ ಅಡಿ ಸಿಲುಕಿರುವ ಕೇರಳದ ಲಾರಿ, ಮತ್ತಿತರ ವಾಹನಗಳು ಮತ್ತು ನಾಪತ್ತೆಯಾದವರ ಮೂವರ ಪತ್ತೆಗೆ ನದಿ ನೀರಿನಲ್ಲಿ ಶೋಧ ಕಾರ್ಯಾಚರಣೆ 12 ನೇ ದಿನವೂ ಮುಂದುವರಿದಿದೆ. ಪತ್ತೆಗಾಗಿ ದೆಹಲಿಯ ಕ್ವಿಕ್‌ಪೇ ಪ್ರೈವೇಟ್ ಲಿಮಿಟೆಡ್‌ ನಡೆಸಿದ ದ್ರೋಣ್‌ … Continued

ಮಳೆ: ಇಂದು (ಜುಲೈ 27) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 10 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಶನಿವಾರ (ಜುಲೈ 27) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರ, ದಾಂಡೇಲಿ, ಜೋಯಿಡಾ, ಶಿರಸಿ, ಸಿದ್ದಾಪುರ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲೆಗಳು, … Continued

ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಪ್ರಾಕೃತಿಕ ವಿಕೋಪದಿಂದ ಒಂಬತ್ತು ಮಂದಿ ಸಾವಿಗೀಡಾಗಿದ್ದರೂ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ ಬುಧವಾರ ರಾಜ್ಯಸಭೆಯಲ್ಲಿ ಕಿಡಿಕಾರಿದರು. ರಾಜ್ಯ ಸರ್ಕಾರ ನಿರಾಸಕ್ತಿ ತೋರುತ್ತಿದೆ ಎಂದು ಆರೋಪಿಸಿದ ಮಾಜಿ ಪ್ರಧಾನಿ, ಗೌಡರ ಪುತ್ರ ಕೇಂದ್ರ ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಭೂಕುಸಿತ … Continued

ವೀಡಿಯೊ | ಶಿರೂರು ಗುಡ್ಡ ಕುಸಿತ ದುರಂತ : ರಾಷ್ಟ್ರೀಯ ಡಿಟೆಕ್ಟರ್ ಏಜನ್ಸಿಯ ತಜ್ಞರಿಂದ ಕಾರ್ಯಾಚರಣೆ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ದೆಹಲಿ ಹಾಗೂ ಬೆಂಗಳೂರಿನಿಂದ ಬಂದ ರಾಷ್ಟ್ರೀಯ ಡಿಟೆಕ್ಟರ್ ಏಜನ್ಸಿಯ ತಜ್ಞರು ಗುರುವಾರ (ಜುಲೈ 25) ಕಾರ್ಯಾಚರಣೆ ಆರಂಭ ಮಾಡಿದ್ದಾರೆ. ಕೇರಳದ ಲಾರಿ ಇರುವಿಕೆ ಬಗ್ಗೆ ಮಧ್ಯಾಹ್ನದ ವರೆಗೆ ಅವರಿಗೆ ಯಾವುದೇ ನಿಖರ ಕುರುಹು ಸಿಕ್ಕಿಲ್ಲ. ಅತಿ ಹೆಚ್ಚಿನ ಸಾಮರ್ಥ್ಯದ ಡ್ರೋಣ್ … Continued