ಶಿರೂರು ಗುಡ್ಡ ಕುಸಿತ ಪ್ರಕರಣ: ಹೈಕೋರ್ಟ್‌ ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಸಲ್ಲಿಕೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದ್ದವರ ಪೈಕಿ ಎಂಟು ಜನರ ಶವ ಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಕಾರ್ಯಾಚರಣೆ ತ್ವರಿತವಾಗಿ ಸಾಗಿದೆ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್‌ಗೆ ಬುಧವಾರ ತಿಳಿಸಿದೆ. ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ … Continued

ಭಾರಿ ಮಳೆ: ಇಂದು (ಜುಲೈ 25) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಗುರುವಾರ (ಜುಲೈ 25) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಎಲ್ಲಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ  ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ : ನಾಪತ್ತೆಯಾಗಿದ್ದ ಟ್ರಕ್ ನದಿಯೊಳಗಿರುವ ಬಗ್ಗೆ ಸಿಕ್ಕ ಸುಳಿವು ; ಸಚಿವರಿಂದ ಟ್ವೀಟ್‌

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಇನ್ನೂ ನಾಪತ್ತೆಯಾಗಿರುವ ಇಬ್ಬರ ಶೋಧಕ್ಕೆ ಸೇನೆ ಮತ್ತು ಎನ್.ಡಿ.ಆರ್ ಎಫ್ ತಂಡ ಬುಧವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭ ಮಾಡಿದ್ದು, ಇದರ ಮಧ್ಯೆಯೇ ಟ್ರಕ್  ಒಂದು ಗಂಗಾವಳಿ ನದಿ ನೀರಿನಲ್ಲಿ ಮುಳುಗಿರುವ ಸಾಧ್ಯತೆಯ ಸುಳಿವು ಸಿಕ್ಕಿದೆ. ಈ ಬಗ್ಗೆ ಕಂದಾಯ … Continued

ಯಲ್ಲಾಪುರ | ಗಾಳಿಮಳೆ ; ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ಸಾವು

ಯಲ್ಲಾಪುರ: ಸ್ಕೂಟರ್‌ ಸವಾರನ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾಳಕೊಪ್ಪ ಶಾಲೆಯ ಎದುರು ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಗುರುತಿಸಲಾಗಿದೆ. ಈತ ಮನೆಯಿಂದ ತನ್ನ ಸ್ಕೂಟರಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ಆತನ … Continued

ಅಂಕೋಲಾ | ಶಿರೂರು ಗುಡ್ಡ ಕುಸಿತದ ದುರಂತ ; ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆ : ಮೃತರ ಸಂಖ್ಯೆ 8ಕ್ಕೆ ಏರಿಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಕಣ್ಮರೆಯಾಗಿದ್ದ ಮಹಿಳೆಯ ಮೃತ ದೇಹ ಗಂಗಾವಳಿ ಬಳಿ ನದಿ ತೀರದಲ್ಲಿ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗಂಗೆಕೊಳ್ಳದಲ್ಲಿ ಉಳುವರೆ ನಿವಾಸಿ ಸಣ್ಣಿ ಗೌಡ ಎಂಬವರ ಮೃತದೇಹ ಮಂಗಳವಾರ ನಸುಕಿನ ಜಾವ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಜುಲೈ 16 … Continued

ಉತ್ತರ ಕನ್ನಡ : ಇಂದು (ಜುಲೈ 22) ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸೋಮವಾರ (ಜುಲೈ 22) ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, … Continued

ವೀಡಿಯೊ..| ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಅಂಕೋಲಾ : ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಭಾರಿ ದುರಂತ ಸಂಭವಿಸಿದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಪ್ರದೇಶಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಅವರು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎಸ್‌ಡಿಆರ್‌ಎಫ್‌ (SDRF) ಹಾಗೂ ಎನ್‌ಡಿಆರ್‌ಎಫ್‌ (NDRF) ಜೊತೆ ಚರ್ಚಿಸಿದರು. … Continued

ಅಂಕೋಲಾ ; ಶಿರೂರು ಗುಡ್ಡ ಕುಸಿತದ ಸ್ಥಳದಲ್ಲಿ ಬೆಂಜ್ ಲಾರಿ, ಚಾಲಕನಿಗಾಗಿ ಹುಡುಕಾಟ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಬೆಂಜ್ ಲಾರಿ ಮತ್ತು ಕೇರಳ ಕೋಝೀಕ್ಕೋಡ್ ನ ಚಾಲಕ ಅರ್ಜುನ್ ಪತ್ತೆಗಾಗಿ ಬಾಂಬ್ ನಿಷ್ಕ್ರೀಯ ಮೆಟಲ್ ಡಿಟೆಕ್ಟರ್‌ ಮೂಲಕ ಪತ್ತೆ ಕಾರ್ಯ ನಡೆದಿದೆ. ನೌಕಾ ಪಡೆ ಅಧಿಕಾರಿಗಳು , ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ತಂಡ , ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ … Continued

ನಾಳೆ ಅಂಕೋಲಾಕ್ಕೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ  ದುರಂತ ಸ್ಥಳ ಪರಿಶೀಲಿಸಲು ನಾಳೆ (ಜುಲೈ 21) ಭಾನುವಾರ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಹಾಗೂ ಉತ್ತರ ಕನ್ನಡ ಜಿಲ್ಲೆಯ … Continued

ವೀಡಿಯೊ..| ಉತ್ತರ ಕನ್ನಡ: ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ; ಕುಮಟಾ-ಸಿದ್ದಾಪುರ ರಸ್ತೆ ಬಂದ್‌

ಕುಮಟಾ: ಉತ್ತರ ಕನ್ನಡದಲ್ಲಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶದಲ್ಲಿಂತೂ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಜೊತೆಗೆ ಗುಡ್ಡ ಕುಸಿತದ ಘಟನೆಗಳೂ ವರದಿಯಾಗುತ್ತಿವೆ. ಇದೀಗ ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯಲ್ಲಿ ಉಳ್ಳೂರಮಠ ಕ್ರಾಸ್ ಬಳಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆ ಸಂಚಾರ ಬಂದ್‌ ಆಗಿದೆ ಎಂದು ವರದಿಯಾಗಿದೆ. ಸುಮಾರು ಕಿಲೋಮೀಟರ್‌ಗೂ ಹೆಚ್ಚು ದೂರದಿಂದ ಗುಡ್ಡ … Continued