ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿಗರ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ 40 ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumata) ತಾಲೂಕಿನ ತದಡಿ ಗ್ರಾಮದ ಸಮೀಪ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ … Continued

ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಶನಿವಾರ (ಮೇ 18)ರಂದು ಸಿಡಿಲು ಬಡಿದು ಏಳು ಹಸುಗಳು ಸಾವಿಗೀಡಾಗಿವೆ ಎಂದು ವರದಿಯಾಗಿದೆ. ಶನಿವಾರ 4 ಗಂಟೆಗೆ ಸುಮಾರಿಗೆ ಸುರಿದ ಭಾರಿ ಮಳೆಯ ಸಮಯದಲ್ಲಿ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಸಿಡಿಲು ಬಡಿದು ಬೂರಿಯಾ ಕನ್ನಾ ನಾಯ್ಕ ಎಂಬವರಿಗೆ ಸೇರಿದ 2 … Continued

ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆ ಬಳಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್(Bhimanna Naik) ಹಾಗೂ ಪೌರಾಯುಕ್ತ ಕಾಂತರಾಜ ಸೇರಿದಂತೆ ಹಲವರ ಮೇಲೆ ಜೇನು ದಾಳಿ ಮಾಡಿದೆ ಎಂದು ವರದಿಯಾಗಿದೆ. ಶಿರಸಿ ನಗರಕ್ಕೆ ನೀರು ಪೂರೈಸುವ ತಾಲೂಕಿನ ಕೆಂಗ್ರೆ ಹೊಳೆಯಲ್ಲಿರುವ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ … Continued

ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಶಂಕಿತ ಮಂಗನಕಾಯಿಲೆ (ಕೆಎಫ್‌ಡಿ)ಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಐದು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಸಾವಿನಿಂದ … Continued

ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ದಾಂಡೇಲಿ : ಗಂಡ ಹೆಂಡತಿಯ ಜಗಳದ ಆರು ವರ್ಷದ ಗಂಡು ಮಗುವೊಂದನ್ನು ನಾಲಾಕ್ಕೆ ಬಿಸಾಕಿದ ನಂತರ ಮಗು ಸಾವಿಗೀಡಾದ ಅಮಾನವೀಯ ಘಟನೆ ಶನಿವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಂಪತಿ ಶನಿವಾರ ರಾತ್ರಿ ಜಗಳ‌ ಮಾಡಿಕೊಂಡಿದ್ದಾರೆ. ಜಗಳದಿಂದ ಮಾನಸಿಕವಾಗಿ‌ ನೊಂದ ಮಹಿಳೆ ಆರು ವರ್ಷದ ಮಗು ವಿನೋದ … Continued

ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

ಶಿರಸಿ: ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಶಿರಸಿಯ ದೀಪಕ ದೊಡ್ಡೂರು ಹಾಗೂ ಇವರ ಪಾಲುದಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮೂರು ಕಾರುಗಳಲ್ಲಿ ಬಂದ ಆದಾಯ ತೆರಿಗೆ ಅಧಿಕಾರಿಗಳ ತಂಡ ದೀಪಕ ಅವರ ನಗರದ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 10 ಜನ ಅಧಿಕಾರಿಗಳ ತಂಡ … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ದಾಂಡೇಲಿ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು

ಕಾರವಾರ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಕಾಳಿ ನದಿಯಲ್ಲಿ ನೀರಿಗಿಳಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನು … Continued