ಕಾರವಾರ: ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಕಾರವಾರ:ಅರಬ್ಬಿ ಸಮುದ್ರದ ಅಲೆಗಳ ನಡುವೆ ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ನಲ್ಲಿ ಮೀನು ಬಲೆ ಎಳೆಯುತ್ತಿದ್ದ ಮೀನುಗಾರನೊಬ್ಬ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಮುದ್ರದಲ್ಲಿನ ಲೈಟ್‌ಹೌಸ್ ಸಮೀಪ ನಡೆದಿದೆ. ಮೃತ ಮೀನನುಗಾರನನ್ನು ಕುಮಟಾ ತಾಲೂಕಿನ ಸಸಿಹಿತ್ಲು ಗ್ರಾಮದ ವೆಂಕಟೇಶ ಹರಿಕಂತ್ರ (32) ಎಂದು ಗುರುತಿಸಲಾಗಿದೆ. ಬೋಟ್‌ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾಗ ಮೀನು ಬಲೆ … Continued

ಉತ್ತರ ಕನ್ನಡದ ಮೆಡಿಕಲ್ ಕಾಲೇಜು, ಶ್ರೇಷ್ಠ ಪಂಚಾಯತ ಪ್ರಶಸ್ತಿಗೆ ರಾಮಕೃಷ್ಣ ಹೆಗಡೆ ಹೆಸರು ; ಸಿಎಂ ಶಿವಕುಮಾರ ಘೋಷಣೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೆಡಿಕಲ್ ಕಾಲೇಜಿಗೆ ಮತ್ತು ಬೆಂಗಳೂರಿನ ಮುಖ್ಯ ರಸ್ತೆಗೆ ರಾಮಕೃಷ್ಣ ಹೆಗಡೆ ಅವರ ಹೆಸರ‌ನ್ನು ಇಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪ್ರಕಟಿಸಿದ್ದಾರೆ.  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರೊಂದಿಗೆ ಉದ್ಘಾಟಿಸಿ … Continued

ಯಲ್ಲಾಪುರ : ಸಾರಿಗೆ ಸಂಸ್ಥೆ ಬಸ್-ಮಿನಿ ಬಸ್ ಡಿಕ್ಕಿ : 10 ಮಂದಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟ ಪ್ರದೇಶದ ಕಡಿದಾದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಮಾರು 10 ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಕಡಿದಾದ ತಿರುವಿನಲ್ಲಿ ಅತಿ ವೇಗವಾಗಿ ಬಂದ ಮಿನಿ ಬಸ್ ನಿಯಂತ್ರಣ … Continued

ಶಿರಸಿ ; ಪಡಿತರ ಅಕ್ಕಿ ಅಕ್ರಮ ಸಾಗಾಟ ; ಲಾರಿ ಸಮೇತ 473 ಚೀಲ ಅಕ್ಕಿ ವಶ

ಶಿರಸಿ: ಪಡಿತರ ವ್ಯವಸ್ಥೆಯಡಿ ಜನರಿಗೆ ವಿತರಿಸಬೇಕಾದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ  ಭಾರಿ ಪ್ರಮಾಣದ ಪಡಿತರ ಅಕ್ಕಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನೀಲೇಕಣಿ ಬಳಿ ವಶಪಡಿಸಿಕೊಳ್ಳಲಾಗಿದೆ ಎಂದುವರದಿಯಾಗಿದೆ. ಪಡಿತರ ಅಕ್ಕಿಯ ಅಕ್ರಮ ಸಾಗಾಟದ ಜಾಲದ ವಿರುದ್ಧ ಶಿರಸಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ  ಸಿದ್ದಾಪುರದಿಂದ ಮಹಾರಾಷ್ಟ್ರದ … Continued

ಸಿದ್ದಾಪುರ : ಸಾಹಿತಿ-ಪತ್ರಕರ್ತ ಗಂಗಾಧರ ಕೊಳಗಿಗೆ ಎಂ.ಎಸ್. ಡಿಸೋಜಾ ಸದ್ಭಾವನಾ ಪ್ರಶಸ್ತಿ

ಸಿದ್ದಾಪುರ : ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ದಿವಂಗತ ಎಂ.ಎಸ್. ಡಿಸೋಜಾ ಅವರ ಸ್ಮರಣಾರ್ಥ ಕೊಡಮಾಡುವ 6ನೇ ವರ್ಷದ ‘ಎಂ.ಎಸ್. ಡಿಸೋಜಾ ಉತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ ಹಾಗೂ ಎಂ.ಎಸ್. ಡಿಸೋಜಾ ಸದ್ಭಾವನಾ ಪ್ರಶಸ್ತಿಪ್ರದಾನ ಕಾರ್ಯಕ್ರಮ ಆಗಸ್ಟ್ 30ರಂದು (ಭಾನುವಾರ) ಮಧ್ಯಾಹ್ನ 3 ಗಂಟೆಗೆ ಸಿದ್ದಾಪುರದ ಬಾಲ ಭವನದಲ್ಲಿ ನಡೆಯಲಿದೆ. … Continued

ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ಹೃದಯಾಘಾತದಿಂದ ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪತಿ ಅರೆಸ್ಟ್‌

ಹೊನ್ನಾವರ: ಹೆಂಡತಿಯನ್ನು ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಕತೆ ಕಟ್ಟಿದ್ದ ಗಂಡನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಠಾಣೆ ವ್ಯಾಪ್ತಿಯ ದೊಡ್ಡಗುಂದೆಂಬಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ದೊಡ್ಡಗುಂದ ಗ್ರಾಮದ ಗಣಪತಿ ನಾಯ್ಕ ಬಂಧಿತ ಆರೋಪಿಯಾಗಿದ್ದು, . ಆತನ ಪತ್ನಿ ಮಂಗಲಾ ನಾಯ್ಕ (28) ಕೊಲೆಯಾದ … Continued

ಅಂಕೋಲಾ : ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ

ಕಾರವಾರ: ಈದ್ ಮಿಲಾದ್ ಅಂಗವಾಗಿ ನಡೆದ ಮೆರವಣಿಗೆ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಂಡಿಬಜಾರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಧ್ವಜವನ್ನು ವಶಕ್ಕೆ ಪಡೆದಿದ್ದಾರೆ. ಧ್ವಜ ಪ್ರದರ್ಶಿಸಿದ ಯುವಕನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದು, ಬಳಿಕ ಮೆರವಣಿಗೆ ಶಾಂತಿಯುತವಾಗಿ ನಡೆಯಿತು. ಅಂಕೋಲಾ ಪಟ್ಟಣದ ಬೊಬ್ರುವಾಡದಿಂದ ಆರಂಭಗೊಂಡ … Continued

ಗೋವಾ ಭೂ ಕಬಳಿಕೆ-ಹಣ ಅಕ್ರಮ ವರ್ಗಾವಣೆ ಪ್ರಕರಣ; ಆರೋಪಿಯ ಕಾರವಾರದ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ : ಗೋವಾದ ಬಹುಕೋಟಿ ರೂಪಾಯಿ ಮೌಲ್ಯದ ಭೂ ಕಬಳಿಕೆ ಹಾಗೂ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಕಾರವಾರದ ಕೊಡಿಬಾಗ್‌ನಲ್ಲಿರುವ ಸುಲೈಮಾನ್ ಖಾನ್ ಸಿದ್ದೀಕ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೊಡಿಬಾಗ್‌ನ ಮಿಡ್‌ಮ್ಯಾಕ್ ಆರ್ಕಿಡ್ ಅಪಾರ್ಟ್‌ಮೆಂಟ್‌ನಲ್ಲಿರುವ ಸಿದ್ದೀಕ್ ಅವರ ಮನೆಗೆ ಭೇಟಿ ನೀಡಿದ … Continued

ಕಾರವಾರದಲ್ಲಿ ಕಡಲತೀರದಲ್ಲಿ ಕಡಲಾಮೆ ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡಜಿಲ್ಲೆಯ ಕಾರವಾರ ನಗರದ ಟಾಗೋರ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಪೆಲ್ ವಾರ್ಶಿಪ್ ಮ್ಯೂಸಿಯಂ ಹಿಂಭಾಗದ ಕಡಲತೀರದಲ್ಲಿ ಬುಧವಾರ ಕಡಲಾಮೆ ಪತ್ತೆಯಾಗಿದ್ದು, ಮಾಹಿತಿ ತಿಳಿದ ಅರಣ್ಯ ಇಲಾಖೆ ಹಾಗೂ ಮರೈನ್ ಎಸ್‌ಪಿಎಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಕಡಲಾಮೆ ಕೆಲ ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆಯಿದ್ದು, … Continued

ಕುಮಟಾ : ತದಡಿ ಅಳಿವೆಯಲ್ಲಿ ಎರಡೇ ದಿನದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್‌ ಮುಳುಗಡೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಿದೆ ಎಂದು ವರದಿಯಾಗಿದೆ. ಅದರಲ್ಲಿದ್ದ ನಾಲ್ವರು ಮೀನುಗಾರರು ಪಾರಾಗಿದ್ದಾರೆ. ಎರಡ್ಮೂರು ದಿನಗಳ ಹಿಂದಷ್ಟೇ ಇದೇ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ಬೋಟ್‌ ಮುಳುಗಿತ್ತು. ‘ಲಕ್ಷ್ಮೀ ಕೃಪ’ ಹೆಸರಿನ ಮೀನುಗಾರಿಕಾ ಬೋಟ್‌ ತದಡಿ ಅಳಿವೆಯಲ್ಲಿ ಸಾಗುತ್ತಿದ್ದ ವೇಳೆ ಬಿರುಸಿನ ಅಲೆಗಳಿಗೆ … Continued